ದೆಹಲಿ: ಸಂಸತ್ತಿನಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ ನನ್ನ ಹೆಸರು ಸಾವರ್ಕರ್ (Savarkar) ಅಲ್ಲ, ನಾನು ಯಾರಿಗೂ ಕ್ಷಮೆ ಕೇಳಲ್ಲ ಎಂದಿದ್ದರು. ಈ ವಿಚಾರವಾಗಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಭಾನುವಾರ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಕಿಡಿಕಾರಿದ್ದಾರೆ. ಪ್ರೀತಿಯ ಗಾಂಧಿ ಅವರೇ, ನಿಮ್ಮ ಅತ್ಯುತ್ತಮ ಕನಸಿನಲ್ಲಿಯೂ ಸಹ ನೀವು ಸ್ವಾತಂತ್ರ್ಯ ವೀರ್ ಸಾವರ್ಕರ್ ಆಗಲು ಸಾಧ್ಯವಿಲ್ಲ. ಏಕೆಂದರೆ ಸಾವರ್ಕರ್ ಆಗಲು ಬಲವಾದ ಸಂಕಲ್ಪ, ಭಾರತದ ಮೇಲೆ ಪ್ರೀತಿ, ನಿಸ್ವಾರ್ಥತೆ ಮತ್ತು ಬದ್ಧತೆಯ ಅಗತ್ಯವಿದೆ. ನೀವು ಸಾವರ್ಕರ್ ಆಗಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಆ ಮೂಲಕ ನಿಮಗೂ ಮತ್ತು ಸಾವರ್ಕರ್ ಅವರಿಗೆ ಹೋಲಿಕೆ ಸಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ದಿವಂಗತ ಪ್ರಧಾನಿ ಇಂದಿರಾಗಾಂಧಿ ಅವರು ಸಾವರ್ಕರ್ ಅವರಿಗೆ ಗೌರವಾರ್ಥವಾಗಿ ಬರೆದಿರುವ ಪತ್ರವನ್ನು ನೆನಪಿಸಿದ್ದಾರೆ. ಸಾವರ್ಕರ್ ಬ್ರಿಟಿಷರ ನೆಲದಲ್ಲಿ ಹೋಗಿ ಭಾರತಿಯರನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಲು ಹೋರಾಡಿದ್ದಾರೆ. ಆದರೆ ರಾಹುಲ್ ಗಾಂಧಿ ವರ್ಷದ 6 ತಿಂಗಳು ರಜೆಗಾಗಿ ವಿದೇಶಕ್ಕೆ ಹೋಗಿ ದೇಶದ ವಿರುದ್ಧ ವಿದೇಶಿಯರ ಬಳಿ ಸಹಾಯ ಪಡೆಯುತ್ತಾರೆ. ಈ ನಿಟ್ಟಿನಲ್ಲಿ ತಮ್ಮ ಅಜ್ಜಿ ಬರೆದಿರುವ ಪತ್ರವನ್ನು ಓದಬೇಕು. ಇದರಿಂದ ನಿಮ್ಮ ತರ್ಕಕ್ಕೆ ಉತ್ತರ ಸಿಗುತ್ತದೆ ಎಂದು ವಾಗ್ದಾಳಿ ಮಾಡಿದ್ದಾರೆ.
Dear Shri Gandhi, you can never be SAVARKAR even in your best dreams because being Savarkar requires strong determination, love for Bharat, selflessness and commitment.@RahulGandhi You can never be…
“SAVARKAR”
(Read in Caps)— Anurag Thakur (@ianuragthakur) March 26, 2023
ಸಾವರ್ಕರ್ ಅವರು ರಾಷ್ಟ್ರೀಯ ಸ್ಮಾರಕದ ಕಾರ್ಯದರ್ಶಿ ಪಂಡಿತ್ ಬಖಾಲೆ ಅವರಿಗೆ 1980 ಮೇ 20 ರಂದು ಬರೆದ ಪತ್ರದಲ್ಲಿ ಇಂದಿರಾ ಗಾಂಧಿ ಅವರು ಸ್ವಾತಂತ್ರ್ಯ ಚಳವಳಿಗೆ ಸಾವರ್ಕರ್ ಅವರ ಕೊಡುಗೆಯನ್ನು ಉಲ್ಲೇಖಿಸಿದ್ದಾರೆ ಎಂಬುದು ಗಮನಾರ್ಹ. ಬ್ರಿಟಿಷ್ ಸರ್ಕಾರದ ವಿರುದ್ಧ ಸಾವರ್ಕರ್ ಅವರ ಪ್ರಬಲ ಪ್ರತಿರೋಧವು ನಮ್ಮ ಸ್ವಾತಂತ್ರ್ಯ ಚಳವಳಿಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದೆ ಎಂದು ಇಂದಿರಾ ಅವರು ಉಲ್ಲೇಖಿಸಿದ್ದಾರೆ.
This is the Stamp issued during Indira Gandhi JI’s tenure as PM to acknowledge the efforts of Sh Veer Savarkar Ji for the freedom movement of India
3/6 pic.twitter.com/et7qEFhgUZ
— Anurag Thakur (@ianuragthakur) March 26, 2023
ಸಾವರ್ಕರ್ ಅವರ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟ ಪುಸ್ತಕವನ್ನು ಪಂಜಾಬಿಗೆ ಅನುವಾದಿಸಲಾಗಿದೆ. ಸಾವರ್ಕರ್ ಅವರನ್ನು ಭೇಟಿ ಮಾಡಲು ಭಗತ್ ಸಿಂಗ್ ಸ್ವತಃ ರತ್ನಗಿರಿಗೆ ಹೋಗಿದ್ದರು. ಆದರೆ ಈ ವಿಚಾರವನ್ನು ಮುದ್ರಿಸಲಾಗಿದೆ ಎಂದು ರಾಹುಲ್ ಗಾಂಧಿ ಅವಮಾನಿಸಿದ್ದಾರೆ ಎಂದು ಠಾಕೂರ್ ಹೇಳಿದರು.
ಸಾವರ್ಕರ್ ದೇಶಪ್ರೇಮ ಮತ್ತು ಧೈರ್ಯದ ಮುಂದೆ ತಲೆಬಾಗಿದ್ದರು. 19230 ಕಾಕಿನಾಡ ಅಧಿವೇಶನದಲ್ಲಿ ಕಾಂಗ್ರೆಸ್ ಕೂಡ ಸಾವರ್ಕರ್ ಅವರ ಪರವಾಗಿ ನಿರ್ಣಯವನ್ನು ಅಂಗೀಕರಿಸಿತ್ತು. ಭಾರತದ ಸ್ವಾತಂತ್ರ್ಯ ಚಳವಳಿಗೆ ಸಾವರ್ಕರ್ ಅವರ ಕೊಡುಗೆಯ ಸ್ಮರಣಾರ್ಥವಾಗಿ ಇಂದಿರಾ ಗಾಂಧಿಯವರು ಪ್ರಧಾನಿಯಾಗಿದ್ದಾಗ ಅಂಚೆ ಚೀಟಿಯನ್ನು ಸಹ ಬಿಡುಗಡೆ ಮಾಡಿದ್ದರು ಎಂದು ಸಚಿವ ಠಾಕೂರ್ ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:07 pm, Sun, 26 March 23