ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿಕೆ, ರೋಗಿಗಳ ಸಂಪರ್ಕಕ್ಕೆ ಬಂದಿರುವ 700 ಮಂದಿ ಪೈಕಿ 77 ಜನರಿಗೆ ಅಪಾಯ ಹೆಚ್ಚು

ಕೇರಳದಲ್ಲಿ ಬುಧವಾರ ಮತ್ತೊಂದು ನಿಫಾ ವೈರಸ್ ಪ್ರಕರಣ ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿದೆ. ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಕಂಟೈನ್‌ಮೆಂಟ್ ವಲಯಗಳನ್ನು ರಚಿಸಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ರೋಗಿಗಳ ಸಂಪರ್ಕಕ್ಕೆ ಬಂದ ಸುಮಾರು 700 ಜನರ ಪಟ್ಟಿಯನ್ನು ತಯಾರಿಸಲಾಗಿದೆ. ಈ ಪೈಕಿ 77 ಜನರನ್ನು ಹೈ ರಿಸ್ಕ್ ವಿಭಾಗದಲ್ಲಿ ಇರಿಸಲಾಗಿದೆ.

ಕೇರಳದಲ್ಲಿ ನಿಫಾ ವೈರಸ್ ಪ್ರಕರಣಗಳ ಸಂಖ್ಯೆ ಐದಕ್ಕೆ ಏರಿಕೆ, ರೋಗಿಗಳ ಸಂಪರ್ಕಕ್ಕೆ ಬಂದಿರುವ 700 ಮಂದಿ ಪೈಕಿ 77 ಜನರಿಗೆ ಅಪಾಯ ಹೆಚ್ಚು
ನಿಫಾ ವೈರಸ್ ಚಿಕಿತ್ಸೆ
Follow us
ನಯನಾ ರಾಜೀವ್
|

Updated on: Sep 14, 2023 | 8:52 AM

ಕೇರಳ(Kerala)ದಲ್ಲಿ ಬುಧವಾರ ಮತ್ತೊಂದು ನಿಫಾ ವೈರಸ್(Nipah Virus) ಪ್ರಕರಣ ಕಾಣಿಸಿಕೊಂಡಿದ್ದು, ಒಟ್ಟು ಸೋಂಕಿತರ ಸಂಖ್ಯೆ 5ಕ್ಕೆ ಏರಿದೆ. ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಕಂಟೈನ್‌ಮೆಂಟ್ ವಲಯಗಳನ್ನು ರಚಿಸಿದೆ ಎಂದು ರಾಜ್ಯ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ರೋಗಿಗಳ ಸಂಪರ್ಕಕ್ಕೆ ಬಂದ ಸುಮಾರು 700 ಜನರ ಪಟ್ಟಿಯನ್ನು ತಯಾರಿಸಲಾಗಿದೆ. ಈ ಪೈಕಿ 77 ಜನರನ್ನು ಹೈ ರಿಸ್ಕ್ ವಿಭಾಗದಲ್ಲಿ ಇರಿಸಲಾಗಿದೆ.

ನಿಫಾ ವೈರಸ್​ನಿಂದ ರಾಜ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ, ರಾಜ್ಯಾದ್ಯಂತ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಸಚಿವರು ಆತಂಕ ವ್ಯಕ್ತಪಡಿಸಿದ್ದಾರೆ. ಸೋಂಕು ತಡೆಗೆ ರಾಜ್ಯ ಹಲವು ಕ್ರಮಗಳನ್ನು ಕೈಗೊಂಡಿದೆ. ಹೆಚ್ಚಿನ ಅಪಾಯದ ವರ್ಗದಲ್ಲಿರುವ ಜನರು ತಮ್ಮ ಮನೆಯಿಂದ ಹೊರಬರದಂತೆ ಮನವಿ ಮಾಡಲಾಗಿದೆ.

ಕೋಯಿಕ್ಕೋಡ್ ಜಿಲ್ಲೆಯಲ್ಲಿ ಸಾರ್ವಜನಿಕ ಉತ್ಸವಗಳು ಮತ್ತು ಇತರ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಜಿಲ್ಲೆಯ 9 ಪಂಚಾಯತ್‌ಗಳ 58 ವಾರ್ಡ್‌ಗಳನ್ನು ಕಂಟೈನ್‌ಮೆಂಟ್ ವಲಯಗಳನ್ನಾಗಿ ಮಾಡಲಾಗಿದೆ.

ಇಲ್ಲಿ ತುರ್ತು ಸೇವೆಗಳನ್ನು ಮಾತ್ರ ಅನುಮತಿಸಲಾಗಿದೆ. ತುರ್ತು ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಬೆಳಿಗ್ಗೆ 7ಗಂಟೆಯಿಂದ ರಿಂದ ಸಂಜೆ 5ರವರೆಗೆ ತೆರೆಯಲು ಅನುಮತಿಸಲಾಗಿದೆ.

ಔಷಧಾಲಯಗಳು ಮತ್ತು ಆರೋಗ್ಯ ಕೇಂದ್ರಗಳಿಗೆ ಯಾವುದೇ ಸಮಯದ ಮಿತಿಯಿಲ್ಲ. ಕಂಟೈನ್‌ಮೆಂಟ್ ಝೋನ್‌ನಲ್ಲಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ಗಳು ನಿಲ್ಲದಂತೆ ಕೇಳಿಕೊಳ್ಳಲಾಗಿದೆ.

9 ವರ್ಷದ ಬಾಲಕ ನಿಫಾ ವೈರಸ್​ನಿಂದ ಬಳಲುತ್ತಿದ್ದು, ವೆಂಟಿಲೇಟರ್ ಬೆಂಬಲದಲ್ಲಿದೆ. ಈ ಬಾರಿ ಕೇರಳದಲ್ಲಿ ಹರಡಿರುವ ನಿಫಾ ಸೋಂಕು ಬಾಂಗ್ಲಾದೇಶದ ತಳಿಯಾಗಿದೆ.

ಮತ್ತಷ್ಟು ಓದಿ: Nipah Virus: ಮತ್ತೆ ಹೆಚ್ಚಿದ ನಿಫಾ ವೈರಸ್​ ಭೀತಿ; ಈ ರೋಗದ ಲಕ್ಷಣಗಳೇನು?

ಇದರ ಸೋಂಕಿನ ಪ್ರಮಾಣ ಕಡಿಮೆ, ಆದರೆ ಸಾವಿನ ಪ್ರಮಾಣ ಹೆಚ್ಚು. ವೈರಸ್ ಸೋಂಕು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. 2018ರಲ್ಲಿ ಕೇರಳದಲ್ಲಿ ನಿಫಾ ಸೋಂಕು ಮೊದಲ ಬಾರಿಗೆ ಹರಡಿತ್ತು.

ಆ ಅವಧಿಯಲ್ಲಿ 18 ರೋಗಿಗಳಲ್ಲಿ 17 ಮಂದಿ ಸಾವನ್ನಪ್ಪಿದ್ದರು. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಸೋಂಕು ಹರಡುವ ಭೀತಿಯ ವಾತಾವರಣ ನಿರ್ಮಾಣವಾಗಿದೆ. ನಂತರ, 2019 ಮತ್ತು 2021 ರಲ್ಲಿ, ಸೋಂಕಿತ ರೋಗಿಗಳು ವರದಿಯಾದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು