CAA ವಿರುದ್ಧ 7 ಈಶಾನ್ಯ ರಾಜ್ಯ ವಿದ್ಯಾರ್ಥಿಗಳಿಂದ Black Day ಆಚರಣೆ

ಕೊರೊನಾ ಬಳಿಕ ಮಸುಕಾಗಿದ್ದ CAA ವಿರುದ್ಧದ ಪ್ರತಿಭಟನೆಗಳು ಮತ್ತೆ ಸದ್ದು ಮಾಡುತ್ತಿವೆ. ಈಶಾನ್ಯ ರಾಜ್ಯದ ವಿದ್ಯಾರ್ಥಿಗಳು ಡಿ.11ರಂದು ‘Black Day’ ಆಚರಿಸಲಿದ್ದಾರೆ.

CAA ವಿರುದ್ಧ 7 ಈಶಾನ್ಯ ರಾಜ್ಯ ವಿದ್ಯಾರ್ಥಿಗಳಿಂದ Black Day ಆಚರಣೆ
ಸಂಗ್ರಹ ಚಿತ್ರ
Follow us
TV9 Web
| Updated By: ganapathi bhat

Updated on:Apr 07, 2022 | 5:44 PM

ಗುವಹಾಟಿ: ಕೊವಿಡ್ ಕಾರಣದಿಂದ ಮಸುಕಾಗಿದ್ದ CAA (Citizenship Amendment Act), National Register of Citizens (NRC) ವಿಚಾರವು ಮತ್ತೆ ಮುನ್ನೆಲೆಗೆ ಬರುವ ಸೂಚನೆ ಕಂಡುಬಂದಿದೆ. ಸಿಎಎ ರದ್ದತಿಯನ್ನು ಕೋರಿ NESO (North East Students Organization) ವಿದ್ಯಾರ್ಥಿ ಸಂಘಟನೆಯು ಡಿ. 11ರಂದು ‘Black Day’ ಆಚರಿಸಲಿದ್ದು, ಈಶಾನ್ಯ ರಾಜ್ಯಗಳಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ತಿಳಿದುಬಂದಿದೆ.

ಈಶಾನ್ಯ ರಾಜ್ಯಗಳ ಜನರು ಸಿಎಎ ತಿದ್ದುಪಡಿ ಕಾಯ್ದೆ 2019ನ್ನು ವಿರೋಧಿಸುತ್ತಲೇ ಬಂದಿದ್ದೇವೆ. ಆದರೂ, ಸರ್ಕಾರ ಇತ್ತಕಡೆ ಗಮನ ಹರಿಸದೇ ಕಾಯ್ದೆಯನ್ನು ಅಂಗೀಕರಿಸಿದೆ ಎಂದು NESO ಮುಖ್ಯಸ್ಥ, ಸ್ಯಾಮುಯಲ್ ಬಿ ಜೈರ್ವಾ ಹೇಳಿದ್ದಾರೆ. ಹೀಗಾಗಿ ಎಲ್ಲಾ 7 ಈಶಾನ್ಯ ರಾಜ್ಯಗಳ ಮುಖ್ಯ ನಗರಗಳಲ್ಲಿ ಕಪ್ಪು ಬಾವುಟ, ಕಪ್ಪು ಫಲಕಗಳನ್ನು ಹಿಡಿದು ಸಿಎಎ ವಿರುದ್ಧ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಈ ಮೂಲಕ ಸಿಎಎ ವಿರೋಧಿ ಸಂದೇಶವನ್ನು ಸರ್ಕಾರಕ್ಕೆ ರವಾನಿಸುವ ಇರಾದೆಯನ್ನು NESO ಹೊಂದಿದೆ. ಜೊತೆಗೆ, ಸರ್ಕಾರದ ಅನ್ಯಾಯವನ್ನು ಜನರಿಗೆ ಮನವರಿಕೆ ಮಾಡುವ ಉದ್ದೇಶವನ್ನೂ ಈ ಪ್ರತಿಭಟನೆ ಹೊಂದಿದೆ ಎಂದು NESO ಮುಖಂಡರು ಹೇಳಿದ್ದಾರೆ. NESO ಸಂಘಟನೆಯು ಏಳು ಈಶಾನ್ಯ ರಾಜ್ಯಗಳ, ಎಂಟು ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವಾಗಿದೆ.

ಸಿಎಎ ಮತ್ತು ಎನ್​ಆರ್​ಸಿ ತಿದ್ದುಪಡಿ ಕಾಯ್ದೆಯು ಕಳೆದ ವರ್ಷ ಡಿ. 9ರಂದು ಲೋಕಸಭೆಯಲ್ಲಿ ಒಪ್ಪಿಗೆ ಪಡೆದಿತ್ತು. ಡಿ. 11ರಂದು ರಾಜ್ಯಸಭೆಯಲ್ಲಿ ಅನುಮೋದನೆ ಪಡೆದಿತ್ತು ಮತ್ತು ಡಿ. 12ರಂದು ರಾಷ್ಟ್ರಪತಿಗಳಿಂದಲೂ ಅಂಗೀಕರಿಸಲ್ಪಟ್ಟಿತ್ತು. ಆ ಬಳಿಕ ದೇಶಾದ್ಯಂತ ಈ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆಗಳು ನಡೆದಿದ್ದವು. ಕೊವಿಡ್ ಕಾರಣದಿಂದ ಪ್ರತಿಭಟನೆ ಕಾವು ಕಡಿಮೆಯಾಗಿತ್ತು. ಇದೀಗ ಒಂದು ವರ್ಷದ ಬಳಿಕ ಸಿಎಎ ಮತ್ತೆ ಸದ್ದು ಮಾಡುವಂತೆ ಕಾಣುತ್ತಿದೆ.

Explainer | ಪೌರತ್ವ ತಿದ್ದುಪಡಿ ಕಾಯ್ದೆ ಎಂದು ಅನುಷ್ಠಾನ? ಏಕಿಷ್ಟು ವಿರೋಧ?

Published On - 11:21 am, Fri, 11 December 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ