ಆಂಧ್ರಪ್ರದೇಶ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ, ಗರ್ಭಿಣಿ ಮಾಡಿದ ಮುಖ್ಯ ಶಿಕ್ಷಕ

ವಿದ್ಯಾರ್ಥಿನಿ ಮೇಲೆ ಖಾಸಗಿ ಶಾಲೆ ಶಿಕ್ಷಕ ಅತ್ಯಾಚಾರವೆಸಗಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಆಕೆ ಈಗ ಮೂರು ತಿಂಗಳ ಗರ್ಭಿಣಿ. ಅತ್ಯಾಚಾರದ ಬಗ್ಗೆ ಹೊರಗಡೆ ಯಾರಿಗಾದರೂ ಹೇಳಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಖ್ಯ ಶಿಕ್ಷಕ ಜಯರಾಜು ಬೆದರಿಕೆ ಹಾಕಿದ್ದ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಮೂರು ತಿಂಗಳಿನಿಂದ ಬಾಲಕಿಗೆ ಮುಟ್ಟು ಬಂದಿರಲಿಲ್ಲ. ಗಮನಿಸಿದ ಆಕೆಯ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ಬೆಳಕಿಗೆ ಬಂದಿತು. ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟಿದ್ದು, ಕುಟುಂಬವು ಪೊಲೀಸರನ್ನು ಸಂಪರ್ಕಿಸಿತ್ತು.

ಆಂಧ್ರಪ್ರದೇಶ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ,  ಗರ್ಭಿಣಿ ಮಾಡಿದ ಮುಖ್ಯ ಶಿಕ್ಷಕ
ಶಿಕ್ಷಕ
Image Credit source: India Today

Updated on: Jul 30, 2025 | 12:04 PM

ಆಂಧ್ರಪ್ರದೇಶ, ಜುಲೈ 30: ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ. ಸುಮಾರು ನಾಲ್ಕು ತಿಂಗಳ ಹಿಂದೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿತ್ತು. ಅತ್ಯಾಚಾರದ ಬಗ್ಗೆ ಹೊರಗಡೆ ಯಾರಿಗಾದರೂ ಹೇಳಿದರೆ ಕೆಟ್ಟ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಮುಖ್ಯ ಶಿಕ್ಷಕ ಜಯರಾಜು ಬೆದರಿಕೆ ಹಾಕಿದ್ದ ಎಂದು ವಿದ್ಯಾರ್ಥಿನಿ ತಿಳಿಸಿದ್ದಾಳೆ. ಮೂರು ತಿಂಗಳಿನಿಂದ ಬಾಲಕಿಗೆ ಮುಟ್ಟು ಬಂದಿರಲಿಲ್ಲ.

ಗಮನಿಸಿದ ಆಕೆಯ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಾಗ ಈ ಘಟನೆ ಬೆಳಕಿಗೆ ಬಂದಿತು. ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ಬಾಲಕಿ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟಿದ್ದು, ಕುಟುಂಬವು ಪೊಲೀಸರನ್ನು ಸಂಪರ್ಕಿಸಿತ್ತು.

ರಾಯವರಂ ಪೊಲೀಸ್ ಠಾಣೆಯಲ್ಲಿ ಔಪಚಾರಿಕ ದೂರು ದಾಖಲಾಗಿದೆ. ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಲಾಗಿದ್ದು, ಸಂತ್ರಸ್ತೆಗೆ ನ್ಯಾಯ ಒದಗಿಸಲು ಆರೋಪಿ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕಲಬುರಗಿ: ಶಸ್ತ್ರಚಿಕಿತ್ಸೆಗೊಳಗಾಗಿದ್ದ ತಂದೆಯ ಆರೈಕೆಗೆ ಬಂದಿದ್ದ ಬಾಲಕಿ ಮೇಲೆ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಅತ್ಯಾಚಾರ

 

ಮತ್ತೊಂದು ಘಟನೆ
ಮತ್ತೊಂದು ಘಟನೆಯಲ್ಲಿ, ತೆಲಂಗಾಣದ ನಾರಾಯಣಪೇಟೆ ಜಿಲ್ಲೆಯ ಮರಿಕಲ್ ಮಂಡಲದ ವ್ಯಾಪ್ತಿಯ ಹಳ್ಳಿಯಲ್ಲಿ 10 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ಶಾಲೆಯಲ್ಲಿ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ಬಾಲಕಿ ನಾಯಿ ಕಡಿತದ ಘಟನೆಯ ನಂತರ ಇತ್ತೀಚೆಗೆ ಮಕ್ತಲ್‌ನಲ್ಲಿರುವ ಸರ್ಕಾರಿ ಹಾಸ್ಟೆಲ್‌ನಿಂದ ಮನೆಗೆ ಮರಳಿದ್ದಳು.

ಜುಲೈ 25 ರ ಮಧ್ಯಾಹ್ನ, ಆಕೆಯ ತಾಯಿ ದಿನಗೂಲಿ ಕೆಲಸಕ್ಕೆ ಹೋಗಿದ್ದಾಗ, ಆಕೆ ಮನೆಯಲ್ಲಿ ಒಬ್ಬಂಟಿಯಾಗಿ ಓದುತ್ತಿದ್ದಳು. ಆಕೆಯ ತಂದೆ ಕುಡಿದು ಬಂದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಅಪ್ಪಾ, ನನಗೆ ಏನೂ ಮಾಡಬೇಡಿ, ಬೇಡಿಕೊಳ್ಳುತ್ತೇನೆ ಎಂದು ಮಗು ಕೇಳಿಕೊಂಡರೂ, ಆ ವ್ಯಕ್ತಿ ಹಲ್ಲೆಗೆ ಮುಂದಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆಯ ಕಿರುಚಾಟವನ್ನು ಗಮನಿಸಿದ ಸ್ಥಳೀಯರು ಮನೆಗೆ ಓಡಿಬಂದು ಬಾಲಕಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ತಾಯಿಯ ದೂರಿನ ಮೇರೆಗೆ ಪೊಲೀಸರು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಂದೆ ತಲೆಮರೆಸಿಕೊಂಡಿದ್ದಾನೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ