ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ […]

ಜೆಎನ್​ಯು ಒದಗಿಸುತ್ತಿರುವ ಉನ್ನತಮಟ್ಟದ ಶಿಕ್ಷಣವನ್ನು ಕೊಂಡಾಡಿದ ರಾಷ್ಟ್ರಪತಿಗಳು| Appreciate JNU for setting high standards in various academic domains: President
Follow us
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 18, 2020 | 5:52 PM

ಭಾರತದ ಅತ್ಯಂತ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ದೆಹಲಿಯ ಜವಾಹರಲಾಲ ನೆಹರೂ ಯೂನಿವರ್ಸಿಟಿ (ಜೆಎನ್​ಯು) ನಾಲ್ಕನೇ ವಾರ್ಷಿಕ ಘಟಿಕೋತ್ಸವನ್ನು ಇಂದು ಆಯೋಜಿಸಿತು. ಕೇವಲ ಪಿಹೆಚ್​ಡಿ ಪೂರೈಸಿರುವ ವಿದ್ಯಾರ್ಥಿವಿದ್ಯಾರ್ಥಿನಿಯರಿಗೆ ಪದವಿಗಳನ್ನು ಪ್ರದಾನ ಮಾಡಲು ಘಟಿಕೋತ್ಸವ ಆಯೋಜಿಸಲಾಗಿದೆಯೆಂದು ಜಿಎನ್​ಯು ರೆಕ್ಟರ್ ಸತೀಶ್​ಚಂದ್ರ ಗರ್ಕೋಟಿ ಹೇಳಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ರಾಷ್ಟ್ರಪತಿ ರಾಮನಾಥ ಕೊವಿಂದ್ ಅವರು, ‘‘ವಿದ್ಯಾರ್ಥಿಗಳಿಗೆ ಸಮಗ್ರವಾದ ಶಿಕ್ಷಣವನ್ನು ಒದಗಿಸುವ ಮತ್ತು ಯುವ ಪೀಳಿಗೆಗೆ ಕೆಲಸ ಪಡೆಯಲು ನೆರವಾಗುವ ನಿಟ್ಟಿನಲ್ಲಿ ಜೆಎನ್​ಯು, ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸಲಿದೆಯೆಂಬ ಸಂಗತಿ ನನ್ನ ಗಮನಕ್ಕೆ ಬಂದಿದೆ. ಇದೊಂದು ಅತ್ಯುತ್ತಮ ಯೋಜನೆಯಾಗಿದ್ದು, ವಿದ್ಯಾರ್ಥಿಗಳಿಗೆ ವಿಷಯಾಧಾರಿತ ಜ್ಞಾನವನ್ನು ಒದಗಿಸುತ್ತದೆ ಮತ್ತು ಭಾರತದ ಆರ್ಥಿಕತೆಗೂ ನೆರವಾಗಲಿದೆ,‘‘ ಎಂದರು.

ವಿದ್ಯಾರ್ಥಿಗಳಿಗೆ ಹಲವಾರು ಆಯಾಮಗಳಲ್ಲಿ ಶಿಕ್ಷಣ ಒದಗಿಸುತ್ತಿರುವ ಜೆಎನ್​ಯು ಶ್ರಮವನ್ನು ರಾಷ್ಟ್ರಪತಿಗಳು ಈ ಸಂದರ್ಭದಲ್ಲಿ ಕೊಂಡಾಡಿದರು.

‘‘ಸಾಮಾಜಿಕ ವಿಜ್ಞಾನ ಮೊದಲುಗೊಂಡು ತಂತ್ರಜ್ಞಾನದವರೆಗಿನ ವಿವಿಧ ಶೈಕ್ಷಣಿಕ ಆಯಾಮಗಳಲ್ಲಿ ಉನ್ನತ ಮಟ್ಟವನ್ನು ಕಾಯ್ದುಕೊಳ್ಳಲು ಜೆಎನ್​ಯುಗೆ ನೆರವಾಗಿರುವ ಪ್ರತಿ ಸದಸ್ಯನ ಕೊಡುಗೆಯನ್ನು ನಾನು ತುಂಬು ಹೃದಯದಿಂದ ಶ್ಲಾಘಿಸುತ್ತೇನೆ. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಇಲ್ಲಿನ ಬೋಧನೆ ಮತ್ತು ಸಂಶೋಧನೆ ಒಂದು ದೊಡ್ಡ ಪ್ರಭಾವನ್ನುಂಟು ಮಾಡಿದೆ, ಎನ್ನುವುದು ಉತ್ಪ್ರೇಕ್ಷೆಯಲ್ಲ,’‘ ಎಂದು ರಾಷ್ಟ್ರಪತಿಗಳು ಹೇಳಿದರು.

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ