Video: ಟೆಕ್ಕಿಯನ್ನು ಪ್ರೀತಿಸಿ ಮದುವೆಯಾಗಿದ್ದ ಟೆಕ್ಕಿ ವರ ಪ್ರಸ್ತದ ಕೋಣೆಯಲ್ಲಿ ಸಾವು, ಕಾರಣವೇನು?
ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈತ ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಸಿರಿಶಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಎರಡು ದಿನಗಳ ಹಿಂದೆ ಸಿರಿಶಾ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದರು.
ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯಲ್ಲಿ (Madanapalli) ದಾರುಣ ಘಟನೆಯೊಂದು ನಡೆದಿದೆ. ಮದುವೆಯಾದ ಎರಡೇ ದಿನದಲ್ಲಿ ವರಮಹಾಶಯ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ಅನ್ನಮಯ್ಯ ಜಿಲ್ಲೆಯ ಮದನಪಲ್ಲಿಯಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೃತನನ್ನು ತುಳಸಿ ಪ್ರಸಾದ್ ಎಂದು ಗುರುತಿಸಲಾಗಿದ್ದು, ಪಾಕಾಲ ಮಂಡಲದ ಪತ್ತಿಪತಿವಾರಿ ಪಲ್ಲಿ ನಿವಾಸಿ ಎಂದು ಗುರುತಿಸಲಾಗಿದೆ.
ಹೈದರಾಬಾದ್‌ನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಈತ ಹೈದರಾಬಾದ್‌ನಲ್ಲಿ (Hyderabad) ಸಾಫ್ಟ್‌ವೇರ್ ಇಂಜಿನಿಯರ್ (software engineer) ಆಗಿರುವ ಸಿರಿಶಾ ಎಂಬಾಕೆಯನ್ನು ಪ್ರೀತಿಸುತ್ತಿದ್ದ. ಎರಡು ದಿನಗಳ ಹಿಂದೆ ಸಿರಿಶಾ ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ವಿವಾಹವಾಗಿದ್ದರು. ಮೊದಲ ರಾತ್ರಿಯೇ (first night) ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮದುವೆಯಾಗಿ ಮೂರು ವರ್ಷ ಕಳೆದರೂ ನಡೆಯದ ಫಸ್ಟ್ ನೈಟ್! ಅನುಮಾನಗೊಂಡು ವಿಚಾರಿಸಿದಾಗ ಬೆಚ್ಚಿಬಿದ್ದ ಪತ್ನಿ!!