Rupali Ganguly Joins BJP: ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ

ನಟಿ ರೂಪಾಲಿ ಗಂಗೂಲಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಅವರ ಜತೆ ನಾನೂ ಕೈಜೋಡಿಸಬೇಕೆಂಬ ಹೆಬ್ಬಯಕೆಯಿಂದ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ, ಒಳ್ಳೆಯ ಕೆಲಸಗಳನ್ನು ಮಾಡುವಂತೆ ನನಗೆ ಆಶೀರ್ವಾದ ಮಾಡಿ ಎಂದು ಕೇಳಿಕೊಂಡಿದ್ದಾರೆ.

Rupali Ganguly Joins BJP: ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿಗೆ ಸೇರ್ಪಡೆ
ರೂಪಾಲಿ ಗಂಗೂಲಿ
Follow us
ನಯನಾ ರಾಜೀವ್
|

Updated on:May 01, 2024 | 1:06 PM

ಅನುಪಮಾ ಖ್ಯಾತಿಯ ನಟಿ ರೂಪಾಲಿ ಗಂಗೂಲಿ(Rupali Ganguly) ಇಂದು ಬಿಜೆಪಿ(BJP)ಗೆ ಸೇರ್ಪಡೆಗೊಂಡಿದ್ದಾರೆ. ಬುಧವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷಕ್ಕೆ ಸೇರ್ಪಡೆಯಾದ ನಂತರ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿನ ಅಭಿವೃದ್ಧಿಯಿಂದಾಗಿ ನಾನು ಬಿಜೆಪಿಗೆ ಸೇರಿದ್ದೇನೆ ಎಂದು ನಟಿ ಹೇಳಿದರು.

ಅಭಿವೃದ್ಧಿಯ ಈ ಮಹಾಯಜ್ಞವನ್ನು ನೋಡಿದಾಗ ನನಗೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಅನಿಸುತ್ತದೆ. ನಾನು ಏನೇ ಮಾಡಿದರೂ ಸರಿಯಾಗಿ, ಒಳ್ಳೆಯದನ್ನು ಮಾಡುವಂತೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ಬೇಕು ಎಂದು ಅವರು ಹೇಳಿದರು.

ಪಕ್ಷದ ಮುಖಂಡರಾದ ವಿನೋದ್ ತಾವ್ಡೆ ಮತ್ತು ಅನಿಲ್ ಬಲುನಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಮಾರ್ಚ್​ನಲ್ಲಿ ರೂಪಾಲಿ ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದರು, ಬಳಿಕ ಇದು ನನ್ನ ಜೀವನದ ಅತ್ಯಂತ ಸ್ಮರಣೀಯ ದಿನ, ಎಂದೂ ಮರೆಯಲು ಸಾಧ್ಯವಾಗದು, ಮೋದಿಯವರನ್ನು ಭೇಟಿಯಾಗುವ ಕನಸು ನನಸಾಯಿತು ಎಂದು ಬರೆದಿದ್ದರು.

ಮತ್ತಷ್ಟು ಓದಿ: Lok Sabha Election 2024: ಬಿಜೆಪಿಗೆ ಸಿಖ್ಖರ ಬಲ, ದೆಹಲಿಯಲ್ಲಿ 1,500 ಮಂದಿ ಸಿಖ್ಖರು ಬಿಜೆಪಿಗೆ ಸೇರ್ಪಡೆ

ರೂಪಾಲಿ ಅವರು ಸಿನಿಮಾ ನಿರ್ದೇಶಕ ಅನಿಲ್ ಗಂಗೂಲಿ ಅವರ ಪುತ್ರಿ, ನಟಿ ತನ್ನ ವೃತ್ತಿ ಜೀವನವನ್ನು 7ನೇ ವಯಸ್ಸಿನಲ್ಲಿ ಪ್ರಾರಂಭಿಸಿದರು. ಅವರು ತಮ್ಮ ತಂದೆಯ ಸಾಹೇಬ ಚಿತ್ರದಲ್ಲಿ ತಮ್ಮ ಮೊದಲ ಪಾತ್ರ ನಿರ್ವಹಿಸಿದರು. ಆದರೆ 2023ರಲ್ಲಿ ಬಂದ ಸಂಜೀವಿನಿ ಎ ಮೆಡಿಕಲ್ ಬೂನ್ ಧಾರಾವಾಹಿಯಿಂದ ರೂಪಾಳಿಗೆ ಮನ್ನಣೆ ಸಿಕ್ಕಿತ್ತು.

ನಟಿ ಬಿಗ್​ಬಾಸ್ ಸೀಸನ್​ 1ರಲ್ಲೂ ಭಾಗವಹಿಸಿದ್ದರು. ಸಾರಾಭಾಯ್ ವರ್ಸಸ್ ಸಾರಾಭಾಯ್ ನಂತಹ ಹಿಟ್​ ಶೋಗಳಲ್ಲೂ ಭಾಗವಹಿಸಿದ್ದರು. 2013ರಲ್ಲಿ ಪರ್ವರಿಶ್​ ಧಾರಾವಾಹಿ ಮಾಡಿದ ಬಳಿಕ 7 ವರ್ಷಗಳ ವಿರಾಮ ತೆಗೆದುಕೊಂಡಿದ್ದರು. ಬಳಿಕ ಅನುಪಮಾ ಮೂಲಕ ಕಿರುತೆರೆಗೆ ಬಂದರು.

ನಟರಾದ ಕಂಗನಾ ರಣಾವತ್, 6 ಬಾರಿ ಮಧ್ಯಪ್ರದೇಶದ ಶಾಸಕ ರಾಮ್​ನಿವಾಸ್ ರಾವತ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಆಪ್ತ ಸಹಾಯಕ ತಜೀಂದರ್ ಬಿಟ್ಟು ಈ ವರ್ಷ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:57 pm, Wed, 1 May 24

ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಚಿಕ್ಕಬಳ್ಳಾಪುರ: ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ದಟ್ಟವಾದ ಮಂಜು
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಹೇಗಿದೆ ಧರ್ಮಸ್ಥಳ ಸುಸಜ್ಜಿತ ಕ್ಯೂ ಕಾಂಪ್ಲೆಕ್ಸ್‌? ಇಲ್ಲಿದೆ ಡ್ರೋನ್ ದೃಶ್ಯ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ
ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ