Sign In

By signing in or creating an account, you agree with Associated Broadcasting Company's Terms & Conditions and Privacy Policy.

Cheetah: ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು

ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಚೀತಾಗಳನ್ನು ತರಲಾಗಿತ್ತು.

Cheetah: ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತಂದಿದ್ದ ಮತ್ತೊಂದು ಚೀತಾ ಸಾವು
ಚೀತಾ
Follow us
ಆಯೇಷಾ ಬಾನು
|

Updated on: Apr 24, 2023 | 7:18 AM

ಕುನೋ: ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’​ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.

ಏಪ್ರಿಲ್​ 23ರ ಭಾನುವಾರ ಬೆಳಗ್ಗೆಯಿಂದ ಅಸ್ವಸ್ಥಗೊಂಡಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ 4 ಗಂಟೆ ಸಮಯದಲ್ಲಿ ಚೀತಾ ಮೃತಪಟ್ಟಿದೆ. ಉದಯ್ ಚೀತಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ಮಾಹಿತಿ ನೀಡಿದ್ದಾರೆ. ಪಶುವೈದ್ಯಕೀಯ ತಂಡ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಿದೆ. ಸಂಪೂರ್ಣ ಮರಣೋತ್ತರ ಪರೀಕ್ಷೆಯನ್ನು ವಿಡಿಯೋ ಮತ್ತು ಛಾಯಾಗ್ರಹಣ ಮಾಡಲಾಗುತ್ತದೆ.

ಇದನ್ನೂ ಓದಿ: Cheetah Naming: ಚೀತಾಗೆ ಹೆಸರು ಸೂಚಿಸಿ ಜಯಶಾಲಿಯಾದವರಿಗೆ ಪ್ರಧಾನಿ ಮೋದಿ ಅಭಿನಂದನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಕುನೋ ನ್ಯಾಷನಲ್​ ಪಾರ್ಕ್​ಗೆ ತರಲಾಗಿದ್ದ ಚೀತಾ ಸಾಶಾ ಕಳೆದ ಮಾರ್ಚ್ ತಿಂಗಳಲ್ಲಿ ಸಾವನ್ನಪ್ಪಿತ್ತು. ಕಳೆದ 3 ತಿಂಗಳಿಂದ ಈ ಚೀತಾ ಅನಾರೋಗ್ಯದಿಂದ ಬಳಲುತ್ತಿದ್ದು ಅದರ ಸಾವಿಗೆ ಕಿಡ್ನಿ ಸೋಂಕು ಕಾರಣ ಎಂದು ತಿಳಿದುಬಂದಿತ್ತು. ಆದ್ರೆ ಉದಯ್ ಚೀತಾ ಸಾವಿಗೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಕಾರಣ ತಿಳಿಯಲಿದೆ.

ಈ ವರ್ಷ ಫೆಬ್ರವರಿ 18 ರಂದು ಇತರ 11 ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಕುನೊಗೆ ಕರೆತರಲಾಗಿತು. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇದು ಎರಡನೇ ಚೀತಾ ಸಾವಾಗಿದೆ. ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಇಪ್ಪತ್ತು ಚೀತಾಗಳನ್ನು ತರಲಾಗಿತು. ಕಳೆದ ವರ್ಷ ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾದ ಎಂಟು ಚೀತಾಗಳಲ್ಲಿ ಒಂದಾದ ಸಾಶಾ ಮಾರ್ಚ್‌ನಲ್ಲಿ ಮೃತಪಟ್ಟಿತ್ತು. ಭಾನುವಾರ ಎರಡನೇ ಚೀತಾ ಸಾವಿನೊಂದಿಗೆ, ಈಗ ಚೀತಾಗಳ ಸಂಖ್ಯೆ 18 ಕ್ಕೆ ಇಳಿದಿದೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಶಾಸಕರ ಹೆಸರು ಎಫ್​ಐಅರ್​ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಶಾಸಕರಾದ ಪೊನ್ನಣ್ಣ, ಮಂಥರ್​ಗೌಡ ಹೆಸರು ನಾಪತ್ತೆಯಾಗಿವೆ: ವಿನಯ್ ಸಹೋದರ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ಬ್ಯಾಂಕಾಕ್‌ನ ಬಿಮ್‌ಸ್ಟೆಕ್ ಶೃಂಗಸಭೆಯಲ್ಲಿ ಮೋದಿ- ನೇಪಾಳದ ಪ್ರಧಾನಿ ಭೇಟಿ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್​ರೊಂದಿಗೆ ನಾನು ಒಮ್ಮೆಯೂ ಮಾತಾಡಿಲ್ಲ, ಕಿರುಕುಳ ಎಲ್ಲಿಂದ ಬಂತು?: ಶಾಸಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ
ವಿನಯ್ ಸಾವಿಗೆ ಕಾರಣರಾದ ಎಸ್​ಪಿಯನ್ನು ಕೂಡಲೇ ಸಸ್ಪೆಂಡ್ ಮಾಡಬೇಕು: ಅಶೋಕ