ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಮಹಿಳೆಯೊಬ್ಬರು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ವೈಎಸ್​ಆರ್​ ಕಾಂಗ್ರೆಸ್​ ತಮ್ಮ ಭೂಮಿಯನ್ನು ಕಬಳಿಸಿದೆ ಎಂದು ಆರೋಪಿಸಿರುವ ಮಹಿಳೆ ಎತ್ತರದ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದರು, ಪೊಲೀಸರು ಮಧ್ಯಪ್ರವೇಶಿಸಿ ಮಹಿಳೆಯನ್ನು ತಡೆದಿದ್ದಾರೆ.

ಉಪಮುಖ್ಯಮಂತ್ರಿ ಕಚೇರಿ ಎದುರು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
ಆಂಧ್ರಪ್ರದೇಶ ಮಹಿಳೆ
Image Credit source: NewsMeter Telugu

Updated on: Jun 26, 2024 | 8:19 AM

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಕಚೇರಿ ಎದುರು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ಉಪಮುಖ್ಯಮಂತ್ರಿ ಪವನ್​ ಕಲ್ಯಾಣ್(Pawan Kalyan) ಅವರ ಕ್ಯಾಂಪ್ ಕಚೇರಿ ಬಳಿ ಮಹಿಳೆಯೊಬ್ಬರು ತನ್ನ ಜೀವವನ್ನು ಅಂತ್ಯಗೊಳಿಸಲು ನಿರ್ಧರಿಸಿದ್ದರು, ಪೊಲೀಸರು ಕೂಡಲೇ ಮಧ್ಯಪ್ರವೇಶಿಸಿ ಅವರನ್ನು ರಕ್ಷಣೆ ಮಾಡಿದ್ದಾರೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಶ್ರೀಕಾಕುಳಂ ಜಿಲ್ಲೆಯ ನಿವಾಸಿಯಾದ ದುರ್ಗಾದೇವಿ ಕ್ಯಾಂಪ್ ಆಫೀಸ್ ಬಳಿಯಿರುವ ಕಟ್ಟಡವನ್ನು ಏರಿ ಅಲ್ಲಿಂದ ಹಾರಿ ಪ್ರಾಣ ಕಳೆದುಕೊಳ್ಳಲು ಮಹಿಳೆ ನಿರ್ಧರಿಸಿದ್ದಳು.

ಶ್ರೀಕಾಕುಳಂನಲ್ಲಿ ವೈಎಸ್‌ಆರ್‌ಸಿಪಿ ಪಕ್ಷದ ನಾಯಕರ ಒತ್ತುವರಿಯಿಂದ ತನ್ನ ಭೂಮಿಯನ್ನು ಕಳೆದುಕೊಂಡಿದ್ದೇನೆ ಎಂದು ಅವರು ಆರೋಪಿಸಿದ್ದಾರೆ. ಪದೇ ಪದೇ ಮನವಿ ಮಾಡಿದರೂ ಪಕ್ಷದ ಮುಖಂಡರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ವೈಎಸ್‌ಆರ್‌ಸಿಪಿ ನಾಯಕರ ವಿರುದ್ಧ ಭೂಕಬಳಿಕೆ ಪ್ರಕರಣಗಳ ಆರೋಪಗಳ ಕುರಿತ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ ಈ ವಿಷಯ ಬೆಳಕಿಗೆ ಬಂದಿದೆ. ಇತ್ತೀಚೆಗೆ, ಗುಂಟೂರು ಜಿಲ್ಲೆಯಲ್ಲಿ ವೈಎಸ್‌ಆರ್‌ಸಿಪಿ ಪಕ್ಷದ ಕಚೇರಿಯನ್ನು ಕೆಡವಲಾಗಿತ್ತು ವಿಶಾಖಪಟ್ಟಣಂನಲ್ಲಿ ಇನ್ನೂ ಎರಡು ಪಕ್ಷದ ಕಚೇರಿಗಳಿಗೆ ನೋಟಿಸ್ ನೀಡಲಾಗಿತ್ತು.

ಮತ್ತಷ್ಟು ಓದಿ: ತಾನು ಮಾಡಿದ ಪ್ರತಿಜ್ಞೆಯಂತೆ 31 ತಿಂಗಳ ನಂತರ ಆಂಧ್ರ ಸಿಎಂ ಆಗಿಯೇ ವಿಧಾನಸಭೆಗೆ ಬಂದ ಚಂದ್ರಬಾಬು ನಾಯ್ಡು

ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಟಿಡಿಪಿ ಗೆಲುವು ಸಾಧಿಸಿತ್ತು, ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರೆ ಜನಸೇನಾ ಪಕ್ಷದ ಪವನ್ ಕಲ್ಯಾಣ್ ಉಪಮುಖ್ಯಮಂತ್ರಿಯಾಗಿ ಅಧಿಕಾರದ ಗದ್ದುಗೆ ಏರಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us