BJP ಮುಖಂಡರಿಂದ ಅಣ್ಣಾ ಹಜಾರೆ ಮನವೊಲಿಕೆ: ಉದ್ದೇಶಿತ ಪ್ರತಿಭಟನೆ ವಾಪಸ್ ಪಡೆದ ಸಾಮಾಜಿಕ ಹೋರಾಟಗಾರ
ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.
ಮುಂಬೈ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಧರಣಿ ನಡೆಸಲು ಮುಂದಾಗಿದ್ದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಇದೀಗ ತಮ್ಮ ಪ್ರತಿಭಟನೆ ವಾಪಸ್ ಪಡೆದಿದ್ದಾರೆ.
ಜ.30ರಿಂದ ಧರಣಿ ನಡೆಸಲು ಅಣ್ಣಾ ಹಜಾರೆ ನಿರ್ಧರಿಸಿದ್ರು. ಆದರೆ ಇದೀಗ, ಅಣ್ಣಾ ಹಜಾರೆ ತಮ್ಮ ಉದ್ದೇಶಿತ ಪ್ರತಿಭಟನೆಯನ್ನು ವಾಪಸ್ ಪಡೆದಿದ್ದಾರೆ.
ಅಣ್ಣಾ ಮಹಾರಾಷ್ಟ್ರದ ರಾಲೇಗಾಂವ್ ಸಿದ್ಧಿಯಲ್ಲಿ ಧರಣಿ ನಡೆಸಲು ನಿರ್ಧಾರ ಕೈಗೊಂಡಿದ್ರು. ಆದರೆ, ಮಹಾರಾಷ್ಟ್ರದ ವಿಪಕ್ಷ ನಾಯಕ ದೇವೇಂದ್ರ ಫಡ್ನವಿಸ್ ಹಾಗೂ ಕೇಂದ್ರ ಸಚಿವ ಕೈಲಾಶ್ ಚೌಧರಿ ಅಣ್ಣಾ ಅವರನ್ನು ಇಂದು ಭೇಟಿಯಾಗಿ ತಮ್ಮ ಪ್ರತಿಭಟನೆ ವಾಪಸ್ ಪಡೆಯಲು ಮನವೊಲಿಸಿದರು.
ರೈತರ ಹೋರಾಟಕ್ಕೆ ಅಣ್ಣಾ ಹಜಾರೆ ಬೆಂಬಲ: ಕೃಷಿಕರ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ