AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnal: ರೈತರೊಂದಿಗೆ ನಿನ್ನೆಯ ಮಾತುಕತೆ ವಿಫಲ; ಇಂದು ಮತ್ತೆ ಸರ್ಕಾರಿ ಅಧಿಕಾರಿಗಳಿಂದ ರಾಜಿ ಪಂಚಾಯತಿ

ಪೊಲೀಸರ ಲಾಠಿ ಚಾರ್ಜ್​ ಮತ್ತು ಐಎಎಸ್ ಅಧಿಕಾರಿಯ ವಿರುದ್ಧ ಕಳೆದ ನಾಲ್ಕು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಲಾಠಿ ಏಟು ನೀಡಿದ ಪೊಲೀಸರು ಮತ್ತು ಐಎಎಸ್​ ಅಧಿಕಾರಿ ಆಯುಷ್​ರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ.

Karnal: ರೈತರೊಂದಿಗೆ ನಿನ್ನೆಯ ಮಾತುಕತೆ ವಿಫಲ; ಇಂದು ಮತ್ತೆ ಸರ್ಕಾರಿ ಅಧಿಕಾರಿಗಳಿಂದ ರಾಜಿ ಪಂಚಾಯತಿ
ಹರ್ಯಾಣ ಪ್ರತಿಭಟನಾ ನಿರತ ರೈತರು
TV9 Web
| Edited By: |

Updated on: Sep 11, 2021 | 9:45 AM

Share

ಹರ್ಯಾಣದ ಕರ್ನಾಲ್​​ನಲ್ಲಿ ಆಗಸ್ಟ್​ 28ರಂದು ರೈತರ ಮೇಲೆ ನಡೆದ ಲಾಠಿ ಚಾರ್ಜ್​ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ, ರೈತರು ಕರ್ನಾಲ ಜಿಲ್ಲಾ ಪಂಚಾಯತ್​ ಕಚೇರಿಯ  ಗೇಟ್​ ಬಳಿ ಧರಣಿ ನಡೆಸುತ್ತಿದ್ದಾರೆ. ಈ ಸಂಬಂಧ ಸ್ಥಳೀಯ ಆಡಳಿತದ ಅಧಿಕಾರಿಗಳು ನಿನ್ನೆ ಪ್ರತಿಭಟನಾನಿರತರೊಂದಿಗೆ ಮಾತುಕತೆ ನಡೆಸಿದ್ದರೂ ಅದು ವಿಫಲವಾಗಿದೆ. ಈ ನಿಟ್ಟಿನಲ್ಲಿ ಇನ್ನೊಂದು ಬಾರಿ ಇಂದು ಸರ್ಕಾರ ರೈತರೊಟ್ಟಿಗೆ ಮಾತುಕತೆಗೆ ಮುಂದಾಗಿದೆ. 

ಆಗಸ್ಟ್​ 28ರಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್​ ಅವರು ಬಿಜೆಪಿ ಕಾರ್ಯಕಾರಿಣಿ ಸಭೆಗಾಗಿ ಕರ್ನಾಲ್​ಗೆ ಭೇಟಿ ಕೊಟ್ಟಿದ್ದರು. ಆದರೆ ಅವರ ಭೇಟಿಯನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ್ದರು. ಆಗ ಪೊಲೀಸರು ಲಾಠಿ ಚಾರ್ಜ್​ ನಡೆಸಿದ ಪರಿಣಾಮ ಹಲವು ರೈತರು ಗಾಯಗೊಂಡಿದ್ದರು. ಈ ಮಧ್ಯೆ ಜಿಲ್ಲಾಧಿಕಾರಿ ಆಯುಷ್​ ಸಿನ್ಹಾ, ಪ್ರತಿಭಟನಾ ನಿರತರ ತಲೆ ಒಡಿಯಿರಿ ಎಂದು ಪೊಲೀಸರಿಗೆ ಆದೇಶ ನೀಡಿದ ವಿಡಿಯೋ ವೈರಲ್​ ಆಗಿತ್ತು.

ಪೊಲೀಸರ ಲಾಠಿ ಚಾರ್ಜ್​ ಮತ್ತು ಐಎಎಸ್ ಅಧಿಕಾರಿಯ ವಿರುದ್ಧ ಕಳೆದ ನಾಲ್ಕು ದಿನಗಳಿಂದ ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುತ್ತಿದ್ದಾರೆ. ಲಾಠಿ ಏಟು ನೀಡಿದ ಪೊಲೀಸರು ಮತ್ತು ಐಎಎಸ್​ ಅಧಿಕಾರಿ ಆಯುಷ್​ರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತಿದ್ದಾರೆ. ಇನ್ನು ಈ ಘಟನೆಯಲ್ಲಿ ಮೃತಪಟ್ಟ ರೈತನ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡಬೇಕು.ಹಾಗೇ, ಹತ್ತಿರದ ಸಂಬಂಧಿಗೆ ಸರ್ಕಾರಿ ಉದ್ಯೋಗ ನೀಡಬೇಕು ಮತ್ತು ಗಾಯಗೊಂಡ ರೈತರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದೂ ಒತ್ತಾಯಿಸಿದ್ದಾರೆ.  ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳ ವಿರುದ್ಧ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಕೇಂದ್ರ ಸರ್ಕಾರದ ಮಾತುಕತೆ ಕೂಡ ವಿಫಲವಾಗಿದೆ.

ಇದನ್ನೂ ಓದಿ: ವಿಜಯಪುರದಲ್ಲಿ ಮತ್ತೆ ನಡುಗಿದ ಭೂಮಿ; ಒಂದು ವಾರದಲ್ಲಿ ಎರಡನೇ ಬಾರಿಗೆ ಭೂಕಂಪನದ ಅನುಭವ

ನಾಯಿಯ ನಿಯತ್ತು ಎಂಬ ಮಾತಿಗೆ ಸಾಕ್ಷಿ ಈ ವಿಡಿಯೋ; ಮುದ್ದಾದ ಶ್ವಾನ ತನ್ನ ಮನೆ ಮಕ್ಕಳ ಕಡೆಗೆ ತೋರಿಸುವ ಕಾಳಜಿ ಹೇಗಿದೆ ನೋಡಿ

Follow Us
TV9 Web
TV9 Web

TV9 Kannada

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ