AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದ ಮೊರೆನಾದಲ್ಲಿ ಸೇನಾ ಆಕಾಂಕ್ಷಿಗಳ ಗುಂಪು ನಡುವೆ ಘರ್ಷಣೆ

ರನ್ನಿಂಗ್ ಟ್ರ್ಯಾಕ್‌ನಲ್ಲಿ ಗುಂಪುಗಳ ನಡುವೆ ಘರ್ಷಣೆಯುಂಟಾಗಿತ್ತು. ಬಳಿಕ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಮಧ್ಯಪ್ರದೇಶದ ಮೊರೆನಾದಲ್ಲಿ ಸೇನಾ ಆಕಾಂಕ್ಷಿಗಳ ಗುಂಪು ನಡುವೆ ಘರ್ಷಣೆ
ಗುಂಪು ನಡುವೆ ಘರ್ಷಣೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Sep 06, 2022 | 8:35 PM

Share

ಭೋಪಾಲ್: ಮಧ್ಯಪ್ರದೇಶದ (Madhya Pradesh)  ಮೊರೆನಾ (Morena) ಜಿಲ್ಲೆಯ ಕ್ರೀಡಾಂಗಣವೊಂದರಲ್ಲಿ ದೇಶದ ಸಶಸ್ತ್ರ ಪಡೆಗಳಿಗೆ ನೇಮಕಾತಿಗೆ ಸಿದ್ಧತೆ ನಡೆಸುತ್ತಿರುವ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಘಟನೆಯ ವಿಡಿಯೊಗಳನ್ನು ನೋಡಿದರೆ ಯುವಕರ ಗುಂಪು ಮತ್ತೊಂದು ಗುಂಪನ್ನು ಬೆನ್ನಟ್ಟುವುದನ್ನು ತೋರಿಸುತ್ತವೆ. ಎರಡೂ ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸುತ್ತವೆ, ಉದ್ದವಾದ ಮರದ ಕೋಲುಗಳನ್ನು ಹಿಡಿದು ಅಟ್ಟಾಡಿಸುತ್ತಿರುವುದು ಕಾಣುತ್ತದೆ. ಕೋಲಿನಿಂದ ಇನ್ನೊಬ್ಬರಿಗೆ ಹೊಡೆಯಲು ಪ್ರಯತ್ನಿಸುತ್ತಿರುವಾಗ ಬೀಳುತ್ತಿರುವುದೂ ವಿಡಿಯೊದಲ್ಲಿ ಕಾಣುತ್ತದೆ. ಈ ಘರ್ಷಣೆಯ ಹೊತ್ತಲ್ಲಿ ಗುಂಡಿನ ಚಕಮಕಿಯೂ ವರದಿಯಾಗಿದೆ. ರನ್ನಿಂಗ್ ಟ್ರ್ಯಾಕ್‌ನಲ್ಲಿ ಗುಂಪುಗಳ ನಡುವೆ ಘರ್ಷಣೆಯುಂಟಾಗಿತ್ತು. ಬಳಿಕ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿದ್ದರು. ಓಟದ ವಿವಾದದ ನಂತರ ಭೀಮರಾವ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಹಿಂಸಾಚಾರದಲ್ಲಿ ಕನಿಷ್ಠ ನಾಲ್ವರು ಸೇನಾ ಆಕಾಂಕ್ಷಿಗಳು ಗಾಯಗೊಂಡಿದ್ದಾರೆ. ಈವರೆಗೆ ನಾಲ್ಕಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದೆ.

ದೇಶಾದ್ಯಂತ ಪ್ರತಿಭಟನೆಗಳ ನಡುವೆ ಜೂನ್‌ನಲ್ಲಿ ಪ್ರಾರಂಭಿಸಲಾದ ಅಗ್ನಿಪಥ್ ಮಿಲಿಟರಿ ನೇಮಕಾತಿ ಯೋಜನೆಗೆ ಆಕಾಂಕ್ಷಿಗಳು ತಯಾರಿ ನಡೆಸುತ್ತಿದ್ದರು.

ಕಳೆದ ಜೂನ್ 14ರಂದು ಕೇಂದ್ರ ಸರ್ಕಾರವು ಅಗ್ನಿಪಥ್ ಯೋಜನೆಯನ್ನು ಘೋಷಿಸಿತ್ತು. ಈ ಯೋಜನೆಯಡಿ 17.5 ವರ್ಷದಿಂದ 21 ವರ್ಷದೊಳಗಿನವರಿಗೆ ಸಶಸ್ತ್ರ ದಳಗಳಲ್ಲಿ ನಾಲ್ಕು ವರ್ಷಗಳ ಅವಧಿಗೆ ನೇಮಿಸಿಕೊಳ್ಳುವುದಾಗಿ ಹೇಳಿತ್ತು. ಈ ಪೈಕಿ ಶೇ 25ರಷ್ಟು ಸಿಬ್ಬಂದಿಗೆ 15 ವರ್ಷಗಳ ಸೇವಾವಧಿ ಸಿಗಲಿದೆ ಎಂದು ಕೇಂದ್ರ ಹೇಳಿತ್ತು. ಈ ಯೋಜನೆ ವಿರೋಧಿಸ ದೇಶಾದ್ಯಂತ ಪ್ರತಿಭಟನೆಗಳು ನಡೆದಿತ್ತು. ನಂತರದ ದಿನಗಳಲ್ಲಿ ಸರ್ಕಾರವು ಗರಿಷ್ಠ ವಯೋಮಿತಿಯನ್ನು 23 ವರ್ಷಗಳಿಗೆ ವಿಸ್ತರಿಸಿತು.

Published On - 8:34 pm, Tue, 6 September 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ