ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತಕ್ಕೆ ಮಾನವ ಲೋಪ ಕಾರಣವೇ?
ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 50ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತಕ್ಕೆ ಮಾನವ ಲೋಪವೇ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿದೆ. ವಿಶಾಖಪಟ್ಟಣಂ- ರಾಯಗಢ ಪ್ಯಾಸೆಂಜರ್ ರೈಲು ಮಾನವ ಲೋಪದಿಂದಾಗಿ ಸಿಗ್ನಲ್ ಮೀರಿದ್ದು, ಇದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಇಸಿಓಆರ್ ಸಿಪಿಆರ್ ಒ ಬಿಸ್ವಜೀತ್ ಸಾಹೂ ಹೇಳಿದ್ದಾರೆ.
ಅಮರಾವತಿ, ಅಕ್ಟೋಬರ್ 30: ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 14 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. 50ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತಕ್ಕೆ ಮಾನವ ಲೋಪವೇ ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿದೆ. ವಿಶಾಖಪಟ್ಟಣಂ- ರಾಯಗಢ ಪ್ಯಾಸೆಂಜರ್ ರೈಲು ಮಾನವ ಲೋಪದಿಂದಾಗಿ ಸಿಗ್ನಲ್ ಮೀರಿದ್ದು, ಇದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಇಸಿಓಆರ್ ಸಿಪಿಆರ್ ಒ ಬಿಸ್ವಜೀತ್ ಸಾಹೂ ಹೇಳಿದ್ದಾರೆ.
ನಿಲುಗಡೆಗೆ ಸಿಗ್ನಲ್ ತೋರುತ್ತಿದ್ದರೂ ಅದನ್ನು ಗಮನಿಸದೇ ರೈಲು ಚಲಿಸಿರುವುದು ಅಪಘಾತಕ್ಕೆ ಕಾರಣವಾಗಿದೆ ಇದನ್ನೇ ‘ಸಿಗ್ನಲ್ ಓವರ್ ಶೂಟಿಂಗ್’ ಎನ್ನುತ್ತಾರೆ ಎಂದು ಸಾಹು ತಿಳಿಸಿದ್ದಾರೆ. ಅಪಘಾತದ ಪರಿಣಾಮವಾಗಿ ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್ ರೈಲಿನ ಹಿಂಭಾಗದಿಂದ ಎರಡು ಕೋಚ್‌ಗಳು ಮತ್ತು ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್‌ನ ಲೊಕೊ ಹಳಿತಪ್ಪಿದೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.
ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ವಿಶೇಷ (08504) ವಿಶಾಖಪಟ್ಟಣಂ-ಪಲಾಸ ಪ್ಯಾಸೆಂಜರ್‌ಗೆ (08532) ಡಿಕ್ಕಿ ಹೊಡೆದಿರುವ ಘಟನೆ ಸಂಜೆ 7.10 ರ ಸುಮಾರಿಗೆ ನಡೆದಿದೆ. ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ ರೈಲು, ತಾಂತ್ರಿಕ ದೋಷದಿಂದಾಗಿ ಸಿಗ್ನಲ್ ಗೆ ಕಾಯುತ್ತಿದ್ದಾಗ ವಿಶಾಖಪಟ್ಟಣಂ-ರಾಯಗಢ ಪ್ಯಾಸೆಂಜರ್ ರೈಲು ಹಿಂದಿನಿಂದ ಢಿಕ್ಕಿ ಹೊಡೆದಿದೆ. ಪರಿಣಾಮ ಮೂರು ಬೋಗಿಗಳು ಹಳಿತಪ್ಪಿತ್ತು.
14 ಪ್ರಯಾಣಿಕರಲ್ಲಿ 11 ಮಂದಿಯನ್ನು ಇದುವರೆಗೆ ಗುರುತಿಸಲಾಗಿದೆ ಎಂದು ವಿಜಯನಗರಂ ಜಿಲ್ಲಾಧಿಕಾರಿ ಎಸ್ ನಾಗಲಕ್ಷ್ಮಿ ತಿಳಿಸಿದ್ದಾರೆ.
ಮತ್ತಷ್ಟು ಓದಿ: Train Accident: ಆಂಧ್ರಪ್ರದೇಶದಲ್ಲಿ ಎರಡು ರೈಲುಗಳ ನಡುವೆ ಡಿಕ್ಕಿ; ಆರು ಪ್ರಯಾಣಿಕರು ದುರ್ಮರಣ
ರೈಲ್ವೆ ಅಧಿಕಾರಿಗಳ ಪ್ರಕಾರ, ಮೃತರಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಲೊಕೊ ಪೈಲಟ್ ಮತ್ತು ಸಹಾಯಕ ಲೊಕೊ ಪೈಲಟ್ ಸೇರಿದ್ದಾರೆ. ಸಿಗ್ನಲ್ ಕೆಂಪು ಬಣ್ಣದಲ್ಲಿದ್ದರೂ ವಿಶಾಖಪಟ್ಟಣಂ ರೈಲು ನಿಲ್ಲದ ಕಾರಣ ಮಾನವ ದೋಷದಿಂದ ಈ ಘಟನೆ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಗೊಂಡವರಲ್ಲಿ 32 ಮಂದಿ ವಿಜಯನಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ .
ಸೋಮವಾರ ಮಧ್ಯಾಹ್ನ ಸಿಎಂ ಅಪಘಾತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲಿದ್ದಾರೆ. ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತನಾಡಿ ಪರಿಸ್ಥಿತಿಯನ್ನು ಅವಲೋಕಿಸಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ