ಸುಪ್ರೀಂಗೆ 5 ಹೊಸ ನ್ಯಾಯಾಧೀಶರ ನೇಮಕ: ಪ್ರಮಾಣ ವಚನ ಬೋಧಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್
ಸುಪ್ರೀಂ ಕೋರ್ಟ್‌ಗೆ ಐವರು ಹೊಸ ನ್ಯಾಯಾಧೀಶರು ನೇಮಕಗೊಂಡು, ಇದೀಗ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಈ 5 ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.
ದೆಹಲಿ: ಸುಪ್ರೀಂ ಕೋರ್ಟ್‌ಗೆ (supreme court) ಐವರು ಹೊಸ ನ್ಯಾಯಾಧೀಶರು ನೇಮಕಗೊಂಡು, ಇದೀಗ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಈ 5 ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಸುಪ್ರೀಂ ಕೋರ್ಟ್‌ಗೆ ನೇಮಕಗೊಂಡ ಐವರು ನ್ಯಾಯಾಧೀಶರು, ಮಂಜೂರಾದ 34 ರ ವಿರುದ್ಧ ನ್ಯಾಯಾಧೀಶರ ಸಂಖ್ಯೆಯನ್ನು 32 ಕ್ಕೆ ತೆಗೆದುಕೊಂಡು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಐವರು ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ನ್ಯಾಯಮೂರ್ತಿಗಳಾದ ಪಂಕಜ್ ಮಿಥಾಲ್, ಸಂಜಯ್ ಕರೋಲ್, ಪಿವಿ ಸಂಜಯ್ ಕುಮಾರ್, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಮನೋಜ್ ಮಿಶ್ರಾ ಅವರನ್ನು ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್ 13ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರ ಹುದ್ದೆಗೆ ಎಲ್ಲಾ ಐದು ಹೆಸರುಗಳನ್ನು ಶಿಫಾರಸು ಮಾಡಿತ್ತು.
Delhi | CJI DY Chandrachud administers the oath of office to Justice Pankaj Mithal, Justice Sanjay Karol, Justice Sanjay Kumar, Justice Ahsanuddin Amanullah and Justice Manoj Misra, as a Supreme court judge. pic.twitter.com/8KRYaV9ksw
— ANI (@ANI) February 6, 2023
ಇದನ್ನು ಓದಿ: Supreme Court: ಸುಪ್ರೀಂಗೆ 5 ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಅಸ್ತು
ಐವರು ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಅನುಮತಿ ನೀಡಿದ ನಂತರ ಅವರಿಗೆ ಇಂದು ಪ್ರಮಾಣ ವಚನ ಭೋಧಿಸಲಾಗಿದೆ. ಸುಪ್ರೀಂ ಕೋರ್ಟ್‌ಗೆ ಹೊಸ ನ್ಯಾಯಮೂರ್ತಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಕಾರ್ಯಾಂಗ ಮತ್ತು ನ್ಯಾಯಾಂಗದ ನಡುವಿನ ಸುದೀರ್ಘ ಗುದ್ದಾಟದ ನಡುವೆಯೇ ಸುಪ್ರೀಂ ಕೋರ್ಟ್‌ಗೆ ಐವರು ನ್ಯಾಯಾಧೀಶರ ಹೆಸರನ್ನು ಕೇಂದ್ರವು ಸೂಚಿಸಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
Published On - 11:00 am, Mon, 6 February 23