Air India ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಮತ್ತೊಂದು ಘಟನೆ ಬೆಳಕಿಗೆ

| Updated By: ರಮೇಶ್ ಬಿ. ಜವಳಗೇರಾ

Updated on: Jan 05, 2023 | 6:35 PM

ವಿಮಾನದಲ್ಲಿ ಕುಡುಕ ಪ್ರಯಾಣಿಕನೊಬ್ಬ ಮಹಿಳೆ ಮೇಲೆ ಮೂರ್ತ ವಿಸರ್ಜನೆ ಮಾಡಿರುವ ಮತ್ತೊಂದು ಘಟನೆ ಮರುಕಳಿಸಿದೆ. ಮೊದಲು ನ್ಯೂಯಾರ್ಕ್-ದೆಹಲಿ ವಿಮಾನದಲ್ಲಿ ನಡೆದಿತ್ತು. ಇದೀಗ ಎರಡನೇ ಘಟನೆ ಪ್ಯಾರಿಸ್‌ನಿಂದ (Paris) ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ನಡೆದಿದೆ,

Air India ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ಮತ್ತೊಂದು ಘಟನೆ ಬೆಳಕಿಗೆ
ಸಾಂದರ್ಭಿಕ ಚಿತ್ರ
Follow us on

ನವದೆಹಲಿ: ವಿಮಾನದಲ್ಲಿ (Flight) ವ್ಯಕ್ತಿಯೊಬ್ಬ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ (Urinate) ಮಾಡಿರುವ ಮತ್ತೊಂದು ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ. ಪ್ಯಾರಿಸ್‌ನಿಂದ (Paris) ದೆಹಲಿಗೆ ಬರುತ್ತಿದ್ದ ವಿಮಾನದಲ್ಲಿ ಕುಡಿದ ಮತ್ತಿನಲ್ಲಿದ್ದ ಪುರುಷ ಪ್ರಯಾಣಿಕನೊಬ್ಬ (Passenger) ಮಹಿಳಾ ಪ್ರಯಾಣಿಕರೊಬ್ಬರ ಬ್ಲಾಂಕೆಟ್​ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ನಡೆದಿದೆ.

ಇದನ್ನೂ ಓದಿ: Air India Flight: ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜಿಸಿದ ಕುಡುಕ ಪ್ರಯಾಣಿಕ

ಮಹಿಳಾ ಪ್ರಯಾಣಿಕರೊಬ್ಬರ ಹೊದಿಕೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಡಿಸೆಂಬರ್ 6 ರಂದು ಈ ಘಟನೆ ನಡಿದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆದ್ರೆ, ಪ್ರಯಾಣಿಕ ಲಿಖಿತವಾಗಿ ಕ್ಷಮೆಯಾಚಿಸಿದ ನಂತರ ಈ ಘಟನೆಗೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಡಿಸೆಂಬರ್ 6 ರಂದು ಏರ್ ಇಂಡಿಯಾ ಫ್ಲೈಟ್ 142 ನಲ್ಲಿ ಸಂಭವಿಸಿದ್ದು, ಬಳಿಕ ವಿಮಾನದ ಪೈಲಟ್ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದ ಏರ್ ಟ್ರಾಫಿಕ್ ಕಂಟ್ರೋಲ್ (ಎಟಿಸಿ) ಗೆ ವಿಷಯವನ್ನು ತಿಳಿಸಿದ್ದಾರೆ. ನಂತರ ಮೂತ್ರ ವಿಸರ್ಜನೆ ಮಾಡಿದ್ದ ಪ್ರಯಾಣಿಕ ವಿಮಾನದಿಂದ ಕೆಳಗಿಳಿಯುತ್ತಿದ್ದಂತೆಯೇ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ವಶಕ್ಕೆ ಪಡೆದುಕೊಂಡಿದೆ. ತದನಂತರ ಲಿಖಿತರೂಪದಲ್ಲಿ ಘಟನೆಗೆ ಕ್ಷಮೆಯಾಚನೆ ಬರೆದುಕೊಟ್ಟಿದ್ದರಿಂದ ಆತನನ್ನು ಬಿಟ್ಟು ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: Air India Flight: ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಗೆ ವಿಮಾನ ನಿರ್ಬಂಧ

ನ್ಯೂಯಾರ್ಕ್-ದೆಹಲಿ ವಿಮಾನದಲ್ಲೂ ಇದೇ ತರ ಘಟನೆ

ಇದೇ ತರ ನವೆಂಬರ್ 26ರಂದು ನವೆಂಬರ್ 26 ರಂದು ನ್ಯೂಯಾರ್ಕ್-ದೆಹಲಿ (New York -Delhi) ಏರ್ ಇಂಡಿಯಾ (Air India) ವಿಮಾನದಲ್ಲಿ ವೃದ್ಧೆ (Aged Women) ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಘಟನೆ ನಡೆದಿತ್ತು. ನಂತರ ಸಂತ್ರಸ್ಥೆ ಏರ್ ಇಂಡಿಯಾಗೆ ನೀಡಿದ ದೂರಿನ ಆಧಾರದ ಮೇಲೆ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

ಈ ಬಗ್ಗೆ ಸಾರ್ವಜನಿಕ ಆಕ್ರೋಶ ವ್ಯಕ್ತವಾದ ನಂತರ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯನ್ನು ಏರ್‌ಲೈನ್ಸ್ 30 ದಿನಗಳ ಕಾಲ ಏರ್ ಇಂಡಿಯಾದಲ್ಲಿ ಪ್ರಯಾಣಿಸುವುದನ್ನು ನಿಷೇಧಿಸಿದೆ ಎಂದು ವರದಿ ತಿಳಿಸಿದೆ. ವಿಮಾನ ಸಿಬ್ಬಂದಿಯ ಬೇಜಾಬ್ದಾರಿಯ ಬಗ್ಗೆ ತನಿಖೆ ನಡೆಸಲು ಏರ್ ಇಂಡಿಯಾ ಆಂತರಿಕ ಸಮಿತಿಯನ್ನು ರಚಿಸಿದೆ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ. ಈ ಬಗ್ಗೆ ಏರ್ ಇಂಡಿಯಾ ಅಧಿಕಾರಗಳು ತಕ್ಷಣಕ್ಕೆ ಕ್ರಮ ಕೈಗೊಳ್ಳದೇ ದೊಡ್ಡ ತಪ್ಪು ಉಂಟಾಗಿದೆ. ಈ ಕಾರಣಕ್ಕೆ ವ್ಯವಸ್ಥೆಯ ನ್ಯೂನತೆಗಳನ್ನು ಪರಿಹರಿಸುವ ಪ್ರಯತ್ನವನ್ನು ಮಾಡುತ್ತೇವೆ ಎಂದು ಹೇಳಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ