ನವ ದೆಹಲಿ: ರಾಜೀವ್ ಗಾಂಧಿ ಫೌಂಡೇಶನ್ಗೆ ಚೀನಾ ನೀಡಿದ ದೇಣಿಗೆ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಇಲ್ಲಿಯವರೆಗೆ ಯಾವುದೇ ಉತ್ತರ ನೀಡಿಲ್ಲ. ಚೀನಾವನ್ನು ಅತಿಕ್ರಮಿಸಲು ಪ್ರಯತ್ನಿಸುತ್ತಿದ್ದ ಸಮಯದಲ್ಲಿ ರಾಹುಲ್ ಗಾಂಧಿ ಚೀನಾದ ಅಧಿಕಾರಿಗಳೊಂದಿಗೆ ಏನು ಮಾಡುತ್ತಿದ್ದರು ಎಂದು ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ವಾಗ್ದಾಳಿ ಮಾಡಿದ್ದಾರೆ. ಇಂದು (ಫೆ. 26) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಹುಲ್ ಗಾಂಧಿ ನಮ್ಮ ಸೇನೆಯನ್ನು ಅವಮಾನಿಸಿದ್ದಾರೆ. ಇವರು ಮತ್ತು ಕಾಂಗ್ರೆಸ್ ಪಕ್ಷ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದರು. ನಮ್ಮ ಸೈನಿಕರ ನೈತಿಕ ಸ್ಥೈರ್ಯವನ್ನು ಸೋಲಿಸಲು ಪ್ರಯತ್ನಿಸಿದ್ದರು. ಕಾಂಗ್ರೆಸ್ ಪ್ರತಿ ಬಾರಿಯೂ ಭಾರತೀಯ ಸೇನೆಯನ್ನು ಅವಮಾನಿಸುವ ಕೆಲಸ ಮಾಡಿದೆ ಎಂದು ಹರಿಹಾಯ್ದರು.
ವಿಪತ್ತಿನ ಸಂದರ್ಭದಲ್ಲಿ ನೆರೆಯ ದೇಶಗಳಿಗೆ ಭಾರತವೂ ಸಂಪೂರ್ಣ ನೆರವು ನೀಡಿದೆ. ಯಾರಿಗಾದರೂ ಬಿಕ್ಕಟ್ಟು ಬಂದಾಗ, ಭಾರತವು ಮೊದಲು ಪ್ರತಿಕ್ರಿಯಿಸಿದೆ. ಒಂದು ಕಾಲದಲ್ಲಿ ಸಹಾಯ ಪಡೆದುಕೊಳ್ಳುವ ದೇಶಗಳಲ್ಲಿ ಭಾರತವು ಒಂದಾಗಿತ್ತು. ಆದರೆ ಇಂದು ಪ್ರಧಾನಿ ಮೋದಿಯವರ ಸರ್ಕಾರದಲ್ಲಿ ಇತರೇ ದೇಶಗಳಿಗೆ ಸಹಾಯಹಸ್ತ ನೀಡುವಷ್ಟು ಭಾರತ ಮುಂದುವರೆದಿದೆ.
ಇದನ್ನೂ ಓದಿ: Bharat Jodo Yatra 2.0: ಈ ಬಾರಿ ಪೂರ್ವದಿಂದ ಪಶ್ಚಿಮ; ಇನ್ನೊಂದು ಭಾರತ್ ಜೋಡೋ ಯಾತ್ರೆಗೆ ಕಾಂಗ್ರೆಸ್ ಚಿಂತನೆ
ಅದರಲ್ಲೂ ಯುದ್ಧ ಎಂದು ಯೋಚಿಸುತ್ತಿದ್ದವರಿಗೆ ನಮ್ಮ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ಈ ಸಂದರ್ಭದಲ್ಲಿ, ಪ್ರಧಾನಿ ಮೋದಿ ಅವರು ಪೂರ್ಣ ಬಲದೊಂದಿಗೆ ಸೇನೆಯ ಹಿಂದೆ ನಿಂತರು. ಪ್ರಧಾನಿ ಹಾಗೂ ರಕ್ಷಣಾ ಸಚಿವರು ಕೂಡ ಗಡಿಗೆ ತೆರಳಿ ಸೇನೆಯ ನೈತಿಕ ಸ್ಥೈರ್ಯ ಹೆಚ್ಚಿಸಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: Delhi Drama: ಸಿಸೋಡಿಯಾ ಸಿಬಿಐ ವಿಚಾರಣೆ; ದೆಹಲಿಯಲ್ಲಿ ಸೆಕ್ಷನ್ 144; ಎಎಪಿ ಮುಖಂಡರು ವಶಕ್ಕೆ
ಇನ್ನು ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳಿದ ಅನುರಾಗ್ ಠಾಕೂರ್, ಯಾವುದೇ ಕಾರಣಕ್ಕೂ ತಲೆ ತಗ್ಗಿಸಬಾರದು, ತಲೆಯತ್ತಿ ಎದುರಾಳಿಯ ಕಣ್ಣಲ್ಲಿ ಕಣ್ಣಿಟ್ಟು ಮಾತನಾಡುವಂತೆ ಪ್ರಧಾನಿ ಮೋದಿ ಹೇಳಿದ್ದಾರೆ. ಮತ್ತು ಅದನ್ನು ಅವರು ಮಾಡಿ ತೋರಿಸಿದ್ದಾರೆ ಎಂಬ ಮಾತನ್ನು ನೆನಪಿಸಿಕೊಂಡರು. ಪ್ರಧಾನಿ ಮೋದಿ ಅವರು ಎಲ್ಲರೊಂದಿಗೆ ಪ್ರೀತಿಯಿಂದ ನಡೆದುಕೊಳ್ಳುವುದನ್ನು ಕಲಿಸಿದ್ದಾರೆ. ಜೊತೆಗೆ ಸಂಕಷ್ಟದಲ್ಲಿರುವ ನೆರೆಯ ದೇಶಗಳಿಗೂ ಸಹಾಯ ಮಾಡಿದ್ದಾರೆ ಎಂದು ತಿಳಿಸಿದರು.
ರಾಷ್ಟ್ರೀಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:38 pm, Sun, 26 February 23