ತೆಲಂಗಾಣ: ಕೆಸಿಆರ್​ಗಾಗಿ ದೇವಾಲಯ ನಿರ್ಮಿಸಿದ ಅಭಿಮಾನಿ, ಇಲ್ಲಿ ನಡೆಯುತ್ತದೆ ನಿತ್ಯ ಪೂಜೆ

ತಮ್ಮ ಪ್ರೀತಿಯನ್ನು ತೋರಿಸಲು ಗೋಗುಲ ಶ್ರೀನಿವಾಸ್ ಅವರು ಕೆಸಿಆರ್‌ಗೆ 20 ಲಕ್ಷ ರೂಪಾಯಿ ಖರ್ಚು ಮಾಡಿ ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅವರೇ ಭೂಮಿಯನ್ನು ಖರೀದಿಸಿ ಅದರಲ್ಲಿ ದೇವಾಲಯವನ್ನು ನಿರ್ಮಿಸಿದ್ದು...

ತೆಲಂಗಾಣ: ಕೆಸಿಆರ್​ಗಾಗಿ ದೇವಾಲಯ ನಿರ್ಮಿಸಿದ ಅಭಿಮಾನಿ, ಇಲ್ಲಿ ನಡೆಯುತ್ತದೆ ನಿತ್ಯ ಪೂಜೆ
ಕೆಸಿಆರ್ ದೇವಸ್ಥಾನ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 17, 2022 | 5:43 PM

ಭಾರತ್ ರಾಷ್ಟ್ರ ಸಮಿತಿ (Bharat Rashtra Samithi)ಮುಖ್ಯಸ್ಥ, ತೆಲಂಗಾಣ ಮುಖ್ಯಮಂತ್ರಿ  ಕೆ ಚಂದ್ರಶೇಖರ ರಾವ್  (K Chandrashekar Rao) ಅವರು ಪ್ರಧಾನಿ ಆಗಬೇಕೆಂದು ಹಾರೈಸಿ ಅವರ ಕಟ್ಟಾ ಅಭಿಮಾನಿಯೊಬ್ಬರು ದೇವಾಲಯವನ್ನು ನಿರ್ಮಿಸಿದ್ದಾರೆ. ಆ ದೇವಸ್ಥಾನದಲ್ಲಿ ಕೆಸಿಆರ್ ವಿಗ್ರಹವನ್ನೂ ಸ್ಥಾಪಿಸಲಾಗಿದೆ. ತೆಲಂಗಾಣದ ನಲ್ಗೊಂಡ ಜಿಲ್ಲೆಯ ನಿಡಮನೂರ್ ಗ್ರಾಮದ ಗೋಗುಲ ಶ್ರೀನಿವಾಸ್ ಎಂಬ ವ್ಯಕ್ತಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದಾರೆ. ಮೊದಲಿನಿಂದಲೂ ಕೆಸಿಆರ್ ಅಂದರೆ ಇಷ್ಟ. ಪ್ರತ್ಯೇಕ ತೆಲಂಗಾಣಕ್ಕಾಗಿ ಕೆಸಿಆರ್‌ನ ಚಳವಳಿಯಿಂದಲೇ  ಅವರ ಸಿದ್ಧಾಂತದತ್ತ ನಾನು ಆಕರ್ಷಿತನಾದೆ. ಕೆಸಿಆರ್ ಸಿಎಂ ಆದ ನಂತರ ಹೆಚ್ಚು ಉತ್ಸುಕನಾದೆ ಎಂದು ಶ್ರೀನಿವಾಸ್ ಹೇಳಿದ್ದಾರೆ. ಶ್ರೀನಿವಾಸ್ ಕೆಲಸದಿಂದ ರಜೆ ಪಡೆದು ಕೆಸಿಆರ್ ನೇತೃತ್ವದಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ನಡೆದ ಚಳವಳಿಯಲ್ಲಿ ಭಾಗವಹಿಸಿದ್ದರು.

ತಮ್ಮ ಪ್ರೀತಿಯನ್ನು ತೋರಿಸಲು ಗೋಗುಲ ಶ್ರೀನಿವಾಸ್ ಅವರು ಕೆಸಿಆರ್‌ಗೆ 20 ಲಕ್ಷ ರೂಪಾಯಿ ಖರ್ಚು ಮಾಡಿ ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅವರೇ ಭೂಮಿಯನ್ನು ಖರೀದಿಸಿ ಅದರಲ್ಲಿ ದೇವಾಲಯವನ್ನು ನಿರ್ಮಿಸಿದ್ದು ಅದರಲ್ಲಿ ಕೆಸಿಆರ್ ಮೂರ್ತಿಯನ್ನೂ ಪ್ರತಿಷ್ಠಾಪಿಸಿ ನಿತ್ಯ ಪೂಜಿಸುತ್ತಾರೆ.

ಕೆಸಿಆರ್ ಮೇಲಿನ ಅಭಿಮಾನದಿಂದ ಈ ಮಂದಿರ ನಿರ್ಮಾಣ ಮಾಡಿದ್ದೇನೆ ಎಂದು ಶ್ರೀನಿವಾಸ್ ಹೇಳಿದ್ದಾರೆ. ಕೆಸಿಆರ್ ಭಾರತದ ಪ್ರಧಾನಿಯಾಗುವುದನ್ನು ನೋಡಬೇಕೆಂಬುದು ನನ್ನ ಆಶಯ ಎಂದು ಅವರು ಹೇಳುತ್ತಾರೆ.

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್