AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್ ಪಡೆ

ಅಮೃತಸರ ನಗರದ ಉತ್ತರಕ್ಕೆ 40 ಕಿಮೀ ದೂರದಲ್ಲಿರುವ ಚಹರ್‌ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶವನ್ನು ಪ್ರವೇಶಿಸುವುದನ್ನು ಗಮನಿಸಿದ ಬಿಎಸ್‌ಎಫ್ ಸಿಬ್ಬಂದಿ ಸೋಮವಾರ ರಾತ್ರಿ ಡ್ರೋನ್ ಮೇಲೆ ಗುಂಡು ಹಾರಿಸಿದ್ದಾರೆ.

ಪಂಜಾಬ್​ನ ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಬಿಎಸ್​ಎಫ್ ಪಡೆ
ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತೀಯ ಸೇನೆ
TV9 Web
| Edited By: |

Updated on: Nov 29, 2022 | 9:52 AM

Share

ಅಮೃತಸರ: ಪಂಜಾಬ್‌ನ ಅಮೃತಸರ (Amritsar) ಜಿಲ್ಲೆಯಲ್ಲಿ ಪಾಕಿಸ್ತಾನದಿಂದ (Pakistan Drone) ಭಾರತದ ಕಡೆಗೆ ನುಸುಳಿದ್ದ ಡ್ರೋನ್ ಅನ್ನು ಗಡಿ ಭದ್ರತಾ ಪಡೆ (BSF) ಹೊಡೆದುರುಳಿಸಿದೆ. ಅಮೃತಸರ ನಗರದ ಉತ್ತರಕ್ಕೆ 40 ಕಿಮೀ ದೂರದಲ್ಲಿರುವ ಚಹರ್‌ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶವನ್ನು ಪ್ರವೇಶಿಸುವುದನ್ನು ಗಮನಿಸಿದ ಬಿಎಸ್‌ಎಫ್ ಸಿಬ್ಬಂದಿ ಸೋಮವಾರ ರಾತ್ರಿ ಡ್ರೋನ್ ಮೇಲೆ ಗುಂಡು ಹಾರಿಸಿದ್ದಾರೆ.

ಡ್ರೋನ್​ ಅನ್ನು ಹೊಡೆದುರುಳಿಸಿದ ನಂತರ ನಡೆದ ಶೋಧ ಕಾರ್ಯಾಚರಣೆಯ ಸಮಯದಲ್ಲಿ ಬಿಎಸ್​ಎಫ್ ಭಾಗಶಃ ಹಾನಿಗೊಳಗಾದ ಹೆಕ್ಸಾಕಾಪ್ಟರ್ ಅನ್ನು ವಶಪಡಿಸಿಕೊಂಡಿದೆ. ಬಿಳಿ ಪಾಲಿಥಿನ್‌ನಲ್ಲಿ ಶಂಕಿತ ವಸ್ತುವನ್ನು ಸಹ ಅದರ ಕೆಳಗೆ ಅಂಟಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Viral Video : ಆರ್ಡರ್ ಮಾಡಿದ್ದು ಡ್ರೋನ್ ಕ್ಯಾಮೆರಾ, ಪಡೆದದ್ದು ಆಲೂಗಡ್ಡೆ!

ಡ್ರೋನ್ ಡ್ರಗ್ಸ್ ಪೇಲೋಡ್ ಅನ್ನು ಹೊತ್ತೊಯ್ಯುತ್ತಿತ್ತು ಎಂದು ಶಂಕಿಸಲಾಗಿದೆ. ಆ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನವೆಂಬರ್ 25ರಂದು ಅಮೃತಸರದಲ್ಲಿ ಭಾರತ- ಪಾಕಿಸ್ತಾನದ ಅಂತಾರಾಷ್ಟ್ರೀಯ ಗಡಿಯ ಬಳಿ ಬಿಎಸ್ಎಫ್ ಪಡೆಗಳು ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ್ದವು. ಇಬ್ಬರು ಪಾಕಿಸ್ತಾನಿ ನುಸುಳುಕೋರರ ಚಲನವಲನವನ್ನು ಬಿಎಸ್‌ಎಫ್ ಪಡೆಗಳು ದಾಖಲಿಸಿಕೊಂಡಿತ್ತು. ಅಲ್ಲಿ ಅಳವಡಿಸಲಾಗಿದ್ದ ಥರ್ಮಲ್ ಕ್ಯಾಮೆರಾದಲ್ಲಿ ಪಾಕಿಸ್ತಾನಿ ನುಸುಳುಕೋರರ ಚಲನವಲನ ಸೆರೆಯಾಗಿತ್ತು.

ಇದನ್ನೂ ಓದಿ: ಭಾರತ-ಪಾಕ್ ಗಡಿಯಲ್ಲಿ 12ಕೆಜಿ ಸರಕು ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್

2021ಕ್ಕೆ ಹೋಲಿಸಿದರೆ ಪಾಕಿಸ್ತಾನಿ ಡ್ರೋನ್‌ಗಳು ಭಾರತದ ಭೂಪ್ರದೇಶಕ್ಕೆ ನುಸುಳುವುದು ಹೆಚ್ಚಾಗಿದೆ. ಗಡಿಯಲ್ಲಿ ಈ ವರ್ಷ ಸುಮಾರು 230 ಡ್ರೋನ್‌ಗಳನ್ನು ಪತ್ತೆಹಚ್ಚಲಾಗಿದೆ. ಆದರೆ 2021 ರಲ್ಲಿ ಈ ಸಂಖ್ಯೆ 104ರಷ್ಟಿತ್ತು. 2020ರಿಂದ ಪಂಜಾಬ್‌ನಲ್ಲಿ ಕನಿಷ್ಠ 297 ಡ್ರೋನ್‌ಗಳು ಪತ್ತೆಯಾಗಿವೆ. ಈ ವರ್ಷದ ಅಕ್ಟೋಬರ್‌ನಲ್ಲಿ ಗುಜರಾತ್, ಜಮ್ಮು, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಅನುಮಾನಾಸ್ಪದ ಡ್ರೋನ್ ಚಟುವಟಿಕೆಗಳನ್ನು ಗಮನಿಸಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ