Kiren Rijiju: ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ, ಕಾನೂನು ಸಚಿವ ಕಿರಣ್​ ರಿಜಿಜುಗೆ ಗೇಟ್​ಪಾಸ್

Kiren Rijiju: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್​ ರಿಜಿಜುಗೆ ಗೇಟ್​ ಪಾಸ್​ ನೀಡಲಾಗಿದೆ.

Kiren Rijiju: ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ, ಕಾನೂನು ಸಚಿವ ಕಿರಣ್​ ರಿಜಿಜುಗೆ ಗೇಟ್​ಪಾಸ್
ಕಿರಣ್ ರಿಜಿಜು

Updated on: May 18, 2023 | 10:34 AM

ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್​ ರಿಜಿಜು(Kiren Rijiju)ಗೆ ಗೇಟ್​ ಪಾಸ್​ ನೀಡಲಾಗಿದೆ. ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಕಿರಣ್ ರಿಜಿಜು ಗೇಟ್​ಪಾಸ್ ನೀಡಲಾಗಿದ್ದು, ಕಾನೂನು ಸಚಿವರಾಗಿ ಅರ್ಜುನ್ ಮೇಘವಾಲ್​ ನೇಮಕ ಮಾಡಲಾಗಿದೆ. ಕಿರಣ್ ಬೇರೆ ಇಲಾಖೆಯ ಜವಾಬ್ದಾರಿ ನೀಡುವ ಸಾಧ್ಯತೆ ಇದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಯ ಮೇರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಪುಟ ಪುನಾರಚನೆಗೆ ಅನುಮೋದನೆ ನೀಡಿದ್ದಾರೆ. ಇದೀಗ ಕಿರಣ್ ರಿಜಿಜು ಅವರನ್ನು ಕಾನೂನು ಸಚಿವಾಲಯದಿಂದ ಭೂ ವಿಜ್ಞಾನ ಸಚಿವಾಲಯಕ್ಕೆ ವರ್ಗಾಯಿಸಲಾಗಿದೆ.

ಅದೇ ಸಮಯದಲ್ಲಿ ರಿಜಿಜು ಬದಲಿಗೆ ಅರ್ಜುನ್ ರಾಮ್ ಮೇಘವಾಲ್​ ಅವರ ಅಸ್ತಿತ್ವದಲ್ಲಿರುವ ಖಾತೆಗೆ ಹೆಚ್ಚುವರಿಯಾಗಿ ಕಾನೂನು ಹಾಗೂ ನ್ಯಾಯ ಸಚಿವಾಲಯ ರಾಜ್ಯ ಸಚಿವರಾಗಿ ಜವಾಬ್ದಾರಿಯನ್ನು ನೀಡಲಾಗಿದೆ. ರಿಜಿಜು ಅರುಣಾಚಲ ಪಶ್ಚಿಮ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿದ್ದಾರೆ.

ಕಿರಣ್​ ರಿಜಿಜು ಅವರು ಅರುಣಾಚಲ ಪ್ರದೇಶದ ಪಶ್ಚಿಮ ಕಮೆಂಗ್​ ಜಿಲ್ಲೆಯಲ್ಲಿ 1971 ನವೆಂಬರ್ 19ರಂದು ಜನಿಸಿದರು. ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದಾರೆ. ಅವರು 2004ರಲ್ಲಿ ಮೊದಲ ಬಾರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದಾರೆ. ಆದರೆ 2009ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದರು. 2014ರ ಚುನಾವಣೆಯಲ್ಲಿ ರಿಜಿಜು ಮತ್ತೊಮ್ಮೆ ಗೆದ್ದು ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸಚಿವರಾಗಿದ್ದರು.

ಇದರ ನಂತರ ಅವರನ್ನು ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ಅಂದರೆ 2019ರಲ್ಲಿ ಕ್ರೀಡಾ ಸಚಿವರನ್ನಾಗಿ ನೇಮಿಸಲಾಯಿತು. ಜುಲೈ 2021ರಲ್ಲಿ ಸಂಪುಟ ವಿಸ್ತರಣೆ ಸಮಯದಲ್ಲಿ ಅವರನ್ನು ಕಾನೂನು ಸಚಿವರನ್ನಾಗಿ ಮಾಡಲಾಗಿತ್ತು.ರವಿಶಂಕರ್ ಪ್ರಸಾದ್ ಬದಲಿಗೆ ಅವರಿಗೆ ಈ ಜವಾಬ್ದಾರಿ ನೀಡಲಾಗಿತ್ತು.

 

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:24 am, Thu, 18 May 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us