ಕುನೋ: ಮಧ್ಯಪ್ರದೇಶದಲ್ಲಿರುವ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಮೃತಪಟ್ಟಿದೆ. ಅನಾರೋಗ್ಯದಿಂದ 6 ವರ್ಷದ ಗಂಡು ಚೀತಾ ‘ಉದಯ್’ ಮೃತಪಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ‘ಸಾಶಾ’ ಹೆಸರಿನ ಚೀತಾ ಕೆಲತಿಂಗಳ ಹಿಂದೆ ಮೃತಪಟ್ಟಿತ್ತು. ದಕ್ಷಿಣ ಆಫ್ರಿಕಾದಿಂದ ಈ ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು.
ಏಪ್ರಿಲ್ 23ರ ಭಾನುವಾರ ಬೆಳಗ್ಗೆಯಿಂದ ಅಸ್ವಸ್ಥಗೊಂಡಿದ್ದ ಚೀತಾವನ್ನು ವನ್ಯಜೀವಿ ವೈದ್ಯರು ಚಿಕಿತ್ಸೆ ಮತ್ತು ಮೇಲ್ವಿಚಾರಣೆಗಾಗಿ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ 4 ಗಂಟೆ ಸಮಯದಲ್ಲಿ ಚೀತಾ ಮೃತಪಟ್ಟಿದೆ. ಉದಯ್ ಚೀತಾ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆ.ಎಸ್. ಚೌಹಾಣ್ ಮಾಹಿತಿ ನೀಡಿದ್ದಾರೆ. ಪಶುವೈದ್ಯಕೀಯ ತಂಡ ಸೋಮವಾರ ಮರಣೋತ್ತರ ಪರೀಕ್ಷೆ ನಡೆಸಲಿದೆ. ಸಂಪೂರ್ಣ ಮರಣೋತ್ತರ ಪರೀಕ್ಷೆಯನ್ನು ವಿಡಿಯೋ ಮತ್ತು ಛಾಯಾಗ್ರಹಣ ಮಾಡಲಾಗುತ್ತದೆ.
Madhya Pradesh | Another Cheetah, Uday, who was brought from South Africa, has died during treatment after falling ill at Kuno National Park. Reason for death is yet to be ascertained: MP Chief Conservator of Forest JS Chauhan pic.twitter.com/2IHPMCji2L
— ANI (@ANI) April 23, 2023
ಇದನ್ನೂ ಓದಿ: Cheetah Naming: ಚೀತಾಗೆ ಹೆಸರು ಸೂಚಿಸಿ ಜಯಶಾಲಿಯಾದವರಿಗೆ ಪ್ರಧಾನಿ ಮೋದಿ ಅಭಿನಂದನೆ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವದ ಚೀತಾ ಯೋಜನೆಯಲ್ಲಿ ದಕ್ಷಿಣ ಆಫ್ರಿಕಾದಿಂದ ಕುನೋ ನ್ಯಾಷನಲ್ ಪಾರ್ಕ್ಗೆ ತರಲಾಗಿದ್ದ ಚೀತಾ ಸಾಶಾ ಕಳೆದ ಮಾರ್ಚ್ ತಿಂಗಳಲ್ಲಿ ಸಾವನ್ನಪ್ಪಿತ್ತು. ಕಳೆದ 3 ತಿಂಗಳಿಂದ ಈ ಚೀತಾ ಅನಾರೋಗ್ಯದಿಂದ ಬಳಲುತ್ತಿದ್ದು ಅದರ ಸಾವಿಗೆ ಕಿಡ್ನಿ ಸೋಂಕು ಕಾರಣ ಎಂದು ತಿಳಿದುಬಂದಿತ್ತು. ಆದ್ರೆ ಉದಯ್ ಚೀತಾ ಸಾವಿಗೆ ಮರಣೋತ್ತರ ಪರೀಕ್ಷೆ ವರದಿ ಬಳಿಕ ಕಾರಣ ತಿಳಿಯಲಿದೆ.
ಈ ವರ್ಷ ಫೆಬ್ರವರಿ 18 ರಂದು ಇತರ 11 ಚೀತಾಗಳನ್ನು ದಕ್ಷಿಣ ಆಫ್ರಿಕಾದಿಂದ ಕುನೊಗೆ ಕರೆತರಲಾಗಿತು. ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಇದು ಎರಡನೇ ಚೀತಾ ಸಾವಾಗಿದೆ. ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಇಪ್ಪತ್ತು ಚೀತಾಗಳನ್ನು ತರಲಾಗಿತು. ಕಳೆದ ವರ್ಷ ನಮೀಬಿಯಾದಿಂದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಪರಿಚಯಿಸಲಾದ ಎಂಟು ಚೀತಾಗಳಲ್ಲಿ ಒಂದಾದ ಸಾಶಾ ಮಾರ್ಚ್‌ನಲ್ಲಿ ಮೃತಪಟ್ಟಿತ್ತು. ಭಾನುವಾರ ಎರಡನೇ ಚೀತಾ ಸಾವಿನೊಂದಿಗೆ, ಈಗ ಚೀತಾಗಳ ಸಂಖ್ಯೆ 18 ಕ್ಕೆ ಇಳಿದಿದೆ.
ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ