Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh Local Body Election Results: ಆಂಧ್ರ ನಗರಾಡಳಿತ ಸಂಸ್ಥೆ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಜಗನ್ ಮೋಹನ್ ರೆಡ್ಡಿಯ ವೈಎಸ್​ಆರ್​ಸಿಪಿ ಪಕ್ಷ

Andhra Pradesh: 75 ಪುರಸಭೆಗಳಲ್ಲಿ ಪೈಕಿ 67 ರಲ್ಲಿ ವೈಎಸ್​ಆರ್​ಸಿಪಿ ಜಯಗಳಿಸಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಈ ಪಕ್ಷ ಇನ್ನೂ ಐದು ಪುರಸಭೆಗಳಲ್ಲಿ ಮತ್ತು 11 ಮಹಾನಗರ ಪಾಲಿಕೆಗಳಲ್ಲಿ ಮುನ್ನಡೆ ಸಾಧಿಸಿದೆ.

Andhra Pradesh Local Body Election Results: ಆಂಧ್ರ ನಗರಾಡಳಿತ ಸಂಸ್ಥೆ ಚುನಾವಣೆ: ಭರ್ಜರಿ ಗೆಲುವು ಸಾಧಿಸಿದ ಜಗನ್ ಮೋಹನ್ ರೆಡ್ಡಿಯ ವೈಎಸ್​ಆರ್​ಸಿಪಿ ಪಕ್ಷ
ಜಗನ್ ಮೋಹನ್ ರೆಡ್ಡಿ
Follow us
ರಶ್ಮಿ ಕಲ್ಲಕಟ್ಟ
|

Updated on:Mar 14, 2021 | 8:56 PM

ಹೈದರಾಬಾದ್: ಆಂಧ್ರಪ್ರದೇಶದ ಆಡಳಿತಾರೂಢ ವೈಎಸ್​ಆರ್​ ಕಾಂಗ್ರೆಸ್ ಪಕ್ಷ (YSRCP) ನಗರಾಡಳಿತ ಸಂಸ್ಥೆ ಚುನಾವಣೆಯಲ್ಲಿ  ಭರ್ಜರಿ ಗೆಲುವು ಸಾಧಿಸಿದೆ. 75 ಪುರಸಭೆಗಳಲ್ಲಿ ಪೈಕಿ 67 ರಲ್ಲಿ ವೈಎಸ್​ಆರ್​ಸಿಪಿ ಜಯಗಳಿಸಿದೆ. ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಈ ಪಕ್ಷ ಇನ್ನೂ ಐದು ಪುರಸಭೆಗಳಲ್ಲಿ ಮತ್ತು 11 ಮಹಾನಗರ ಪಾಲಿಕೆಗಳಲ್ಲಿ ಮುನ್ನಡೆ ಸಾಧಿಸಿದೆ.

ಹೀಗೆ ಮುನ್ನಡೆ ಮುಂದುವರಿದರೆ, ಕಳೆದ ತಿಂಗಳು ಮೂರು ಹಂತಗಳಲ್ಲಿ ಚುನಾವಣೆ ನಡೆದ 75 ಪುರಸಭೆಗಳಲ್ಲಿ 74 ರಲ್ಲಿ ವೈಎಸ್​ಆರ್​ಸಿಪಿ ಜಯಗಳಿಸಬಹುದು. ಅನಂತಪುರ, ಕಡಪ, ಕರ್ನೂಲ್, ಚಿತ್ತೂರ್ , ತಿರುಪತಿ, ಒಂಗೋಲ್, ಗುಂಟೂರು ಪುರಸಭೆಗಳಲ್ಲಿ ವೈಎಸ್‌ಆರ್‌ಸಿಪಿ ಜಯಗಳಿಸಿತ್ತು. ವೈಎಸ್​ಆರ್​ಸಿಪಿ ಉತ್ತಮ ಮುನ್ನಡೆ ಸಾಧಿಸಿರುವ ವಿಜಯವಾಡ ಮತ್ತು ವಿಶಾಖಪಟ್ಟಣಂ ಮಹಾನಗರ ಪಾಲಿಕೆಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು, ಪಕ್ಷ ಉತ್ತಮ ಮುನ್ನಡೆ ಸಾಧಿಸಿದೆ.

11 ಮಹಾನಗರ ಪಾಲಿಕೆಗಳಿಗೆ ಚುನಾವಣೆ ನಡೆದಿದ್ದು, ಹೈಕೋರ್ಟ್ ಆದೇಶದ ಕಾರಣ ಏಲೂರು ಕಾರ್ಪೊರೇಷನ್​ನಲ್ಲಿ ಮತ ಎಣಿಕೆ ಬಾಕಿ ಇದೆ. ತಿರುಪತಿಯ ಹಾಲಿ ಸಂಸದ ಇತ್ತೀಚೆಗೆ ನಿಧನರಾದ ಕಾರಣ ಲೋಕಸಭೆ ಉಪಚುನಾವಣೆಯ ಗೆಲುವು ವೈಎಸ್​ಆರ್​ಸಿಪಿಗೆ ನಿರ್ಣಾಯಕವಾಗಲಿದೆ.

ವೈಎಸ್​ಆರ್​ಸಿಪಿ ವಕ್ತಾರ ಅಂಬಟಿ ರಾಂಬಾಬು ಈ ಬಗ್ಗೆ ಪ್ರತಿಕ್ರಿಯಿಸಿದ್ದು ಈ ಫಲಿತಾಂಶಗಳು ಸರ್ಕಾರದ ಅಭಿವೃದ್ಧಿ ಯೋಜನೆಯ ಮತ್ತು ಸರ್ಕಾರದ ಜನಪ್ರಿಯತೆಯನ್ನು ತೋರಿಸುತ್ತದೆ. ವೈಎಸ್​ಆರ್​ಸಿಪಿ ಆಡಳಿತದ ಎರಡು ವರ್ಷಗಳಲ್ಲಿ ನಡೆದ ಚುನಾವಣೆ ಫಲಿತಾಂಶವು ಮುಖ್ಯಮಂತ್ರಿ ವೈ. ಎಸ್. ಜಗನ್ ಮೋಹನ್ ರೆಡ್ಡಿ ಅವರ ಆಡಳಿತದ ಮಾನದಂಡವನ್ನು ತೋರಿಸುತ್ತದೆ. ಕೊರೊನಾ ಸಾಂಕ್ರಾಮಿಕ ರೋಗದ ಹೊರತಾಗಿಯೂ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ನಗರ ಪ್ರದೇಶಗಳಲ್ಲಿರುವ ಜನರು ವೈಎಸ್​ಆರ್​ಸಿಪಿಸರ್ಕಾರ ನೀತಿಯನ್ನು ಬೆಂಬಲಿಸಿದ್ದು ಭರ್ಜರಿ ಗೆಲುವು ಸಾಧಿಸಲು ಆಶೀರ್ವದಿಸಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ:   Andhra Politics: ಆಂಧ್ರ ಪ್ರದೇಶ ರಾಜಕಾರಣ: ಜಗನ್ ಮತ್ತು ಚುನಾವಣಾ ಆಯೋಗದ ಜಟಾಪಟಿ ನಡುವೆಯೇ ಮುಗಿಯಿತು ಪಂಚಾಯತ್ ಚುನಾವಣೆ

ಅಕ್ರಮ ಆಸ್ತಿ ಪ್ರಕರಣ: ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಜಾರಿ ನಿರ್ದೇಶನಾಲಯ ಕೋರ್ಟ್ ಸಮನ್ಸ್

Published On - 8:56 pm, Sun, 14 March 21

ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಅಪ್ಪಾಜಿಯ ಸಮಾಧಿಗೆ ಪೂಜೆ ಮಾಡಿ, ಶಿವಣ್ಣ ಹೇಳಿದ್ದು ಹೀಗೆ..
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್
ಪಹಲ್ಗಾಮ್​ನಲ್ಲಿ ಉಗ್ರರ ಅಟ್ಟಹಾಸವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಅಭಿಜನ್