ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು 21 ದಿನ ಕಾಲಾವಕಾಶ ಕೋರಿದ ಎಎಸ್‌ಐ

ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ಮಂಗಳವಾರ ಜ್ಞಾನವಾಪಿ ಮಸೀದಿಯ ವರದಿಯನ್ನು ಸಲ್ಲಿಸಲು ಹೆಚ್ಚುವರಿ 21 ದಿನಗಳ ಕಾಲಾವಕಾಶ ಕೋರಿದೆ. ASI ಆರಂಭಿಕ ಗಡುವು ಆದ ನವೆಂಬರ್ 17 ರ ಗಡುವನ್ನು ತಪ್ಪಿಸಿದ ನಂತರ 15 ದಿನಗಳ ವಿಸ್ತರಣೆಯನ್ನು ಕೋರಿತ್ತು. ಆ ಸಮಯದಲ್ಲಿ ನ್ಯಾಯಾಲಯವು 10 ದಿನಗಳ ವಿಸ್ತರಣೆಗೆ ಅನುಮತಿ ನೀಡಿತ್ತು. ಹಾಗಾಗಿ ನವೆಂಬರ್ 28 ಅದರ ಹೊಸ ಗಡುವು ಆಗಿತ್ತು.

ಜ್ಞಾನವಾಪಿ ಮಸೀದಿ ಸಮೀಕ್ಷೆ ವರದಿ ಸಲ್ಲಿಸಲು 21 ದಿನ ಕಾಲಾವಕಾಶ ಕೋರಿದ ಎಎಸ್‌ಐ
Follow us
ರಶ್ಮಿ ಕಲ್ಲಕಟ್ಟ
|

Updated on: Nov 28, 2023 | 2:47 PM

ದೆಹಲಿ ನವೆಂಬರ್ 28: ಜ್ಞಾನವಾಪಿ ಮಸೀದಿಯ ಆವರಣದಲ್ಲಿ (Gyanvapi Mosque survey) ನಡೆಸಿದ ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಹೆಚ್ಚುವರಿ ಮೂರು ವಾರಗಳ ಕಾಲಾವಕಾಶ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ASI) ವಾರಣಾಸಿ (Varanasi) ಜಿಲ್ಲಾ ನ್ಯಾಯಾಲಯಕ್ಕೆ ಇಂದು (ಮಂಗಳವಾರ) ಅರ್ಜಿ ಸಲ್ಲಿಸಿದೆ. ಸಮಗ್ರ ವರದಿಯನ್ನು ಹೊಂದಿಸಲು ಮತ್ತು ಅಂತಿಮಗೊಳಿಸಲು ಹೆಚ್ಚಿನ ಸಮಯವನ್ನು ಕೋರಿ ಎಎಸ್‌ಐ ಅನ್ನು ಪ್ರತಿನಿಧಿಸುವ ಸ್ಥಾಯಿ ಸರ್ಕಾರಿ ವಕೀಲ ಅಮಿತ್ ಶ್ರೀವಾಸ್ತವ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಎಎಸ್‌ಐ ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಡೆಸಲಿದೆ.

100 ದಿನಗಳ ಅವಧಿಯ ವ್ಯಾಪಕ ಸಮೀಕ್ಷೆಯು ಸುಮಾರು ಒಂದು ತಿಂಗಳ ಹಿಂದೆ ಮುಕ್ತಾಯಗೊಂಡಿದೆ. ಆದಾಗ್ಯೂ, ಎಎಸ್ಐಈ ಅವಧಿಯಲ್ಲಿ ಹಲವಾರು ವಿಸ್ತರಣೆಗಳನ್ನು ಕೋರಿದ್ದು, ವರದಿಯನ್ನು ಸಿದ್ಧಪಡಿಸುವಲ್ಲಿ ಅಗತ್ಯವಿರುವ ಸಂಕೀರ್ಣತೆಯನ್ನು ಉಲ್ಲೇಖಿಸಿದೆ. ವಾರಣಾಸಿ ಜಿಲ್ಲಾ ನ್ಯಾಯಾಧೀಶರು ಈ ಹಿಂದೆ ನವೆಂಬರ್ 18 ರಂದು ಜ್ಞಾನವಾಪಿ ಮಸೀದಿ ಸಮೀಕ್ಷೆಯ ವರದಿಯನ್ನು ಸಲ್ಲಿಸಲು ಎಎಸ್‌ಐಗೆ ಇನ್ನೂ 10 ದಿನಗಳ ಕಾಲಾವಕಾಶ ನೀಡಿದ ನಂತರ ಇತ್ತೀಚಿನ ವಿಸ್ತರಣೆ ವಿನಂತಿಯು ಬಂದಿದೆ. ವೈಜ್ಞಾನಿಕ ಸಮೀಕ್ಷಾ ವರದಿ ಸಲ್ಲಿಕೆಗೆ ವಿಸ್ತೃತ ಗಡುವು ಇಂದಿಗೆ ಮುಕ್ತಾಯವಾಗಲಿದೆ.

ದೇವಾಲಯದ ಪಶ್ಚಿಮ ಗೋಡೆಯ ಹಿಂಭಾಗದಲ್ಲಿರುವ ಶೃಂಗಾರ್ ಗೌರಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಅನುಮತಿ ಕೋರಿ ನಾಲ್ವರು ಮಹಿಳೆಯರು ಸಲ್ಲಿಸಿದ ಅರ್ಜಿಯ ನಂತರ ಜುಲೈ 21 ರಂದು ವಾರಣಾಸಿ ನ್ಯಾಯಾಲಯವು ಸಮೀಕ್ಷೆಗೆ ಆದೇಶಿಸಿತ್ತು. ಸರ್ವೋಚ್ಚ ನ್ಯಾಯಾಲಯದ ಆದೇಶದಿಂದ ಸೀಲ್ ಆಗಿರುವ ವುಜುಖಾನಾ ಪ್ರದೇಶವನ್ನು ಸಮೀಕ್ಷೆಯಿಂದ ಹೊರಗಿಡಲಾಗಿದೆ.

ಆ ಆದೇಶಕ್ಕೆ ಅನುಸಾರವಾಗಿ, ಎಎಸ್‌ಐ ಜುಲೈ 24 ರಂದು ನಾಲ್ಕೂವರೆ ಗಂಟೆಗಳ ಕಾಲ ಸಮೀಕ್ಷೆಯನ್ನು ನಡೆಸಿತು. ಆನಂತರ ಸುಪ್ರೀಂಕೋರ್ಟ್ ಅದೇ ದಿನ ಜುಲೈ 26 ರಂದು ಸಂಜೆ 5 ಗಂಟೆಯವರೆಗೆ ಪ್ರಕ್ರಿಯೆ ಸ್ಥಗಿತಗೊಳಿಸಿತು. ಆಮೇಲೆ ಅಂಜುಮನ್ ಇಂತೇಜಾಮಿಯಾ ಮಸೀದಿ ಸಮಿತಿಗೆ (AIMC) ಅಲಹಾಬಾದ್ ಉಚ್ಚ ನ್ಯಾಯಾಲಯವನ್ನು ಸಂಪರ್ಕಿಸಲು ಅವಕಾಶ ನೀಡಿತ್ತು.

ಇದನ್ನೂ ಓದಿ: ಜ್ಞಾನವಾಪಿ ಮಸೀದಿಯೂ ಅಲ್ಲ ಹಿಂದೂ ದೇವಾಲಯವೂ ಅಲ್ಲ, ಅದು ಬೌದ್ಧ ಮಠ: ಸುಪ್ರೀಂಕೋರ್ಟ್‌ನಲ್ಲಿ ಪಿಐಎಲ್

ಜುಲೈ 25 ರಂದು ಮಸೀದಿ ಸಮಿತಿಯು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದಾಗ, ಅದು ಸಮೀಕ್ಷೆಗೆ ತಡೆಯಾಜ್ಞೆಯನ್ನು ವಿಸ್ತರಿಸಿತು. ಆಗಸ್ಟ್ 3 ರಂದು ಹೈಕೋರ್ಟ್ ತನ್ನ ತೀರ್ಪನ್ನು ನೀಡಿ, ಸಮೀಕ್ಷೆ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಿತು. ಹೈಕೋರ್ಟ್ ಆದೇಶದ ವಿರುದ್ಧ ಎಐಎಂಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು ಆಗಸ್ಟ್ 4 ರಂದು ಸಮೀಕ್ಷೆಗೆ ತಡೆ ನೀಡಲು ಕೋರ್ಟ್ ನಿರಾಕರಿಸಿತು.

ಆಗಸ್ಟ್ 3 ರಂದು ಅಲಹಾಬಾದ್ ಹೈಕೋರ್ಟ್ ತಡೆಯಾಜ್ಞೆ ತೆರವು ಮಾಡಿದ ನಂತರ ಮತ್ತು ಸಮೀಕ್ಷೆಗೆ ಚಾಲನೆ ನೀಡಿದ ನಂತರ ಆಗಸ್ಟ್ 4 ರಂದು ಬಿಗಿ ಭದ್ರತೆಯ ನಡುವೆ ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆ ಪುನರಾರಂಭವಾಯಿತು. ವಾರಣಾಸಿ ನ್ಯಾಯಾಲಯವು ಆರಂಭದಲ್ಲಿ ಜುಲೈ 21 ರಂದು ಸಮೀಕ್ಷೆಗೆ ಆದೇಶಿಸಿದ್ದು ಆಗಸ್ಟ್ 4 ರೊಳಗೆ ವರದಿಯನ್ನು ಸಲ್ಲಿಸುವಂತೆ ಕೇಳಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ