ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಡಿ.ಎಂ.ಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಚಪ್ಪಲಿ ಧರಿಸಲ್ಲ ಎಂದು ಅಣ್ಣಾಮಲೈ ಪ್ರತಿಜ್ಞೆ

ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಅಪರಿಚಿತ ವ್ಯಕ್ತಿಗಳು ಲೈಂಗಿಕ ದೌರ್ಜನ್ಯ ಎಸಗಿಂದಹ ಆಘಾತಕಾರಿ ಘಟನೆ ನಡೆದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಭಾರೀ ಆಕ್ರೋಶ, ಪ್ರತಿಭಟನೆಗಳು ಕೂಡಾ ನಡೆದಿದೆ. ಅಲ್ಲದೆ ಈ ಪ್ರಕರಣ ಇದೀಗ ರಾಜಕೀಯ ತಿರುವನ್ನು ಪಡೆದುಕೊಂಡಿದ್ದು, ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ದಿನಕ್ಕೆ ಆರು ಬಾರಿ ಛಾಟಿ ಏಟು, 48 ದಿನಗಳ ಉಪವಾಸ ಮತ್ತು .ಎಂ.ಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂಬ ಪ್ರತಿಜ್ಞೆಯನ್ನು ಮಾಡಿದ್ದಾರೆ.

Follow us
ಮಾಲಾಶ್ರೀ ಅಂಚನ್​
| Updated By: ಗಂಗಾಧರ​ ಬ. ಸಾಬೋಜಿ

Updated on:Dec 26, 2024 | 7:26 PM

ತಮಿಳುನಾಡಿನ ಪ್ರತಿಷ್ಠಿತ ಅಣ್ಣಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಅಪರಿಚಿತ ವ್ಯಕ್ತಿಗಳು ಎರಡನೇ ವರ್ಷದ ಎಂಜಿನಿಯರಿಂಗ್‌ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಂತ ಆಘಾತಕಾರಿ ಘಟನೆ ನಡೆದಿತ್ತು. ನಂತರ ಆಕೆ ಡಿಸೆಂಬರ್‌ 24 ರಂದು ಈ ಬಗ್ಗೆ ದೂರನ್ನು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿದ್ದು, ಈ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿ ಸಂಘಟನೆಗಳಿಂದ ಭಾರೀ ಆಕ್ರೋಶ, ಪ್ರತಿಭಟನೆಗಳು ಕೂಡಾ ನಡೆದಿವೆ. ಇದೀಗ ಈ ಪ್ರಕರಣ ರಾಜಕೀಯ ತಿರುವನ್ನು ಪಡೆದುಕೊಂಡಿದ್ದು, ಡಿಎಂಕೆ ಸರ್ಕಾರದಿಂದ ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿದ್ದು, ಈ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಚಪ್ಪಲಿ ಧರಿಸುವುದಿಲ್ಲ ಎಂದು ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಪ್ರತಿಜ್ಞೆಯನ್ನು ಮಾಡಿದ್ದಾರೆ.

ಕೊಯಮತ್ತೂರಿನನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು “ನಾಳೆ ಬೆಳಗ್ಗೆ 10 ಗಂಟೆಗೆ ಮನೆಯಲ್ಲಿ ಛಾಟಿ ಏಟನ್ನು ಹೊಡೆಸಿಕೊಳ್ಳಲಿದ್ದೇನೆ ಮತ್ತು ಡಿ.ಎಂ.ಕೆ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೆ ನಾನು ಪಾದರಕ್ಷೆಯನ್ನು ಧರಿಸುವುದಿಲ್ಲ ಎಂದು ಹೇಳಿದರು. ಇತರ ಕಾರ್ಯಕರ್ತರು ಈ ರೀತಿ ಮಾಡಿ ಎಂದು ನಾನು ಒತ್ತಾಯಿಸುವುದಿಲ್ಲ. ಜೊತೆಗೆ ಮುಂದಿನ 48 ದಿನಗಳವರೆಗೆ ನಾನು ಉಪವಾಸ ಮಾಡಲಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂಡಿ ಒಕ್ಕೂಟದಿಂದ ಕಾಂಗ್ರೆಸ್​ನ್ನು ಕಿತ್ತೊಗೆಯಬೇಕೆಂಬ ಬೇಡಿಕೆ ಇಟ್ಟ ಎಎಪಿ

ಈ ಪ್ರಕರಣದಲ್ಲಿ ಸಂಸ್ರಸ್ತೆಯ ಹೆಸರು, ಫೋನ್‌ ನಂಬರ್‌ ಮತ್ತು ಇತರೆ ವೈಯಕ್ತಿಕ ವಿವರಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಅಣ್ಣಾಮಲೈ ತಮಿಳುನಾಡು ರಾಜ್ಯ ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ʼಎಫ್‌ಐಆರ್‌ ಸೋರಿಕೆ ಮಾಡುವ ಮೂಲಕ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ್ದೀರಿ. ಅಲ್ಲದೆ ಇದು ಆಕೆಯ ಪ್ರತಿಷ್ಠೆಗೂ ಕಳಂಕ ತಂದಿದೆ. ಹೀಗೆ ಎಫ್‌ಐಆರ್‌ ಸೋರಿಕೆ ಮಾಡಿದ್ದಕ್ಕೆ ಪೊಲೀಸರು ಮತ್ತು ಡಿಎಂಕೆ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ಕಿಡಿ ಕಾರಿದರು. ಜೊತೆಗೆ ಇಲ್ಲಿನ ಕಾನೂನು ಸಚಿವ ಎಸ್.‌ ರೇಗುಪತಿ ಅವರನ್ನು ಗುರಿಯಾಗಿಸಿಕೊಂಡು “ನಿರ್ಭಯಾ ನಿಧಿ ಎಲ್ಲಿ ಹೋಯಿತು? ಅಣ್ಣಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸಿಸಿಟಿವಿ ಕಣ್ಗಾವಲು ಏಕೆ ಇರಲಿಲ್ಲ” ಎಂದು ಪ್ರಶ್ನಿಸಿದರು. ಈ ಘಟನೆ ನಡೆದ ಸಮಯದಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕೂಡಾ ಕಾರ್ಯನಿರ್ವಹಿಸುತ್ತಿರಲಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ, ಇಂತಹ ಅಪರಾಧಗಳು ತಮಿಳು ನಾಡಿನ ಕಾನೂನು-ಸುವ್ಯವಸ್ಥೆ, ಪ್ರಸ್ತುತ ಆಡಳಿತ ಸ್ಥಿತಿ ಹೇಗಿದೆ ಎಂಬುದನ್ನು ತೋರಿಸುತ್ತದೆ ಎಂದು ಗುಡುಗಿದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:29 pm, Thu, 26 December 24

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್