ಕನಸಿನಲ್ಲಿಯೂ ನೀವು ವೀರ್ ಸಾವರ್ಕರ್ ಆಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಟಾಂಗ್​ ಕೊಟ್ಟ ಅನುರಾಗ್ ಠಾಕೂರ್

ರಾಹುಲ್ ಗಾಂಧಿ ನನ್ನ ಹೆಸರು ಸಾವರ್ಕರ್​​ ಅಲ್ಲ, ನಾನು ಯಾರಿಗೂ ಕ್ಷಮೆ ಕೇಳಲ್ಲ ಎಂದಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್​ ಭಾನುವಾರ ಸಾಲು ಸಾಲು ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ್ದಾರೆ.

ಕನಸಿನಲ್ಲಿಯೂ ನೀವು ವೀರ್ ಸಾವರ್ಕರ್ ಆಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಟಾಂಗ್​ ಕೊಟ್ಟ ಅನುರಾಗ್ ಠಾಕೂರ್
ರಾಹುಲ್​ ಗಾಂಧಿ, ಅನುರಾಗ್ ಠಾಕೂರ್​
Follow us
|

Updated on:Mar 26, 2023 | 8:07 PM

ದೆಹಲಿ: ಸಂಸತ್ತಿನಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ನನ್ನ ಹೆಸರು ಸಾವರ್ಕರ್ (Savarkar) ಅಲ್ಲ, ನಾನು ಯಾರಿಗೂ ಕ್ಷಮೆ ಕೇಳಲ್ಲ ಎಂದಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್​ ಭಾನುವಾರ ಸಾಲು ಸಾಲು ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ್ದಾರೆ. ಪ್ರೀತಿಯ ಗಾಂಧಿ ಅವರೇ, ನಿಮ್ಮ ಅತ್ಯುತ್ತಮ ಕನಸಿನಲ್ಲಿಯೂ ಸಹ ನೀವು ಸ್ವಾತಂತ್ರ್ಯ ವೀರ್ ಸಾವರ್ಕರ್ ಆಗಲು ಸಾಧ್ಯವಿಲ್ಲ. ಏಕೆಂದರೆ ಸಾವರ್ಕರ್ ಆಗಲು ಬಲವಾದ ಸಂಕಲ್ಪ, ಭಾರತದ ಮೇಲೆ ಪ್ರೀತಿ, ನಿಸ್ವಾರ್ಥತೆ ಮತ್ತು ಬದ್ಧತೆಯ ಅಗತ್ಯವಿದೆ. ನೀವು ಸಾವರ್ಕರ್ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಆ ಮೂಲಕ ನಿಮಗೂ ಮತ್ತು ಸಾವರ್ಕರ್​ ಅವರಿಗೆ ಹೋಲಿಕೆ ಸಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಸಾವರ್ಕರ್​ ಅವರಿಗೆ ಗೌರವಾರ್ಥವಾಗಿ ಬರೆದಿರುವ ಪತ್ರವನ್ನು ನೆನಪಿಸಿದ್ದಾರೆ. ಸಾವರ್ಕರ್​ ಬ್ರಿಟಿಷರ ನೆಲದಲ್ಲಿ ಹೋಗಿ ಭಾರತಿಯರನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಲು ಹೋರಾಡಿದ್ದಾರೆ. ಆದರೆ ರಾಹುಲ್ ಗಾಂಧಿ ವರ್ಷದ 6 ತಿಂಗಳು ರಜೆಗಾಗಿ ವಿದೇಶಕ್ಕೆ ಹೋಗಿ ದೇಶದ ವಿರುದ್ಧ ವಿದೇಶಿಯರ ಬಳಿ ಸಹಾಯ ಪಡೆಯುತ್ತಾರೆ. ಈ ನಿಟ್ಟಿನಲ್ಲಿ ತಮ್ಮ ಅಜ್ಜಿ ಬರೆದಿರುವ ಪತ್ರವನ್ನು ಓದಬೇಕು. ಇದರಿಂದ ನಿಮ್ಮ ತರ್ಕಕ್ಕೆ ಉತ್ತರ ಸಿಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: Priyanka Gandhi Vadra: ಹುತಾತ್ಮನ ಮಗನನ್ನು ಮೀರ್ ಜಾಫರ್ ಎಂದು ಕರೆದರು, ಆಗ ಯಾಕೆ ಪ್ರಕರಣ ದಾಖಲಾಗಲಿಲ್ಲ: ಪ್ರಿಯಾಂಕಾ ವಾಗ್ದಾಳಿ

ಸಾವರ್ಕರ್​ ಅವರು ರಾಷ್ಟ್ರೀಯ ಸ್ಮಾರಕದ ಕಾರ್ಯದರ್ಶಿ ಪಂಡಿತ್‌ ಬಖಾಲೆ ಅವರಿಗೆ 1980 ಮೇ 20 ರಂದು ಬರೆದ ಪತ್ರದಲ್ಲಿ ಇಂದಿರಾ ಗಾಂಧಿ ಅವರು ಸ್ವಾತಂತ್ರ್ಯ ಚಳವಳಿಗೆ ಸಾವರ್ಕರ್ ಅವರ ಕೊಡುಗೆಯನ್ನು ಉಲ್ಲೇಖಿಸಿದ್ದಾರೆ ಎಂಬುದು ಗಮನಾರ್ಹ. ಬ್ರಿಟಿಷ್ ಸರ್ಕಾರದ ವಿರುದ್ಧ ಸಾವರ್ಕರ್ ಅವರ ಪ್ರಬಲ ಪ್ರತಿರೋಧವು ನಮ್ಮ ಸ್ವಾತಂತ್ರ್ಯ ಚಳವಳಿಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ಇಂದಿರಾ ಅವರು ಉಲ್ಲೇಖಿಸಿದ್ದಾರೆ.

ಸಾವರ್ಕರ್ ಅವರ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟ ಪುಸ್ತಕವನ್ನು ಪಂಜಾಬಿಗೆ ಅನುವಾದಿಸಲಾಗಿದೆ. ಸಾವರ್ಕರ್ ಅವರನ್ನು ಭೇಟಿ ಮಾಡಲು ಭಗತ್ ಸಿಂಗ್​ ಸ್ವತಃ ರತ್ನಗಿರಿಗೆ ಹೋಗಿದ್ದರು. ಆದರೆ ಈ ವಿಚಾರವನ್ನು ಮುದ್ರಿಸಲಾಗಿದೆ ಎಂದು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಠಾಕೂರ್ ಹೇಳಿದರು.

ಇದನ್ನೂ ಓದಿ: Wayanad: ವಯನಾಡಿನಲ್ಲಿ ಸದಾ ಗೆಲುವನ್ನೇ ಕಂಡಿದ್ದ ಕಾಂಗ್ರೆಸ್​, ಉಪ ಚುನಾವಣೆಯಲ್ಲಿ ಮತ್ತೆ ಜನತೆಯ ವಿಶ್ವಾಸಗಳಿಸುವಲ್ಲಿ ಯಶಸ್ವಿಯಾಗುವುದೇ?

ಸಾವರ್ಕರ್​ ದೇಶಪ್ರೇಮ ಮತ್ತು ಧೈರ್ಯದ ಮುಂದೆ ತಲೆಬಾಗಿದ್ದರು. 19230 ಕಾಕಿನಾಡ ಅಧಿವೇಶನದಲ್ಲಿ ಕಾಂಗ್ರೆಸ್ ಕೂಡ ಸಾವರ್ಕರ್ ಅವರ ಪರವಾಗಿ ನಿರ್ಣಯವನ್ನು ಅಂಗೀಕರಿಸಿತ್ತು. ಭಾರತದ ಸ್ವಾತಂತ್ರ್ಯ ಚಳವಳಿಗೆ ಸಾವರ್ಕರ್ ಅವರ ಕೊಡುಗೆಯ ಸ್ಮರಣಾರ್ಥವಾಗಿ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಿದ್ದರು ಎಂದು ಸಚಿವ ಠಾಕೂರ್ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 8:07 pm, Sun, 26 March 23

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು