ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಸಾವಿಗೆ ಶರಣು, ವರ್ಷದಲ್ಲಿ 7ನೇ ಘಟನೆ

ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ, ವರ್ಷದಲ್ಲಿ ಸಂಭವಿಸಿದ 7ನೇ ಘಟನೆ ಇದಾಗಿದೆ. ನೀಟ್‌ಗೆ ತಯಾರಿ ನಡೆಸುತ್ತಿದ್ದ 20 ವರ್ಷದ ಉರುಜ್ ಖಾನ್ ಎಂಬಾತ ನಗರದ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 2024ರಲ್ಲಿ ಸಂಭವಿಸಿದ 7ನೇ ಘಟನೆ ಇದಾಗಿದೆ.

ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಸಾವಿಗೆ ಶರಣು, ವರ್ಷದಲ್ಲಿ 7ನೇ ಘಟನೆ
ಪ್ರಾತಿನಿಧಿಕ ಚಿತ್ರ
Follow us
ನಯನಾ ರಾಜೀವ್
|

Updated on: Mar 26, 2024 | 3:14 PM

ರಾಜಸ್ಥಾನದ ಕೋಟಾದಲ್ಲಿ ಮತ್ತೋರ್ವ ನೀಟ್​ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ, ವರ್ಷದಲ್ಲಿ ಸಂಭವಿಸಿದ 7ನೇ ಘಟನೆ ಇದಾಗಿದೆ. ನೀಟ್‌ಗೆ ತಯಾರಿ ನಡೆಸುತ್ತಿದ್ದ 20 ವರ್ಷದ ಉರುಜ್ ಖಾನ್ ಎಂಬಾತ ನಗರದ ಬಾಡಿಗೆ ಕೊಠಡಿಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 2024ರಲ್ಲಿ ಸಂಭವಿಸಿದ 7ನೇ ಘಟನೆ ಇದಾಗಿದೆ.

ಕಳೆದ ವರ್ಷದಲ್ಲಿ ವಿದ್ಯಾರ್ಥಿಗಳ ಸಾವಿನ ಸಂಖ್ಯೆ 29 ರಷ್ಟಿತ್ತು. ಉತ್ತರ ಪ್ರದೇಶದ ಕನೌಜ್ ನಿವಾಸಿಯಾಗಿರುವ ಮೃತ ಉರುಜ್ ಖಾನ್, ವಿಜ್ಞಾನನಗರ ಪ್ರದೇಶದ ಬಾಡಿಗೆ ಫ್ಲಾಟ್‌ನಲ್ಲಿ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉರುಜ್ ವಾಸವಿದ್ದ ಕಟ್ಟಡದ ಸಿಬ್ಬಂದಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.

ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ತಮ್ಮ ವಶಕ್ಕೆ ಪಡೆದು ಸಮೀಪದ ಎಂಬಿಎಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಉರುಜ್ ಖಾನ್ ಅವರು 20 ದಿನಗಳ ಹಿಂದಷ್ಟೇ ಕೊಠಡಿಗೆ ಸ್ಥಳಾಂತರಗೊಂಡಿದ್ದರು ಆದರೆ ಕೋಟಾದಲ್ಲಿ ದೀರ್ಘಕಾಲ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಜಸ್ಥಾನದ ಕೋಟಾದಲ್ಲಿ ಐಐಟಿ ಆಕಾಂಕ್ಷಿ ಆತ್ಮಹತ್ಯೆ, ಇದು ಈ ವರ್ಷ 4ನೇ ಪ್ರಕರಣ

ನೀಟ್ ಆಕಾಂಕ್ಷಿ ತೀವ್ರ ಹೆಜ್ಜೆ ಇಡಲು ಕಾರಣವೇನು ಎಂಬುದು ಸದ್ಯಕ್ಕೆ ತಿಳಿದಿಲ್ಲ. ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪೊಲೀಸರು ಮಾಹಿತಿ ನೀಡಿದ್ದು, ಬಂದ ನಂತರ ಶವಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಮಾರ್ಚ್‌ನಲ್ಲಿ ಕೋಟಾದಲ್ಲಿ ಜೆಇಇ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ವಿದ್ಯಾರ್ಥಿಯನ್ನು ಅಭಿಷೇಕ್ ಕುಮಾರ್ ಎಂದು ಗುರುತಿಸಲಾಗಿದ್ದು, ಬಿಹಾರದ ಭಾಗಲ್ಪುರ ಜಿಲ್ಲೆಯವರು.

ಜೆಇಇ ಆಕಾಂಕ್ಷಿಯಾಗಿದ್ದ ಅಭಿಷೇಕ್ ನಗರದ ವಿಜ್ಞಾನನಗರ ಪ್ರದೇಶದಲ್ಲಿ ಬಾಡಿಗೆಗೆ ಪಡೆದಿದ್ದ ಕೋಣೆಯಲ್ಲಿ ವಿಷಕಾರಿ ಪದಾರ್ಥ ಸೇವಿಸಿದ್ದರು. ಘಟನೆಯ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, ಕುಮಾರ್ ಅವರ ಕೊಠಡಿಯಿಂದ ವಿಷಕಾರಿ ಪದಾರ್ಥದ ಬಾಟಲಿ ಮತ್ತು ಆತ್ಮಹತ್ಯೆ ಪತ್ರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ