Anil Deshmukh Resigns: ಅನಿಲ್ ದೇಶ್​ಮುಖ್ ರಾಜೀನಾಮೆ ಅಂಗೀಕಾರ; ಮಹಾರಾಷ್ಟ್ರಕ್ಕೆ ಹೊಸ ಗೃಹ ಸಚಿವ

ದೇಶ್​ಮುಖ್ ರಾಜೀನಾಮೆ ಈಗ ಅಂಗೀಕಾರವಾಗಿದ್ದು, ದಿಲೀಪ್​ ವಾಲ್ಸೆ ಪಾಟೀಲ್​ಗೆ ಮಹಾರಾಷ್ಟ್ರ ಗೃಹ ಸಚಿವ ಸ್ಥಾನದ ಹೊಣೆ ನೀಡಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶಿಫಾರಸಿನ ಮೇರೆಗೆ ದಿಲೀಪ್​ ವಾಲ್ಸೆಗೆ ಗೃಹ ಖಾತೆ ಜವಾಬ್ದಾರಿ ವಹಿಸಲಾಗಿದೆ.

Anil Deshmukh Resigns: ಅನಿಲ್ ದೇಶ್​ಮುಖ್ ರಾಜೀನಾಮೆ ಅಂಗೀಕಾರ; ಮಹಾರಾಷ್ಟ್ರಕ್ಕೆ ಹೊಸ ಗೃಹ ಸಚಿವ
ಅನಿಲ್ ದೇಶ್​ಮುಖ್
Follow us
TV9 Web
| Updated By: ganapathi bhat

Updated on:Apr 05, 2022 | 12:47 PM

ಮುಂಬೈ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆಯನ್ನು ರಾಜ್ಯದ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಭ್ರಷ್ಟಾಚಾರ ಆರೋಪಗಳಿಗೆ ಸಂಬಂಧಿಸಿ ಆರೋಪಿ ಸ್ಥಾನದಲ್ಲಿ ಇರುವ ಅನಿಲ್ ದೇಶ್​ಮುಖ್ ಇಂದು (ಏಪ್ರಿಲ್ 5) ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ದೇಶ್​ಮುಖ್ ರಾಜೀನಾಮೆ ಈಗ ಅಂಗೀಕಾರವಾಗಿದ್ದು, ದಿಲೀಪ್​ ವಾಲ್ಸೆ ಪಾಟೀಲ್​ಗೆ ಮಹಾರಾಷ್ಟ್ರ ಗೃಹ ಸಚಿವ ಸ್ಥಾನದ ಹೊಣೆ ನೀಡಲಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶಿಫಾರಸಿನ ಮೇರೆಗೆ ದಿಲೀಪ್​ ವಾಲ್ಸೆಗೆ ಗೃಹ ಖಾತೆ ಜವಾಬ್ದಾರಿ ವಹಿಸಲಾಗಿದೆ.

ಸದ್ಯ ಅಮಾನತು ಆಗಿರುವ ಮುಂಬೈ ಮಾಜಿ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಳಿ ಪ್ರತೀ ತಿಂಗಳು, ನಗರದ ಬಾರ್, ಪಬ್, ರೆಸ್ಟೋರೆಂಟ್​ಗಳಿಂದ ₹ 100 ಕೋಟಿ ವಸೂಲಿ ಮಾಡುವಂತೆ ಒತ್ತಡ ಹೇರಿದ ಆರೋಪ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ತನಿಖೆ ನಡೆಸುವಂತೆ ಬಾಂಬೆ ಹೈ ಕೋರ್ಟ್ ಸಿಬಿಐಗೆ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಎನ್​ಸಿಪಿ ನಾಯಕರೂ ಆಗಿರುವ ಅನಿಲ್ ದೇಶ್​ಮುಖ್ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ದಿಲೀಪ್ ವಾಲ್ಸೆ ಪಾಟೀಲ್ ಯಾರು? ಪ್ರಸ್ತುತ ಮಹಾರಾಷ್ಟ್ರದ ಅಂಬೆಗಾಂವ್ ಕ್ಷೇತ್ರದಿಂದ, ಎನ್​ಸಿಪಿ ಪಕ್ಷದ ಶಾಸಕರಾಗಿರುವ ದಿಲೀಪ್ ವಾಲ್ಸೆ ಪಾಟೀಲ್, 6 ಬಾರಿ ಎಂಎಲ್​ಎ ಸ್ಥಾನ ಪಡೆದ ಹಿರಿಯ, ಅನುಭವಿ ರಾಜಕಾರಣಿ. 1999ರಿಂದ 2009ರ ವರೆಗೆ ವಿವಿಧ ಸಚಿವ ಸ್ಥಾನ ನಿಭಾಯಿಸಿ ಅನುಭವವನ್ನೂ ಹೊಂದಿದ್ದಾರೆ. ಈ ಮೊದಲು, ಹಣಕಾಸು, ಇಂಧನ, ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿದ್ದವರು. ವಾಲ್ಸೆ, ಎನ್​ಸಿಪಿ ನಾಯಕ ಹಾಗೂ ಮಹಾರಾಷ್ಟ್ರದ ಪ್ರಭಾವಿ ರಾಜಕಾರಣಿ ಶರದ್ ಪವಾರ್​ಗೆ ಆಪ್ತರೂ ಹೌದು. ಎನ್​ಸಿಪಿ ಮತ್ತು ಶಿವಸೇನಾ ನೇತೃತ್ವದ ಈಗಿನ ಸರ್ಕಾರದಲ್ಲಿ ಅಬಕಾರಿ ಹಾಗೂ ಕಾರ್ಮಿಕ ಸಚಿವರಾಗಿ ಕೆಲಸ ನಿರ್ವಹಿಸುತ್ತಿದ್ದ ದಿಲೀಪ್ ವಾಲ್ಸೆಗೆ ಗೃಹ ಖಾತೆ ಹೆಚ್ಚುವರಿ ಜವಾಬ್ದಾರಿಯಾಗಿ ಒದಗಿದೆ. ದಿಲೀಪ್ ವಾಲ್ಸೆ ಪಾಟೀಲ್ ಮುಂಬೈನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿಯನ್ನು ಪಡೆದಿದ್ದಾರೆ.

DILIP WALSE PATIL

ಮಹಾರಾಷ್ಟ್ರ ನೂತನ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್

ಘಟನೆಯ ಹಿನ್ನೆಲೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಒತ್ತಡ ಆರೋಪಿಸಿ ಪತ್ರ ಬರೆದಿದ್ದ ಪರಮ್​ವೀರ್ ಸಿಂಗ್ ಪ್ರಕರಣ ಸಿಬಿಐ ಮೆಟ್ಟಿಲೇರಿತ್ತು. 15 ದಿನದ ಒಳಗೆ ಪ್ರಾಥಮಿಕ ತನಿಖೆ ನಡೆಸಿ ವರದಿ ನಿಡುವಂತೆ ಸಿಬಿಐಗೆ ಬಾಂಬೆ ಹೈಕೋರ್ಟ್ ಸೂಚನೆ ನೀಡಿದೆ. ಈ ಹಿಂದೆ ನಡೆದಿದ್ದ ವಿಚಾರಣೆಯಲ್ಲಿ ಇನ್ನೂ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ ಎಫ್​ಐಆರ್ ದಾಖಲಿಸಿಲ್ಲ ಎಂದು ಪ್ರಶ್ನಿಸಿತ್ತು.

ಕೆಲ ದಿನಗಳ ಹಿಂದೆ ಮುಕೇಶ್ ಅಂಬಾನಿ ಮನೆ ಮುಂದೆ ಸ್ಪೋಟಕ ಹೊತ್ತಿದ್ದ ಕಾರು ಪತ್ತೆ ಪ್ರಕರಣ ರೋಚಕ ತಿರುವು ಪಡೆದಿತ್ತು. ಸಸ್ಪೆಂಡ್ ಆಗಿರುವ ಎಎಸ್ಐ​ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್, ಬಾರ್ ಮತ್ತು ರೆಸ್ಟೊರೆಂಟ್​​ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್​ವೀರ್ ಸಿಂಗ್ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಇಂದು ಪತ್ರ ಬರೆದಿದ್ದರು. ಈ ಗಂಭೀರ ಆರೋಪದಿಂದ ಮಹಾರಾಷ್ಟ್ರ ಶಿವಸೇನೆ-ಎನ್​ಸಿಪಿ ಮೈತ್ರಿಕೂಟದ ಸರ್ಕಾರಕ್ಕೆ ಭಾರೀ ಮುಖಭಂಗವಾಗಿತ್ತು.

ಇದನ್ನೂ ಓದಿ: Anil Deshmukh Resigns: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಸೂಚನೆ; ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ರಾಜೀನಾಮೆ

ಇದನ್ನೂ ಓದಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​ಮುಖ್ ವಿರುದ್ಧ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ನಡೆಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

Published On - 9:45 pm, Mon, 5 April 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್