ಕೋಟಾ: ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ

|

Updated on: Jan 24, 2024 | 11:13 AM

ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಪ್ರದೇಶದ ಮೊರಾದಾಬಾದ್ ಮೂಲದ ಮೊಹಮ್ಮದ್ ಜೈದ್, ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಅಖಿಲ ಭಾರತ ಪ್ರವೇಶ ಪರೀಕ್ಷೆಯಾದ ನೀಟ್‌ಗೆ ತಯಾರಿ ನಡೆಸುತ್ತಿದ್ದ.

ಕೋಟಾ: ನೀಟ್​ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ
ಸಾವು
Image Credit source: The Statesman
Follow us on

ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಮತ್ತೋರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉತ್ತರ ಪ್ರದೇಶದ ಮೊರಾದಾಬಾದ್ ಮೂಲದ ಮೊಹಮ್ಮದ್ ಜೈದ್, ವೈದ್ಯಕೀಯ ಕಾಲೇಜುಗಳ ಪ್ರವೇಶಕ್ಕಾಗಿ ಅಖಿಲ ಭಾರತ ಪ್ರವೇಶ ಪರೀಕ್ಷೆಯಾದ ನೀಟ್‌ಗೆ ತಯಾರಿ ನಡೆಸುತ್ತಿದ್ದ.

ಕೋಟಾದ ಜವಾಹರ್ ನಗರ ಪ್ರದೇಶದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ, ನಿನ್ನೆ ರಾತ್ರಿ ಆತ ತನ್ನ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಝೈದ್ ಅವರು NEET ನಲ್ಲಿ ತನ್ನ ಎರಡನೇ ಪ್ರಯತ್ನಕ್ಕೆ ತಯಾರಿ ನಡೆಸುತ್ತಿದ್ದ ಎಂಬುದು ತಿಳಿದುಬಂದಿದೆ.

ಪೊಲೀಸರು ಮೃತದೇಹವನ್ನು ವಶಪಡಿಸಿಕೊಂಡಿದ್ದು, ಯುವಕನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಕೋಟಾ ತಲುಪಿದ ನಂತರ ಶವಪರೀಕ್ಷೆ ನಡೆಸಲಾಗುವುದು. ಯಾವುದೇ ಸೂಸೈಡ್​ ನೋಟ್​ ಇನ್ನೂ ಪತ್ತೆಯಾಗಿಲ್ಲ, ಯಾವ ಕಾರಣಕ್ಕಾಗಿ ಝೈದ್ ಈ ರೀತಿಯ ನಿರ್ಧಾರ ತೆಗೆದುಕೊಂಡಿರಬಹುದು ಎಂಬುದರ ಕುರಿತು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕೋಟಾ: ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣು, ವರ್ಷದಲ್ಲಿ 23ನೇ ಘಟನೆ

ವಿದ್ಯಾರ್ಥಿಗಳ ಆತ್ಮಹತ್ಯೆಗೆ ಪೋಷಕರೇ ಕಾರಣ
ಕೋಟಾ(Kota) ಆತ್ಮಹತ್ಯೆ ಪ್ರಕರಣದಲ್ಲಿ ಮಕ್ಕಳ ಪೋಷಕರೇ ಹೊಣೆಗಾರರೆಂದು ಸುಪ್ರೀಂ ಕೋರ್ಟ್ ಹೇಳಿದೆ. ಕೋಟಾದಲ್ಲಿ ಮಕ್ಕಳ ಆತ್ಮಹತ್ಯೆ ಪ್ರಮಾಣಕ್ಕೆ ಪೋಷಕರು ಮಾತ್ರ ಕಾರಣ ಎಂದು ಅರ್ಜಿಯೊಂದರ ವಿಚಾರಣೆ ವೇಳೆ ನ್ಯಾಯಾಲಯ ಹೇಳಿದೆ. ಇದರೊಂದಿಗೆ ಕೋಚಿಂಗ್ ಸೆಂಟರ್‌ಗಳಿಗೆ ಲಗಾಮು ಹಾಕಲು ಕೋರ್ಟ್ ನಿರಾಕರಿಸಿದೆ. ಕೋಟಾದಲ್ಲಿ ಈ ವರ್ಷ ಇಲ್ಲಿಯವರೆಗೆ 24 ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪೋಷಕರು ತಮ್ಮ ಮಕ್ಕಳಿಂದ ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನದನ್ನು ನಿರೀಕ್ಷಿಸುತ್ತಾರೆ. ಇದರಿಂದ ಮಕ್ಕಳು ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಯಂತಹ ಹೆಜ್ಜೆ ಇಡುತ್ತಾರೆ. ಮಕ್ಕಳ ಆತ್ಮಹತ್ಯೆಗೆ ಕೋಚಿಂಗ್ ಸೆಂಟರ್‌ಗಳೇ ಕಾರಣ ಎಂದು ಮುಂಬೈ ಮೂಲದ ವೈದ್ಯ ಅನಿರುದ್ಧ್ ನಾರಾಯಣ್ ಮಲ್ಪಾನಿ ​​ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ.

ಇದರೊಂದಿಗೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿ ಕನಿಷ್ಠ ಗುಣಮಟ್ಟವನ್ನು ಕಾಯ್ದುಕೊಳ್ಳುವ ಬಗ್ಗೆಯೂ ಅವರು ತಮ್ಮ ಅರ್ಜಿಯಲ್ಲಿ ಮಾತನಾಡಿದ್ದಾರೆ. ಈ ಕುರಿತು ಕಾನೂನು ರೂಪಿಸಲು ನ್ಯಾಯಾಲಯ ನಿರಾಕರಿಸಿದೆ. ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು, ತಪ್ಪು ಮಕ್ಕಳ ಪೋಷಕರಲ್ಲಿದೆಯೇ ಹೊರತು ಕೋಚಿಂಗ್ ಸಂಸ್ಥೆಗಳದ್ದಲ್ಲ ಎಂದು ಹೇಳಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ