ವಯನಾಡಿನಿಂದ ಸ್ಪರ್ಧಿಸಿದ್ದ ಇನ್ನೊಬ್ಬ ರಾಹುಲ್ ಗಾಂಧಿ ಕೂಡ ಅನರ್ಹ; ಯಾರು ಇವರು?

ಆಗ 33 ವರ್ಷ ವಯಸ್ಸಿನ ರಾಹುಲ್ ಗಾಂಧಿ ಕೆ ಇ ಅವರು ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ  ರಾಹುಲ್,  7 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದರು

ವಯನಾಡಿನಿಂದ ಸ್ಪರ್ಧಿಸಿದ್ದ ಇನ್ನೊಬ್ಬ ರಾಹುಲ್ ಗಾಂಧಿ ಕೂಡ ಅನರ್ಹ; ಯಾರು ಇವರು?
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Mar 31, 2023 | 4:22 PM

ಲೋಕಸಭೆಯಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ (Rahul Gandhi) ಅನರ್ಹತೆ ಚರ್ಚೆಯಾಗುತ್ತಿರುವ ಈ ಹೊತ್ತಲ್ಲಿ2019 ರಲ್ಲಿ ಕೇರಳದ ಅದೇ ವಯನಾಡ್ (Lok Sabha) ಕ್ಷೇತ್ರದಿಂದ ಸ್ಪರ್ಧಿಸಿದ್ದ ಇನ್ನೊಬ್ಬ ‘ರಾಹುಲ್ ಗಾಂಧಿ’ ಕೂಡ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹಗೊಂಡಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಮಾರ್ಚ್ 29 ರಂದು ಭಾರತದ ಚುನಾವಣಾ ಆಯೋಗವು (ECI) ಎಲ್ಲಾ ರಾಜ್ಯಗಳ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ಕಳುಹಿಸಿದ ಜನಪ್ರತಿನಿಧಿ ಕಾಯ್ದೆ, 1951 ರ ಸೆಕ್ಷನ್ 10 ಎ ಅಡಿಯಲ್ಲಿ ಅನರ್ಹಗೊಂಡ ವ್ಯಕ್ತಿಗಳ ಸಾಮಾನ್ಯ ಪಟ್ಟಿಯಲ್ಲಿ, ರಾಹುಲ್ ಗಾಂಧಿ ಕೆ.ಇ. ಕೊಟ್ಟಾಯಂ ಒಳಗೊಂಡಿತ್ತು. ಪಟ್ಟಿಯ ಪ್ರಕಾರ ಅವರನ್ನು ಮೂರು ವರ್ಷಗಳ ಅವಧಿಗೆ ಸೆಪ್ಟೆಂಬರ್ 9, 2021 ರಂದು ಅನರ್ಹಗೊಳಿಸಲಾಯಿತು.

ಸೆಕ್ಷನ್ 10ಎ ಅಡಿಯಲ್ಲಿ, ಚುನಾವಣೆಗೆ ಸ್ಪರ್ಧಿಸಿದ ನಂತರ ಚುನಾವಣಾ ವೆಚ್ಚದ ಖಾತೆಯನ್ನು ಇಸಿಐಗೆ ಸಲ್ಲಿಸಲು ವಿಫಲರಾದವರನ್ನು ಮೂರು ವರ್ಷಗಳ ಅವಧಿಗೆ ಅನರ್ಹಗೊಳಿಸಲಾಗುತ್ತದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರು ಪಟ್ಟಿಯಲ್ಲಿ ಇರಲಿಲ್ಲ. ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಯ ನಂತರ ಮಾರ್ಚ್ 23 ರಂದು ಅವರನ್ನು ಅನರ್ಹಗೊಳಿಸಲಾಗಿದ್ದರೂ, ವಿಚಾರಣಾ ನ್ಯಾಯಾಲಯವು ಕಾನೂನು ಪರಿಹಾರವನ್ನು ಪಡೆಯಲು ಅವರಿಗೆ 30 ದಿನಗಳ ಕಾಲಾವಕಾಶವನ್ನು ನೀಡಲಾಯಿತು.

ಆಗ 33 ವರ್ಷ ವಯಸ್ಸಿನ ರಾಹುಲ್ ಗಾಂಧಿ ಕೆ ಇ ಅವರು ಲೋಕಸಭೆ ಚುನಾವಣೆಯಲ್ಲಿ ವಯನಾಡ್‌ನಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕ  ರಾಹುಲ್,  7 ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದರು. ರಾಹುಲ್ ಗಾಂಧಿ ಕೆ ಇ, ರಾಘುಲ್ ಗಾಂಧಿ ಕೆ ಎಂಬ ಇಬ್ಬರು ಬರೀ ಹೆಸರು ಮಾತ್ರಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.ರಾಹುಲ್ ಗಾಂಧಿ ಕೆ ಇ 2,196 ಮತಗಳನ್ನು ಪಡೆದರೆ, ರಾಘುಲ್ ಗಾಂಧಿ ಕೆ 845 ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: Navjot Singh Sidhu: ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ನಾಳೆ ಪಟಿಯಾಲ ಜೈಲಿನಿಂದ ಬಿಡುಗಡೆ

ರಾಹುಲ್ ಗಾಂಧಿ ಕೆ ಇ ಅವರಲ್ಲಿ ಅನರ್ಹತೆಯ ಬಗ್ಗೆ ಕೇಳಿದಾಗ ತಾನು 2019 ರ ಚುನಾವಣೆಯಲ್ಲಿ ಸ್ಪರ್ಧಿಸಿರುವುದಾಗಿ ಹೇಳಿದ್ದು ಹೆಚ್ಚಿನ ವಿಷಯ ಹೇಳಲು ನಿರಾಕರಿಸಿದರು. ನಾನು ಆ ರಾಹುಲ್ ಗಾಂಧಿ ಅಲ್ಲ ಎಂದು ಅವರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ