Madhya Pradesh: ಮಧ್ಯಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ, ಪಾದ ನೆಕ್ಕುವಂತೆ ಒತ್ತಾಯಿಸಿ ಯುವಕನಿಗೆ ಥಳಿತ

ಯವಕನೊಬ್ಬನಿಗೆ ತನ್ನ ಪಾದಗಳನ್ನು ನೆಕ್ಕುವಂತೆ ವ್ಯಕ್ತಿಯೊಬ್ಬ ಒತ್ತಾಯ ಮಾಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಗ್ವಾಲಿಯರ್​ ನಡೆದಿದೆ ಎಂದು ಹೇಳಲಾಗಿದೆ.

Madhya Pradesh: ಮಧ್ಯಪ್ರದೇಶದಲ್ಲಿ ಮತ್ತೊಂದು ಅಮಾನವೀಯ ಘಟನೆ, ಪಾದ ನೆಕ್ಕುವಂತೆ ಒತ್ತಾಯಿಸಿ ಯುವಕನಿಗೆ ಥಳಿತ
ವೈರಲ್​​ ವೀಡಿಯೊ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jul 08, 2023 | 3:57 PM

ಭೋಪಾಲ್: ಮಧ್ಯಪ್ರದೇಶದಲ್ಲಿ (Madhya Pradesh) ಒಂದಲ್ಲ ಒಂದು ಅಮಾನವೀಯ ಘಟನೆಗಳು ನಡೆಯುತ್ತಿದೆ. ಇತ್ತಿಚೇಗೆ ಆದಿವಾಸಿ ಸಮುದಾಯದ ವ್ಯಕ್ತಿಯ ಮೇಲೆ ಬಿಜೆಪಿ ಮುಖಂಡನೊಬ್ಬ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿತ್ತು, ಇದರ ಬೆನ್ನಲ್ಲೇ ಆದಿವಾಸಿ ಯುವತಿಯರಿಗೆ ಕಿರುಕುಳ ನೀಡಿ, ಇಬ್ಬರು ಯುವಕರಿಗೆ ಮಲ ತಿನ್ನಿಸಿ, ಚಪ್ಪಲಿಯ ಮಾಲೆ ಹಾಕಿ ಊರೆಲ್ಲ ಮೆರವಣಿಗೆ ಮಾಡಿರುವ ಹೇಯ ಕೃತ್ಯ ಮಧ್ಯಪ್ರದೇಶದಲ್ಲಿ ತಡವಾಗಿ ಬೆಳಿಕಿಗೆ ಬಂದಿದೆ. ಇದೀಗ ಮತ್ತೊಂದು ಘಟನೆ ಇದೆ ರಾಜ್ಯದಲ್ಲಿ ನಡೆದಿದೆ. ಯವಕನೊಬ್ಬನಿಗೆ ತನ್ನ ಪಾದಗಳನ್ನು ನೆಕ್ಕುವಂತೆ ವ್ಯಕ್ತಿಯೊಬ್ಬ ಒತ್ತಾಯ ಮಾಡಿರುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆ ಗ್ವಾಲಿಯರ್​ ನಡೆದಿದೆ ಎಂದು ಹೇಳಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.

ಇವರನ್ನು ಗ್ವಾಲಿಯರ್ ಜಿಲ್ಲೆಯ ದಾಬ್ರಾ ಪಟ್ಟಣದ ನಿವಾಸಿಗಳು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಯುವಕ ಮತ್ತು ಆರೋಪಿಗಳು ಒಂದೇ ಊರಿನವರು ಎಂದು ಹೇಳಲಾಗಿದೆ. ಕಾರಿನಲ್ಲಿ ಕೂರಿಸಿಕೊಂಡು ಯುವಕನಿಗೆ ಪದೇ ಪದೇ ಆರೋಪಿಗಳು ಕಪಾಳಮೋಕ್ಷ ಮಾಡುವುದನ್ನು ಈ ವೀಡಿಯೊದಲ್ಲಿ ನೋಡಬಹುದು. ಜತೆಗೆ “ಗೋಲು ಗುರ್ಜರ್ ಬಾಪ್ ಹೈ” (ಗೋಲು ಗುರ್ಜರ್ ತಂದೆ) ಎಂದು ಹೇಳುವಂತೆ ಹಿಂಸೆ ನೀಡುತ್ತಿರುವುದು ಮತ್ತು ಆ ಯುವಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವುದು ಕೂಡ ವೀಡಿಯೊದಲ್ಲಿ ರೆಕಾರ್ಡ್​ ಆಗಿದೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಮತ್ತೊಂದು ಹೀನ ಕೃತ್ಯ; ಇಬ್ಬರು ದಲಿತ ಯುವಕರಿಗೆ ಮಲ ತಿನಿಸಿ ಮೆರವಣಿಗೆ, 7 ಮಂದಿ ಅರೆಸ್ಟ್

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಬ್ರಾ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಒಪಿ) ವಿವೇಕ್ ಕುಮಾರ್ ಶರ್ಮಾ ಮಾತನಾಡಿ, ಶುಕ್ರವಾರ ಸಂಜೆ ವಾಹನದಲ್ಲಿ ವ್ಯಕ್ತಿಯೊಬ್ಬನನ್ನು ಥಳಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವಿಡಿಯೊ ಕ್ಲಿಪ್​ನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ. ಯುವಕನ ಕುಟುಂಬದವರ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಅಪಹರಣ ಮತ್ತು ಥಳಿಸಿದಕ್ಕಾಗಿ ಭಾರತೀಯ ದಂಡ ಸಂಹಿತೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಶರ್ಮಾ ತಿಳಿಸಿದ್ದಾರೆ.

ಯುವಕ ಮತ್ತು ಆರೋಪಿಗಳು ಗ್ವಾಲಿಯರ್ ಜಿಲ್ಲೆಯ ದಾಬ್ರಾ ಪಟ್ಟಣದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಕುರಿತು ಮಾತನಾಡಿದ ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 341 (ಒಬ್ಬ ವ್ಯಕ್ತಿಯನ್ನು ತಪ್ಪಾಗಿ ನಿರ್ಬಂಧಿಸುವುದು), 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 324 (ಸ್ವಯಂಪ್ರೇರಿತವಾಗಿ ಆಯುಧ ಅಥವಾ ವಸ್ತುವಿನಿಂದ ಗಾಯಗೊಳಿಸುವುದು), 307 (ಕೊಲೆಗೆ ಯತ್ನ) ಮತ್ತು 34 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ( IPC) ಎಂದು ಹೇಳಿದ್ದಾರೆ.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:43 pm, Sat, 8 July 23

ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ