Anna Hazare: ಫೆ. 14ರಿಂದ ಅಣ್ಣಾ ಹಜಾರೆಯಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ; ಕಾರಣ ಇಲ್ಲಿದೆ
ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.
ನವದೆಹಲಿ: ಮಹಾರಾಷ್ಟ್ರ ರಾಜ್ಯ ಸರ್ಕಾರ ಸೂಪರ್ ಮಾರ್ಕೆಟ್, ದಿನಸಿ ಅಂಗಡಿಗಳಲ್ಲಿ ವೈನ್ ಮಾರಾಟಕ್ಕೆ ಅವಕಾಶ ನೀಡಿರುವುದನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ (Hunger Strike) ನಡೆಸಲಿದ್ದಾರೆ. ಮಾಲ್ಗಳಲ್ಲಿ ವೈನ್ ಮಾರಾಟದ ನೀತಿಯನ್ನು ವಿರೋಧಿಸಿ ಅಣ್ಣಾ ಹಜಾರೆ ಹೋರಾಟ ನಡೆಸಲು ನಿರ್ಧಾರ ಮಾಡಿದ್ದಾರೆ. ಈ ಕುರಿತು ಈ ಹಿಂದೆ ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸುವ ನಿರ್ಧಾರವನ್ನು ತಿಳಿಸಿದ್ದಾರೆ.
ಸೂಪರ್ ಮಾರ್ಕೆಟ್ ಮತ್ತು ವಾಕ್-ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡುವ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಫೆಬ್ರವರಿ 14ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ. ಕಳೆದ ವಾರ ಮಹಾರಾಷ್ಟ್ರ ಸರ್ಕಾರವು ರೈತರಿಗೆ ಹೆಚ್ಚುವರಿ ಆದಾಯವನ್ನು ಒದಗಿಸುವ ಹಣ್ಣು ಆಧಾರಿತ ವೈನ್‌ಗಳಿಗೆ ಉತ್ತೇಜನ ನೀಡಲು ನಿರ್ಧರಿಸಿದೆ ಎಂದು ಘೋಷಿಸಿತ್ತು.
‘ಮಹಾರಾಷ್ಟ್ರದಾದ್ಯಂತ ಕಾರ್ಮಿಕರು ಮತ್ತು ಜನರ ಭಾವನೆಗಳನ್ನು ಪರಿಗಣಿಸಿ ವೈನ್ ಮಾರಾಟ ಮಾಡುವ ನಿರ್ಧಾರವನ್ನು ಮಹಾರಾಷ್ಟ್ರ ಸರ್ಕಾರ ಹಿಂಪಡೆಯದಿದ್ದರೆ ಆಂದೋಲನ ನಡೆಸಬೇಕಾಗುತ್ತದೆ. ಫೆ.14ರಿಂದ ರಾಲೇಗಾನ್ ಸಿದ್ಧಿಯಲ್ಲಿರುವ ಯಾದವಬಾಬಾ ದೇವಸ್ಥಾನದ ಬಳಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಲಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಮಹಾರಾಷ್ಟ್ರ ರಾಜ್ಯದ ಹೆಚ್ಚುತ್ತಿರುವ ಆದಾಯ ಮತ್ತು ವೈನ್ ಬೆಳೆಗಾರರು ಮತ್ತು ಮಾರಾಟಗಾರರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆದರೆ ಈ ನಿರ್ಧಾರವು ಚಿಕ್ಕ ಮಕ್ಕಳು ಹಾಗೂ ಯುವಜನರಿಗೆ ಮದ್ಯವ್ಯಸನಿಯಾಗಲು ಕಾರಣವಾಗಬಹುದು ಎಂದು ಪತ್ರದಲ್ಲಿ ಹೇಳಲಾಗಿದೆ.
ಈ ಕುರಿತು ಮುಖ್ಯಮಂತ್ರಿಗಳಿಗೆ ಈಗಾಗಲೇ ಎರಡು ‘ಜ್ಞಾಪನಾ ಪತ್ರ’ಗಳನ್ನು ಕಳುಹಿಸಿದ್ದು ಇನ್ನೂ ಉತ್ತರ ಬಂದಿಲ್ಲ ಎಂದು ಅಣ್ಣಾ ಹಜಾರೆ ಹೇಳಿದ್ದಾರೆ. ಮಹಾರಾಷ್ಟ್ರದ ವಿವಿಧ ಸಾಮಾಜಿಕ ಸಂಘಟನೆಗಳ ಸಮಾನ ಮನಸ್ಕ ಕಾರ್ಯಕರ್ತರ ಸಭೆಯನ್ನು ಶೀಘ್ರದಲ್ಲೇ ರಾಲೇಗಾನ್ ಸಿದ್ಧಿಯಲ್ಲಿ ನಡೆಸಲಾಗುವುದು ಎಂದೂ ಹಜಾರೆ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ವೈನ್ ಮದ್ಯವಲ್ಲ; ಸೂಪರ್ ಮಾರ್ಕೆಟ್ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿದ ಸರ್ಕಾರದ ನಡೆಗೆ ಸಂಜಯ್ ರಾವತ್ ಸಮರ್ಥನೆ
ವೈನ್ ನೀತಿ ವಿರುದ್ಧ ಉಪವಾಸ ಕೈಗೊಳ್ಳುವುದಾಗಿ ಮಹಾರಾಷ್ಟ್ರ ಸಿಎಂಗೆ ಎಚ್ಚರಿಕೆ ಪತ್ರ ಬರೆದ ಅಣ್ಣಾ ಹಜಾರೆ