ಆಂಧ್ರಪ್ರದೇಶ ವಿರೋಧ ಪಕ್ಷದ ನಾಯಕ, ಟಿಡಿಪಿ ಮುಖ್ಯಸ್ಥ ಎನ್​.ಚಂದ್ರಬಾಬು ನಾಯ್ಡುರಿಗೆ ಕೊರೊನಾ ಸೋಂಕು

ಈಗಾಗಲೇ ಹಲವು ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇನ್ನೊಂದೆಡೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯೂ ಬರುತ್ತಿದೆ. ಆಂಧ್ರಪ್ರದೇಶದಲ್ಲಿ 2024ರಲ್ಲಿ ವಿಧಾನಸಭೆ ಚುನಾವಣೆಯ ನಡೆಯಲಿದೆ.

ಆಂಧ್ರಪ್ರದೇಶ ವಿರೋಧ ಪಕ್ಷದ ನಾಯಕ, ಟಿಡಿಪಿ ಮುಖ್ಯಸ್ಥ ಎನ್​.ಚಂದ್ರಬಾಬು ನಾಯ್ಡುರಿಗೆ ಕೊರೊನಾ ಸೋಂಕು
ಚಂದ್ರಬಾಬು ನಾಯ್ಡು
Follow us
| Updated By: Lakshmi Hegde

Updated on:Jan 18, 2022 | 1:40 PM

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಎನ್​. ಚಂದ್ರಬಾಬು ನಾಯ್ಡು(N.Chandrababu Naidu)  ಅವರಿಗೆ ಕೊರೊನಾ ಸೋಂಕು (Coronavirus) ತಗುಲಿದೆ. ತಮಗೆ ಕೊರೊನಾ ಸೋಂಕು ತಗುಲಿದ್ದು, ಸೌಮ್ಯ ಲಕ್ಷಣಗಳು ಇವೆ ಎಂದು ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ಟ್ವೀಟ್​ ಮಾಡಿರುವ ಚಂದ್ರಬಾಬು ನಾಯ್ಡು, ನನಗೆ ಕೊರೊನಾ ಸೋಂಕು ತಗುಲಿದ್ದು ದೃಢಪಟ್ಟಿದೆ. ನಾನೀಗ ಕ್ವಾರಂಟೈನ್​​ನಲ್ಲಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಟೆಸ್ಟ್​ ಮಾಡಿಸಿಕೊಳ್ಳಿ. ಎಲ್ಲರೂ ಸುರಕ್ಷಿತರಾಗಿರಿ ಮತ್ತು ಟೇಕ್​ ಕೇರ್​ ಎಂದು ಹೇಳಿದ್ದಾರೆ.  

ಈಗಾಗಲೇ ಹಲವು ರಾಜಕಾರಣಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇನ್ನೊಂದೆಡೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯೂ ಬರುತ್ತಿದೆ. ಆಂಧ್ರಪ್ರದೇಶದಲ್ಲಿ 2024ರಲ್ಲಿ ವಿಧಾನಸಭೆ ಚುನಾವಣೆಯ ನಡೆಯಲಿದ್ದು, ಆ ಚುನಾವಣೆಯಲ್ಲಿ ತೆಲುಗು ಸಿನಿಮಾ ನಟ ಪವನ್​ ಕಲ್ಯಾಣ್​ ನೇತೃತ್ವದ ಜನ ಸೇನಾ ಪಾರ್ಟಿಯೊಂದಿಗೆ ತೆಲುಗು ದೇಸಂ ಪಾರ್ಟಿ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ. ಜನಸೇನಾ ಪಾರ್ಟಿಯೊಂದಿಗೆ ಮೈತ್ರಿಗೆ ನನಗೇನೂ ಅಭ್ಯಂತರವಿಲ್ಲ ಎಂದು ಚಂದ್ರಬಾಬು ನಾಯ್ಡು ಕೂಡ ಈಗಾಗಲೇ ಹೇಳಿದ್ದಾರೆ.

ಇನ್ನೊಂದೆಡೆ ಆಂಧ್ರಪ್ರದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಏರಿಕೆಯಾಗುತ್ತಿವೆ. ಸೋಮವಾರ ಒಂದೇ ದಿನ 4108 ಹೊಸ ಸೋಂಕಿತರು ಪತ್ತೆಯಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ  21,10,388ಕ್ಕೆ ಏರಿಕೆಯಾಗಿದೆ. ಸೋಮವಾರ 696 ಮಂದಿ ಕೊರೊನಾದಿಂದ ಚೇತರಿಸಿಕೊಂಡು ಮನೆಗೆ ತೆರಳಿದ್ದಾರೆ. ಆದರೆ 24 ಗಂಟೆಯಲ್ಲಿ ಕೊರೊನಾದಿಂದ ಯಾವುದೇ ಸಾವೂ ಸಂಭವಿಸಿಲ್ಲ.  ಹೀಗಿದ್ದಾಗ್ಯೂ ಆಂಧ್ರದಲ್ಲಿ ಜನವರಿ 30ರ ಹೊತ್ತಿಗೆ ಕೊರೊನಾ ಪ್ರಕರಣಗಳು ಉತ್ತುಂಗಕ್ಕೆ ಏರಬಹುದು ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ‘ಮ್ಯಾಟ್ನಿ’ ಶೂಟಿಂಗ್​ ಸೆಟ್​​ನಲ್ಲಿ ಸತೀಶ್​ ‘ನೀನಾಸಂ’, ರಚಿತಾ ರಾಮ್​; ಇಲ್ಲಿವೆ ಫೋಟೋಗಳು

Published On - 9:29 am, Tue, 18 January 22

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ