Rahul Gandhi: ರಾಹುಲ್ ಗಾಂಧಿ​ ಸೂರತ್​ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದೇನು?

ಶಿಕ್ಷೆ ಮತ್ತು ಜಾಮೀನನ್ನು ಅಮಾನತುಗೊಳಿಸುವಂತೆ ಕೋರಿ ಮಾಡಿದ ಮೇಲ್ಮನವಿಯಲ್ಲಿ ರಾಹುಲ್ ಗಾಂಧಿಯವರು ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷದ ಕಠಿಣ ಶಿಕ್ಷೆಯನ್ನು ಕೆಳ ನ್ಯಾಯಾಲಯ ನೀಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಎಲ್ಲ ಕಳ್ಳರ ಸರ್​​ನೇಮ್ ಮೋದಿ ಎಂದು ಯಾಕಿದೆ ? ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.

Rahul Gandhi: ರಾಹುಲ್ ಗಾಂಧಿ​ ಸೂರತ್​ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಹೇಳಿದ್ದೇನು?
ರಾಹುಲ್ ಗಾಂಧಿ
Follow us
ರಶ್ಮಿ ಕಲ್ಲಕಟ್ಟ
|

Updated on: Apr 04, 2023 | 1:57 PM

ಮಾನನಷ್ಟ ಮೊಕದ್ದಮೆಯಲ್ಲಿ (defamation case) ಶಿಕ್ಷೆಯ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಸೋಮವಾರ ಸೂರತ್ ನ್ಯಾಯಾಲಯದ (Surat Court) ಮೊರೆ ಹೋಗಿದ್ದಾರೆ. ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯಲ್ಲಿ ಅವರು ಸಂಸತ್ ಸದಸ್ಯ ಸ್ಥಾನವನ್ನು ಗಣನೆಗೆ ತೆಗೆದುಕೊಂಡು ಶಿಕ್ಷೆಯ ನಿರ್ಣಯದ ಹಂತದಲ್ಲಿ ಅವರನ್ನು ತುಂಬಾ ಕಠಿಣವಾಗಿ ನಡೆಸಿಕೊಳ್ಳಲಾಯಿತು. ಗರಿಷ್ಠ ಶಿಕ್ಷೆಯು ಭರಿಸಲಾಗದ ನಷ್ಟಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ ಎರಡು ವರ್ಷಗಳ ಶಿಕ್ಷೆಯ ವಿರುದ್ಧ ಸೂರತ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಮೇಲ್ಮನವಿಯಲ್ಲಿ, ತನಗೆ ಅನರ್ಹತೆಯ ಆದೇಶ (ಸಂಸದ ಸ್ಥಾನಕ್ಕೆ ಅನರ್ಹತೆ) ಸಿಗುವಂತೆ ಮಾಡಲು ಗರಿಷ್ಠ ಶಿಕ್ಷೆಗಾಗಿ ವಾದಿಸಲಾಗಿತ್ತು.  ಮಿತಿಮೀರಿದ ಶಿಕ್ಷೆಯು ವಿಷಯದ ಮೇಲಿನ ಕಾನೂನಿಗೆ ವಿರುದ್ಧವಾಗಿರುವುದು ಮಾತ್ರವಲ್ಲದೆ ಪ್ರಸ್ತುತ ಪ್ರಕರಣದಲ್ಲಿ ರಾಜಕೀಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಅನಪೇಕ್ಷಿತವಾಗಿದೆ ಎಂದು ಮೇಲ್ಮನವಿ ಹೇಳುತ್ತದೆ. ಶಿಕ್ಷೆಯನ್ನು ತಪ್ಪು ಎಂದಿದ್ದು, ಶಿಕ್ಷೆ ನೀಡಲು ಆಧರಿಸಿದ ವಸ್ತುವನ್ನು ಕಾನೂನಿನ ಪ್ರಕಾರ ಸಾಬೀತುಪಡಿಸಲಾಗಿಲ್ಲ ಎಂದು ಮೇಲ್ಮನವಿಯಲ್ಲಿ ಹೇಳಲಾಗಿದೆ.

ಚುನಾಯಿತ ಪ್ರತಿನಿಧಿಯ ಅನರ್ಹತೆಯು ಮುಕ್ತ ಮತ್ತು ನ್ಯಾಯಯುತ ಚುನಾವಣೆಯಲ್ಲಿ ಮತದಾರರ ಆಯ್ಕೆಗೆ ಮೂಲಭೂತವಾಗಿ ಅಡ್ಡಿಪಡಿಸುತ್ತದೆ. ಉಪಚುನಾವಣೆಯು ರಾಜ್ಯದ ಬೊಕ್ಕಸಕ್ಕೆ ಅಗಾಧವಾದ ಹೊರೆ ಉಂಟುಮಾಡುತ್ತದೆ ಎಂದು ರಾಹುಲ್ ಸಲ್ಲಿಸಿದ ಮನವಿಯಲ್ಲಿ ಹೇಳಲಾಗಿದೆ.

ಶಿಕ್ಷೆ ಮತ್ತು ಜಾಮೀನನ್ನು ಅಮಾನತುಗೊಳಿಸುವಂತೆ ಕೋರಿ ಮಾಡಿದ ಮೇಲ್ಮನವಿಯಲ್ಲಿ ರಾಹುಲ್ ಗಾಂಧಿಯವರು ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷದ ಕಠಿಣ ಶಿಕ್ಷೆಯನ್ನು ಕೆಳ ನ್ಯಾಯಾಲಯ ನೀಡಿದ್ದೇಕೆ ಎಂದು ಪ್ರಶ್ನಿಸಿದ್ದಾರೆ. ಎಲ್ಲ ಕಳ್ಳರ ಸರ್​​ನೇಮ್ ಮೋದಿ ಎಂದು ಯಾಕಿದೆ ? ಎಂಬ ಹೇಳಿಕೆಗಾಗಿ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗಿತ್ತು.

ಇದನ್ನೂ ಓದಿ: ಅರುಣಾಚಲ ಪ್ರದೇಶದ ಸ್ಥಳಗಳಿಗೆ ಮರುನಾಮಕರಣ ಮಾಡಿದ ಚೀನಾ; ಈ ರೀತಿ ಹೆಸರು ಬದಲಿಸುವುದರಿಂದ ವಾಸ್ತವತೆ ಬದಲಾಗುವುದಿಲ್ಲ ಎಂದ ಭಾರತ

ಅಂದಹಾಗೆ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ದೂರುದಾರ/ಪ್ರತಿವಾದಿ ಪೂರ್ಣೇಶ್ ಮೋದಿ “ಅಪರಾಧದಿಂದ ಬಾಧಿತ ವ್ಯಕ್ತಿಯಲ್ಲ ಮತ್ತು ದೂರು ಸಲ್ಲಿಸಲು ಯಾವುದೇ ಹಕ್ಕನ್ನು ಹೊಂದಿಲ್ಲ ಎಂದು ಮೇಲ್ಮನವಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೆ CrPC ಯ ಸೆಕ್ಷನ್ 202 ರ ಅಡಿಯಲ್ಲಿ ಆರೋಪಿಗೆ  ಸಮನ್ಸ್ ನೀಡುವ ಮೊದಲು ನ್ಯಾಯಾಲಯದ ನ್ಯಾಯವ್ಯಾಪ್ತಿಯ ಹೊರಗಿನಿಂದ ಕಡ್ಡಾಯ ವಿಚಾರಣೆಯನ್ನು ನಡೆಸಲಾಗಿಲ್ಲ ಎಂದಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್