American Airlines: ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವಿದ್ಯಾರ್ಥಿ

ವಿಮಾನದಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನ್ಯೂಯಾರ್ಕ್​ನಿಂದ ನವದೆಹಲಿಗೆ ಬರುತ್ತಿದ್ದ ಅಮೆರಿಕನ್ ಏರ್​ಲೈನ್ಸ್​ನಲ್ಲಿ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

ಅಮೆರಿಕನ್ ಏರ್​ಲೈನ್ಸ್​
Follow us
ನಯನಾ ರಾಜೀವ್
|

Updated on: Mar 05, 2023 | 8:34 AM

ವಿಮಾನದಲ್ಲಿ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ನ್ಯೂಯಾರ್ಕ್​ನಿಂದ ನವದೆಹಲಿಗೆ ಬರುತ್ತಿದ್ದ ಅಮೆರಿಕನ್ ಏರ್​ಲೈನ್ಸ್​ನಲ್ಲಿ ಕುಡಿದ ಮತ್ತಿನಲ್ಲಿ ವಿದ್ಯಾರ್ಥಿಯೊಬ್ಬ ತನ್ನ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ.

ಘಟನೆಯು ಅಮೆರಿಕನ್ ಏರ್ಲೈನ್ಸ್​ ವಿಮಾನ ಸಂಖ್ಯೆ ಎಎ292ರಲ್ಲಿ ನಡೆದಿದೆ. ಶುಕ್ರವಾರ ರಾತ್ರಿ 9.16ಕ್ಕೆ ನ್ಯೂಯಾರ್ಕ್​ನಿಂದ ಹೊರಟ ವಿಮಾನವು 14 ಗಂಟೆ 26 ನಿಮಿಷಗಳ ಹಾರಾಟದ ನಂತರ ಶನಿವಾರ ರಾತ್ರಿ 10.12ಕ್ಕೆ ಇಲ್ಲಿನ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಇಳಿದಿದೆ.

ಆರೋಪಿಯು ಅಮೇರಿಕನ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಎಂದು ಹೇಳಲಾಗುತ್ತಿದೆ. ಈ ಕೊಳಕು ಕೃತ್ಯಕ್ಕೆ ವಿದ್ಯಾರ್ಥಿ ಕ್ಷಮೆಯಾಚಿಸಿದ ನಂತರ ಸಂತ್ರಸ್ತ ಪ್ರಯಾಣಿಕನು ತನ್ನ ವೃತ್ತಿಜೀವನವನ್ನು ಹಾಳುಮಾಡಬಹುದೆಂದು ಅವರ ವಿರುದ್ಧ ದೂರ ದಾಖಲಿಸಿಲ್ಲ.

ಮತ್ತಷ್ಟು ಓದಿ:Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಎಟಿಸಿ ಸಿಐಎಸ್‌ಎಫ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದು, ಅವರು ಆರೋಪಿ ಪ್ರಯಾಣಿಕನನ್ನು ದೆಹಲಿ ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಳೆದ ವರ್ಷ ನವೆಂಬರ್ 26ರಂದು ನ್ಯೂಯಾರ್ಕ್​ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಾರ್ಗಮಧ್ಯೆ ಕುಡಿದ ಮತ್ತಿನಲ್ಲಿ ಮಿಶ್ರಾ 70 ವರ್ಷದ ವೃದ್ಧ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ

ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ

156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು

ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?

ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ

2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ

ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ