AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಧ್ರಪ್ರದೇಶ: ಹೊತ್ತಿ ಉರಿದ ಟಿಡಿಪಿ ಕಚೇರಿ

ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಭಾನುವಾರ ತಡರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ಹಿಂದೆ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ‘ಸೇಡಿನ ರಾಜಕಾರಣ’ ಅಡಗಿದೆ ಎಂದು ಪಕ್ಷ ಆರೋಪಿಸಿದೆ.

ಆಂಧ್ರಪ್ರದೇಶ: ಹೊತ್ತಿ ಉರಿದ ಟಿಡಿಪಿ ಕಚೇರಿ
ಬೆಂಕಿImage Credit source: India Today
ನಯನಾ ರಾಜೀವ್
|

Updated on: Apr 08, 2024 | 2:56 PM

Share

ತೆಲುಗು ದೇಶಂ ಪಕ್ಷದ (ಟಿಡಿಪಿ) ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಭಾನುವಾರ ತಡರಾತ್ರಿ ಆಂಧ್ರಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ಹಿಂದೆ ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ‘ಸೇಡಿನ ರಾಜಕಾರಣ’ ಅಡಗಿದೆ ಎಂದು ಪಕ್ಷ ಆರೋಪಿಸಿದೆ.

ಟಿಡಿಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ಪೆಡಕುರಪಾಡುದಲ್ಲಿ ಸಾರ್ವಜನಿಕ ಸಭೆಯನ್ನು ಮುಗಿಸಿದ ಕೂಡಲೇ ಈ ಘಟನೆ ಸಂಭವಿಸಿದೆ. ಕಚೇರಿ ಸಂಪೂರ್ಣ ಹೊತ್ತಿ ಉರಿಯುತ್ತಿರುವ ವಿಡಿಯೋಗಳು ವೈರಲ್ ಆಗಿವೆ.

ಟಿಡಿಪಿ ಮುಖಂಡ ಮತ್ತು ಪೆದಕೂರಪಾಡು ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಭಾಷ್ಯಂ ಪ್ರವೀಣ್, ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡರು. ಈ ಕೃತ್ಯ ಎಸಗಿದವರನ್ನು ಕೂಡಲೇ ಬಂಧಿಸುವಂತೆ ಕಾನೂನು ಜಾರಿ ಅಧಿಕಾರಿಗಳಿಗೆ ಒತ್ತಾಯಿಸಿದರು.

ಮತ್ತಷ್ಟು ಓದಿ: ಲೋಕಸಭೆ ಚುನಾವಣೆಯಲ್ಲಿ ಆಂಧ್ರಪ್ರದೇಶದಲ್ಲಿ ಟಿಡಿಪಿ, ಜೆಎಸ್‌ಪಿ ಜೊತೆ ಬಿಜೆಪಿ ಸೀಟು ಹಂಚಿಕೆಗೆ ಒಪ್ಪಂದ

ರಾಜಕೀಯ ವಿಧ್ವಂಸಕ ಕೃತ್ಯದ ವಿರುದ್ಧ ಔಪಚಾರಿಕ ದೂರು ದಾಖಲಿಸಲಾಗುವುದು ಎಂದು ಭಾಷ್ಯಂ ಪ್ರವೀಣ್ ತಿಳಿಸಿದ್ದಾರೆ. ದುಷ್ಕರ್ಮಿಗಳನ್ನು ಬಂಧಿಸುವಂತೆ ನಾವು ಪೊಲೀಸರನ್ನು ಒತ್ತಾಯಿಸುತ್ತೇವೆ ಮತ್ತು ನಾವು ದೂರು ನೀಡುತ್ತೇವೆ ಎಂದು ಅವರು ಹೇಳಿದರು.

ಟಿಡಿಪಿ ಹಾಗೂ ವೈಎಸ್​ಆರ್​ಸಿಪಿ ನಡುವಿನ ಮುಖಾಮುಖಿ ಈಗ ಉಲ್ಬಣಗೊಡಿದೆ. ಆಂಧ್ರಪ್ರದೇಶದಲ್ಲಿ ಮೇ 13ರಂದು ಚುನಾವಣೆ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ