AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜನಿಕಾಂತ್​ ಯೋಗಿ ಆದಿತ್ಯನಾಥ್​ರ ಕಾಲಿಗೆ ನಮಸ್ಕರಿಸಿದ್ದರಲ್ಲಿ ತಪ್ಪೇನಿದೆ ಎಂದ ಅಣ್ಣಾಮಲೈ

ಸೂಪರ್​ಸ್ಟಾರ್ ರಜನಿಕಾಂತ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರ ಕಾಲಿಗೆ ಬಿದ್ದಿದ್ದರಲ್ಲಿ ತಪ್ಪೇನಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಜೈಲರ್ ಸಿನಿಮಾ ಬಿಡುಗಡೆಯಾದ ಹೊಸ್ತಿಲಲ್ಲಿ ಸೂಪರ್​ಸ್ಟಾರ್ ರಜನಿಕಾಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದರು, ಈ ಸಮಯದಲ್ಲಿ ಯೋಗಿ ಕಾಲಿಗೆ ನಮಸ್ಕರಿಸಿದ್ದರು.

ರಜನಿಕಾಂತ್​ ಯೋಗಿ ಆದಿತ್ಯನಾಥ್​ರ ಕಾಲಿಗೆ ನಮಸ್ಕರಿಸಿದ್ದರಲ್ಲಿ ತಪ್ಪೇನಿದೆ ಎಂದ ಅಣ್ಣಾಮಲೈ
ರಜಿನಿಕಾಂತ್Image Credit source: India Today
ನಯನಾ ರಾಜೀವ್
|

Updated on:Aug 23, 2023 | 7:53 AM

Share

ಸೂಪರ್​ಸ್ಟಾರ್ ರಜನಿಕಾಂತ್ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರ ಕಾಲಿಗೆ ಬಿದ್ದಿದ್ದರಲ್ಲಿ ತಪ್ಪೇನಿದೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ. ಜೈಲರ್ ಸಿನಿಮಾ ಬಿಡುಗಡೆಯಾದ ಹೊಸ್ತಿಲಲ್ಲಿ ಸೂಪರ್​ಸ್ಟಾರ್ ರಜನಿಕಾಂತ್ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದರು, ಈ ಸಮಯದಲ್ಲಿ ಯೋಗಿ ಕಾಲಿಗೆ ನಮಸ್ಕರಿಸಿದ್ದರು.

ಈ ಕುರಿತು ಅಣ್ಣಾಮಲೈ ಮಾತನಾಡಿ, ‘ಗೌರವಾರ್ಥವಾಗಿ ಯೋಗಿ ಅವರ ಕಾಲಿಗೆ ಬಿದ್ದಿದ್ದಾರೆ ಅದರಲ್ಲಿ ತಪ್ಪೇನಿಲ್ಲ, ಅವರು ಸನ್ಯಾಸಿ, ಜನರು ಅವರನ್ನು ಯೋಗಿ ಮಹಾರಾಜ್ ಎಂದೇ ಕರೆಯುತ್ತಾರೆ, ಯೋಗಿ ಅವರಿಗೆ ರಜನಿಕಾಂತ್ ತಮ್ಮ ಪ್ರೀತಿಯನ್ನು ತೋರಿಸಿದ್ದಾರೆ’ ಎಂದರು. ಕೆಲವು ಕೆಲಸವಿಲ್ಲದ ರಾಜಕೀಯ ಪಕ್ಷಗಳು ಮತ್ತು ಅದರ ಮುಖಂಡರುಗಳು ಎಲ್ಲವನ್ನೂ ಟೀಕಿಸಲು ಪ್ರಾರಂಭಿಸಿದರೆ ಇದಕ್ಕೆ ಅಂತ್ಯವೆಂಬುದೇ ಇರುವುದಿಲ್ಲ.

ಡಿಎಂಕೆ ಸಚಿವ ಅನ್ಬಿಲ್ ಮಹೇಶ್ ಅವರಿಂದ 20 ರೂಪಾಯಿ ಪಡೆಯಲು ವ್ಯಕ್ತಿಯೊಬ್ಬರು ಅವರ ಕಾಲಿಗೆ ಬಿದ್ದ ಉದಾಹರಣೆ ಇದೆ ಎಂದು ಅವರು ಆರೋಪಿಸಿದರು. ತಮಿಳುನಾಡಿನ ಸಚಿವರು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಕಾಲಿಗೆ ಬೀಳುತ್ತಾರೆ.

ಮತ್ತಷ್ಟು ಓದಿ: ಯೋಗಿ ಆದಿತ್ಯನಾಥ್ ಕಾಲಿಗೆ ಬಿದ್ದ ರಜನಿಕಾಂತ್​; ಇಬ್ಬರ ನಡುವೆ ವಯಸ್ಸಿನ ಅಂತರ ಎಷ್ಟು?

ಅದೇ ರೀತಿ ಉದಯನಿಧಿ ಸ್ಟಾಲಿನ್ ಅವರಿಗಿಂತ ಹಿರಿಯ ಶಾಸಕರೊಬ್ಬರು ವಿಧಾನಸಭೆಯಲ್ಲಿ ಅವರಿಗೆ ನಮಸ್ಕರಿಸಿದ್ದರು. ರಜನಿಕಾಂತ್ ಅವರನ್ನು ಟೀಕಿಸುವ ಜನರು ಈ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ನಂತರ ರಜನಿಕಾಂತ್ ಅವರು ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಅವರನ್ನು ಭೇಟಿಯಾದರು ಎಂದು ಅಣ್ಣಾಮಲೈ ತಿಳಿಸಿದರು . ರಜನಿಕಾಂತ್ ರಾಜಕೀಯ ಪಕ್ಷದ ನಾಯಕರೊಂದಿಗೆ ಆತ್ಮೀಯ ಸಂಬಂಧವನ್ನು ಹಂಚಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:53 am, Wed, 23 August 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ