Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಚಂದ್ರಬಾಬು ನಾಯ್ಡು, ಮೋಹನ್ ಮಾಝಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ, ಪ್ರಧಾನಿ ಮೋದಿ ಭಾಗಿ

ಇಂದು ಚಂದ್ರಬಾಭು ನಾಯ್ಡು ಹಾಗೂ ಮೋಹನ್ ಚರಣ್​ ಮಾಝಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. ಈ ಬಾರಿ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲ 175 ಸ್ಥಾನಗಳ ಪೈಕಿ 135ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿದೆ.

ಇಂದು ಚಂದ್ರಬಾಬು ನಾಯ್ಡು, ಮೋಹನ್ ಮಾಝಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ, ಪ್ರಧಾನಿ ಮೋದಿ ಭಾಗಿ
ಚಂದ್ರಬಾಬು ನಾಯ್ಡು, ಮೋಹನ್ ಮಾಝಿImage Credit source: India Today
Follow us
ನಯನಾ ರಾಜೀವ್
|

Updated on: Jun 12, 2024 | 9:05 AM

ಇಂದು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು(Chandrababau Naidu) ಹಾಗೂ ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ(Mohan Charan Majhi) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಎರಡೂ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಬೆಳಗ್ಗೆ 11 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದು, ಮೋಹನ್ ಚರಣ್ ಅವರು ಸಂಜೆ 4.45ಕ್ಕೆ ಒಡಿಶಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಬಾರಿ ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲ 175 ಸ್ಥಾನಗಳ ಪೈಕಿ 135ಸ್ಥಾನಗಳನ್ನು ಗೆಲ್ಲುವ ಮೂಲಕ ಟಿಡಿಪಿ ಸಂಪೂರ್ಣ ಬಹುಮತ ಸಾಧಿಸಿದೆ. ಇನ್ನು ಒಡಿಶಾದಲ್ಲಿ ಬಿಜೆಪಿ 147ರಲ್ಲಿ 78 ಸ್ಥಾನಗಳನ್ನು ಗೆಲ್ಲುವ ಮೂಲಕ ಬಹುಮತ ಸಾಧಿಸಿದೆ.

ಇಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಮಾಝಿ ಅವರನ್ನು ಶಾಂಸಕಾಂಗ ಪಕ್ಷದ ನಾಯಕರನ್ನಾಗಿ ಪಕ್ಷವು ಒಂದು ದಿನದ ಮೊದಲು ಆಯ್ಕೆ ಮಾಡಿದೆ. ವಿಶೇಷವೆಂದರೆ ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.

ಮತ್ತಷ್ಟು ಓದಿ: Odisha CM Oath Taking: ಒಡಿಶಾ ಮುಖ್ಯಮಂತ್ರಿಯಾಗಿ ಮೋಹನ್ ಚರಣ್ ಮಾಝಿ ಇಂದು ಪ್ರಮಾಣವಚನ ಸ್ವೀಕಾರ; ಪ್ರಧಾನಿ ಮೋದಿ ಭಾಗಿ

ಪ್ರಧಾನಿ ಮೋದಿ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ನಾಯ್ಡು ಅವರ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ, ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಇದು ನಾಲ್ಕನೇ ಅವಧಿಯಾಗಿದೆ. ಇತ್ತೀಚೆಗೆ ಮುಕ್ತಾಯಗೊಂಡ ರಾಜ್ಯ ಚುನಾವಣೆಯಲ್ಲಿ, ನಾಯ್ಡು ಅವರು ತಮ್ಮ ತೆಲುಗು ದೇಶಂ ಪಕ್ಷವನ್ನು ಪ್ರಮುಖ ಗೆಲುವಿನತ್ತ ಮುನ್ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಇಂದು ಭುವನೇಶ್ವರದಲ್ಲಿ ಮೆಗಾ ರೋಡ್​ ಶೋ ನಡೆಸಲಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಯಲ್ಲಿ ಗೆದ್ದಿರುವ ಕ್ಷೇತ್ರ ವಯನಾಡ್​ಗೆ ಭೇಟಿ ನೀಡಲಿದ್ದಾರೆ. 2019ರಲ್ಲಿ ವಯನಾಡನ್ನು ಪ್ರತಿನಿಧಿಸಿದ್ದ ಗಾಂಧಿ ಈ ಬಾರಿಯೂ ರಾಯ್​ಬರೇಲಿ ಲೋಕಸಭಾ ಕ್ಷೇತ್ರದಿಂದ ಗೆದ್ದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಕೋಟೆನಾಡಲ್ಲಿ ನಾಳೆಯೂ ಅಗಲಿದೆಯಂತೆ ಮಳೆ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್: ವಿಡಿಯೋ
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ರಿಷಬ್ ಶೆಟ್ಟಿ ಶಿವಾಜಿ ಪಾತ್ರ ಮಾಡುವುದು ಬೇಡ: ವಾಟಾಳ್ ನಾಗರಾಜ್
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಮಳೆಗಾಲದಲ್ಲಿ ಬೆಂಗಳೂರು ಹೇಗಿರಲಿದೆ ಅನ್ನೋದಿಕ್ಕೆ ಇದು ಟೀಸರ್ ಮಾತ್ರ!
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ವಕ್ಫ್ ತಿದ್ದುಪಡಿ ಬಿಲ್ ಬಗ್ಗೆ ನನ್ನ ಪಕ್ಷದ ಹಿರಿಯರು ಮಾತಾಡುತ್ತಾರೆ: ಸಚಿವೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!