AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ಏಪ್ರಿಲ್​ನಿಂದ ನೂತನ ರಾಜಧಾನಿ ವೈಜಾಗ್​ನಿಂದ ಕಾರ್ಯ ನಿರ್ವಹಿಸಲಿದೆ ಆಂಧ್ರದ ಜಗನ್ ಮೋಹನ್ ರೆಡ್ಡಿ ಸರ್ಕಾರ

Andhra Pradesh: ಮುಂದಿನ 6 ತಿಂಗಳೊಳಗೆ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್‌ನಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು.

2023ರ ಏಪ್ರಿಲ್​ನಿಂದ ನೂತನ ರಾಜಧಾನಿ ವೈಜಾಗ್​ನಿಂದ ಕಾರ್ಯ ನಿರ್ವಹಿಸಲಿದೆ ಆಂಧ್ರದ ಜಗನ್ ಮೋಹನ್ ರೆಡ್ಡಿ ಸರ್ಕಾರ
ವೈಎಸ್ ಜಗನ್ ಮೋಹನ್ ರೆಡ್ಡಿ
TV9 Web
| Updated By: ಸುಷ್ಮಾ ಚಕ್ರೆ|

Updated on: Nov 29, 2022 | 1:37 PM

Share

ಹೈದರಾಬಾದ್: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ (YS Jagan Mohan Reddy) 2023ರ ಏಪ್ರಿಲ್ ತಿಂಗಳಿನಿಂದ ಕಾರ್ಯನಿರ್ವಾಹಕ ರಾಜಧಾನಿ ವೈಜಾಗ್‌ನಿಂದ (Vizag) ಆಡಳಿತವನ್ನು ಪ್ರಾರಂಭಿಸಲಿದ್ದಾರೆ ಎಂದು ಐಟಿ ಸಚಿವ ಮತ್ತು ವೈಎಸ್‌ಆರ್ ಪಕ್ಷದ ಶಾಸಕ ಗುಡಿವಾಡ ಅಮರನಾಥ್ ಮಾಹಿತಿ ನೀಡಿದ್ದಾರೆ. ಆಂಧ್ರದ ನೂತನ ರಾಜಧಾನಿ ವೈಜಾಗ್ ಕೆಲವು ಸ್ವಾರ್ಥಿಗಳ ನಿರ್ಧಾರವಲ್ಲ. ಅದು ರಾಜ್ಯದ ಎಲ್ಲರ ಆಕಾಂಕ್ಷೆಯಾಗಿದೆ.

ವೈಜಾಗ್‌ನಲ್ಲಿ ನಮಗೆ ಸಾಕಷ್ಟು ಸರ್ಕಾರಿ ಕಚೇರಿಗಳು ಮತ್ತು ಅತಿಥಿ ಗೃಹಗಳಿವೆ. ಹೈಕೋರ್ಟ್ ತನ್ನ ವ್ಯಾಪ್ತಿಯನ್ನು ಮೀರಿ 3 ರಾಜಧಾನಿಗಳ ತೀರ್ಪು ನೀಡಿದೆ. ಅದು ಸರಿಯಾದದ್ದಲ್ಲ ಎಂದು ನಾವು ಹೇಳಿದ್ದೇವೆ. ನಮಗೆ ಸುಪ್ರೀಂ ಕೋರ್ಟ್‌ನಲ್ಲಿ ನಂಬಿಕೆ ಇದೆ ಎಂದು ಐಟಿ ಸಚಿವ ಮತ್ತು ವೈಎಸ್‌ಆರ್ ಪಕ್ಷದ ಶಾಸಕ ಗುಡಿವಾಡ ಅಮರನಾಥ್ ಹೇಳಿದ್ದಾರೆ.

ಮುಂದಿನ 6 ತಿಂಗಳೊಳಗೆ ಅಮರಾವತಿಯನ್ನು ರಾಜಧಾನಿಯಾಗಿ ಅಭಿವೃದ್ಧಿಪಡಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿ ಮಾರ್ಚ್‌ನಲ್ಲಿ ಆಂಧ್ರಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ನ್ಯಾಯಮೂರ್ತಿಗಳಾದ ಕೆ.ಎಂ. ಜೋಸೆಫ್ ಮತ್ತು ಬಿ.ವಿ. ನಾಗರತ್ನ ಅವರ ನ್ಯಾಯಪೀಠವು ಈ ಆದೇಶ ನೀಡಿದೆ. ವೈಎಸ್ ಜಗನ್ ಮೋಹನ್ ರೆಡ್ಡಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಈ ನ್ಯಾಯಪೀಠವು ವಿಚಾರಣೆ ನಡೆಸುತ್ತಿದೆ. ಜನವರಿ 31ರಂದು ಈ ವಿಷಯಕ್ಕೆ ಸಂಬಂಧಿಸಿದ ಕಾನೂನು ಪ್ರಶ್ನೆಗಳನ್ನು ಪರಿಶೀಲಿಸುವುದಾಗಿ ನ್ಯಾಯಾಲಯ ಹೇಳಿತ್ತು. ಆಂಧ್ರಪ್ರದೇಶ ಸರ್ಕಾರದ ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದ ಪ್ರತಿಕ್ರಿಯೆಯನ್ನೂ ಕೇಳಿತ್ತು.

ಇದನ್ನೂ ಓದಿ: Andhra Pradesh: ಕೇರಳದಲ್ಲಿ ಬಸ್ ಪಲ್ಟಿಯಾಗಿ ಆಂಧ್ರಪ್ರದೇಶದ 18 ಶಬರಿಮಲೆ ಯಾತ್ರಿಕರಿಗೆ ಗಾಯ

ಆಂಧ್ರಪ್ರದೇಶ ರಾಜ್ಯದಲ್ಲಿ ರಸ್ತೆ, ಕುಡಿಯುವ ನೀರು, ಒಳಚರಂಡಿ, ವಿದ್ಯುತ್‌ನಂತಹ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಅಮರಾವತಿ ರಾಜಧಾನಿ ಮತ್ತು ಆ ಪ್ರದೇಶದಲ್ಲಿ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ಪ್ರಕ್ರಿಯೆಯನ್ನು 1 ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಆಂಧ್ರಪ್ರದೇಶ ಸರ್ಕಾರ ಮತ್ತು ಆಂಧ್ರಪ್ರದೇಶದ ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು.

ಮಾರ್ಚ್ 3ರಂದು ಅಮರಾವತಿಯನ್ನು ರಾಜ್ಯದ ಏಕೈಕ ರಾಜಧಾನಿಯನ್ನಾಗಿ ಘೋಷಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಆಂಧ್ರಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಆಂಧ್ರಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ಮೇಲ್ಮನವಿಯಲ್ಲಿ, ಅಭಿವೃದ್ಧಿಯ ವಿಕೇಂದ್ರೀಕರಣಕ್ಕಾಗಿ ಮೂರು ರಾಜಧಾನಿಗಳನ್ನು ಸ್ಥಾಪಿಸಲು ಪ್ರಸ್ತಾಪಿಸುತ್ತಿದೆ ಎಂದು ಹೇಳಿತ್ತು.

ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ನೇತೃತ್ವದ ವಿಭಾಗೀಯ ಪೀಠವು ರಾಜ್ಯ ಶಾಸಕಾಂಗವು ರಾಜ್ಯದ ರಾಜಧಾನಿಯ ಬಗ್ಗೆ ಯಾವುದೇ ಶಾಸನವನ್ನು ಮಾಡುವ ಅಧಿಕಾರವನ್ನು ಹೊಂದಿಲ್ಲ ಮತ್ತು ಪ್ರಸ್ತುತ ರಾಜಧಾನಿ ಅಮರಾವತಿಯಿಂದ ಯಾವುದೇ ಕಚೇರಿಯನ್ನು ಸ್ಥಳಾಂತರಿಸದಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ನಿರ್ದೇಶಿಸಿತ್ತು.

ಇದನ್ನೂ ಓದಿ: 6 ತಿಂಗಳಲ್ಲಿ ಅಮರಾವತಿಯನ್ನು ಆಂಧ್ರದ ರಾಜಧಾನಿಯಾಗಿ ಅಭಿವೃದ್ಧಿಪಡಿಸುವ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್​ ತಡೆ

ರಾಜಧಾನಿ ಅಮರಾವತಿಯನ್ನು ಅಭಿವೃದ್ಧಿಪಡಿಸುವ ಕುರಿತು ತನ್ನ ಆದೇಶದ ಅನುಷ್ಠಾನದ ಬಗ್ಗೆ ನಿಯಮಿತವಾಗಿ ತಿಳಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಆಂಧ್ರಪ್ರದೇಶದ ಪ್ರಸ್ತುತ ರಾಜಧಾನಿ ಪ್ರದೇಶವಾದ ಅಮರಾವತಿಯ ರೈತರು ರಾಜ್ಯ ಸರ್ಕಾರವು 3 ರಾಜಧಾನಿಗಳ ರಚನೆಯ ಪ್ರಸ್ತಾಪವನ್ನು ಪ್ರಶ್ನಿಸಿದ್ದರು. ವೈಎಸ್ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ಅಧಿಕಾರದಲ್ಲಿರುವ ಆಂಧ್ರ ಪ್ರದೇಶ ಸರ್ಕಾರವು ರಾಜ್ಯದ ಎಲ್ಲಾ ಭಾಗಗಳಲ್ಲಿ ಅಭಿವೃದ್ಧಿಯನ್ನು ಖಚಿತಪಡಿಸಿಕೊಳ್ಳಲು ವಿವಿಧ ನಗರಗಳಲ್ಲಿ 3 ರಾಜಧಾನಿಗಳನ್ನು ಮಾಡಲು ನಿರ್ಧರಿಸಿತ್ತು. ಆದರೆ, ಹೈಕೋರ್ಟ್‌ನಲ್ಲಿ ವಿವಿಧ ಅರ್ಜಿಗಳನ್ನು ಸಲ್ಲಿಸುವುದರಿಂದ ವಿಶಾಖಪಟ್ಟಣದಲ್ಲಿ ಉದ್ದೇಶಿತ ಆಡಳಿತಾತ್ಮಕ ರಾಜಧಾನಿ, ಕರ್ನೂಲ್‌ನಲ್ಲಿ ನ್ಯಾಯಾಂಗ ರಾಜಧಾನಿ ಮತ್ತು ಅಮರಾವತಿಯಲ್ಲಿ ಶಾಸಕಾಂಗ ರಾಜಧಾನಿಯನ್ನು ಜಾರಿಗೊಳಿಸುವ ರಾಜ್ಯ ಸರ್ಕಾರದ ಯೋಜನೆಯನ್ನು ಸ್ಥಗಿತಗೊಳಿಸಲಾಗಿತ್ತು.

ವಿಶಾಖಪಟ್ಟಣದಲ್ಲಿ ಕಾರ್ಯಾಂಗ ರಾಜಧಾನಿ, ಅಮರಾವತಿಯಲ್ಲಿ ಶಾಸಕಾಂಗ ರಾಜಧಾನಿ ಮತ್ತು ಕರ್ನೂಲ್‌ನಲ್ಲಿ ನ್ಯಾಯಾಂಗ ರಾಜಧಾನಿ ಎಂಬ 3 ರಾಜಧಾನಿಗಳನ್ನು ರೂಪಿಸುವ ಮೂಲಕ ಆಡಳಿತದ ವಿಕೇಂದ್ರೀಕರಣಕ್ಕೆ ಬದ್ಧವಾಗಿದೆ ಎಂದು ಆಂಧ್ರಪ್ರದೇಶ ಸರ್ಕಾರ ಸ್ಪಷ್ಟಪಡಿಸಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
‘ಪವಿತ್ರಾ ಗೌಡ ಶ್ರೀಮಂತೆ ಅಲ್ಲ, ತುಂಬ ಕಷ್ಟ ಇದೆ’: ಲಾಯರ್ ಅಚ್ಚರಿಯ ಹೇಳಿಕೆ
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ನಮಸ್ತೇ ಸದಾ ವತ್ಸಲೇ: ವಿಧಾನಸಭೆಯಲ್ಲಿ RSS ಗೀತೆ ಹಾಡಿದ ಡಿಕೆ ಶಿವಕುಮಾರ್
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?