ದೆಹಲಿ: ಮುಂಡ್ಕಾ ಪ್ರದೇಶದಲ್ಲಿ ವುಡ್ ಕಾರ್ಖಾನೆಗೆ ಬೆಂಕಿ ಹತ್ತಿಕೊಂಡಿದೆ. ಮರಗಳನ್ನು ಸಂಗ್ರಹಿಸಿದ್ದ ಜಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 21 ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ.
ಕಳೆದ 5 ದಿನಗಳ ಹಿಂದೆಯಷ್ಟೇ ರಾಜಧಾನಿಯಲ್ಲಿ ಅಗ್ನಿ ದುರಂತದಿಂದ 43 ಜನ ಸಾವನ್ನಪ್ಪಿದ್ರು. ಈಗ ಮತ್ತೊಂದು ಅಗ್ನಿ ಅನಾಹುತವಾಗಿದೆ. ಈ ಘಟನೆಯಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.