AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಭೇಟಿ

ರಾಜ್ಯಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಕರೆತರಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್), ಮಣಿಪುರ ಪೊಲೀಸ್, ಮಣಿಪುರ ರೈಫಲ್ಸ್, ಇಂಡಿಯಾ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಮತ್ತು ವಿಲೇಜ್ ಡಿಫೆನ್ಸ್ ಫೋರ್ಸ್ (ವಿಡಿಎಫ್) ಒಳಗೊಂಡ ಭದ್ರತಾ ಸಿಬ್ಬಂದಿಯನ್ನು 38 ದುರ್ಬಲ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಸಿಎಂ ಬಿರೇನ್ ಸಿಂಗ್ ತಿಳಿಸಿದ್ದಾರೆ.

ಹಿಂಸಾಚಾರ ಪೀಡಿತ ಮಣಿಪುರಕ್ಕೆ ಇಂದು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಭೇಟಿ
ಮನೋಜ್ ಪಾಂಡೆ
ರಶ್ಮಿ ಕಲ್ಲಕಟ್ಟ
|

Updated on: May 27, 2023 | 12:56 PM

Share

ದೆಹಲಿ: ಇತ್ತೀಚಿನ ಹಿಂಸಾಚಾರದ (Manipur Violence) ಹಿನ್ನೆಲೆಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ (Army Chief General Manoj Pande )ಇಂದು (ಶನಿವಾರ)  ಮಣಿಪುರಕ್ಕೆ (Manipur) ಭೇಟಿ ನೀಡಲಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಕೈಗೊಂಡ ಕ್ರಮಗಳ ಕುರಿತು ಈಸ್ಟರ್ನ್ ಕಮಾಂಡ್ ಅಧಿಕಾರಿಗಳಿಂದ ಸೇನಾ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು. ಏತನ್ಮಧ್ಯೆ, ರಾಜ್ಯದಲ್ಲಿ ಹೊಸ ಹಿಂಸಾಚಾರದ ವರದಿಗಳ ನಡುವೆ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಮಣಿಪುರದಾದ್ಯಂತ ಭದ್ರತೆಯನ್ನು ಹೆಚ್ಚಿಸಿವೆ.

ಇಂಫಾಲ್ ಪೂರ್ವ ಮತ್ತು ಚರ್ಚಂದ್‌ಪುರದ ಎರಡೂ ಭದ್ರತಾ ತಂಡಗಳು ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿನ್ನು ತಡೆದಿವೆ. ಅಲ್ಲಿ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿ ಓಡಿಹೋದರು ಎಂದು ಸೇನೆ ತಿಳಿಸಿದೆ. ಆದಾಗ್ಯೂ, ಯಾವುದೇ ಸಾವು ನೋವುಗಳ ವರದಿಯಾಗಿಲ್ಲ ಮತ್ತು ಹೆಚ್ಚಿನ ಕಾರ್ಯಾಚರಣೆಗಳು ನಡೆಯುತ್ತಿವೆ.

ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಲು ಸರ್ಕಾರ ನಿರ್ಧರಿಸಿದ್ದನ್ನು ಖಂಡಿಸಿ ಕುಕಿ ಸಮುದಾಯದವರು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.ಈ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 60 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಈ ತಿಂಗಳ ಆರಂಭದಲ್ಲಿ ಹೇಳಿದ್ದಾರೆ. ಹಿಂಸಾಚಾರದ ಸಮಯದಲ್ಲಿ ಮನೆಗಳು ಬೆಂಕಿ ಹಚ್ಚಿದ್ದು, ಅಪಾರ ಪ್ರಮಾಣದ ನಾಶನಷ್ಟ ಸಂಭವಿಸಿದೆ.

ರಾಜ್ಯಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಕರೆತರಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್), ಮಣಿಪುರ ಪೊಲೀಸ್, ಮಣಿಪುರ ರೈಫಲ್ಸ್, ಇಂಡಿಯಾ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಮತ್ತು ವಿಲೇಜ್ ಡಿಫೆನ್ಸ್ ಫೋರ್ಸ್ (ವಿಡಿಎಫ್) ಒಳಗೊಂಡ ಭದ್ರತಾ ಸಿಬ್ಬಂದಿಯನ್ನು 38 ದುರ್ಬಲ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಸಿಎಂ ಬಿರೇನ್ ಸಿಂಗ್ ತಿಳಿಸಿದ್ದಾರೆ.

ಆತಂಕಪಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ ಸಿಎಂ, ರಾಜ್ಯದ ವಿವಿಧ ಪ್ರದೇಶಗಳಲ್ಲಿ ಶಸ್ತ್ರಸಜ್ಜಿತ ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Viksit Bharat @2047: ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಪ್ರಧಾನಿ ಮೋದಿ

ಎಲ್ಲಾ ವರ್ಗದ ಜನರೊಂದಿಗೆ ಶಾಂತಿ ಮಾತುಕತೆ ನಡೆಸಲು ಪ್ರಯತ್ನಿಸಲಾಗುತ್ತಿದೆ. ಮಣಿಪುರದಲ್ಲಿ ಈಗಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಚಿಸಲಾದ ವಿವಿಧ ಶಾಂತಿ ಸಮಿತಿಗಳನ್ನು ಸರ್ಕಾರವು ಭೇಟಿ ಮಾಡುತ್ತಿದೆ ಎಂದು ಅವರು ಹೇಳಿದರು.

ಹಿಂಸಾತ್ಮಕ ಚಟುವಟಿಕೆಗಳಿಂದ ದೂರವಿರಬೇಕ, ವಿವಿಧ ಸಮುದಾಯಗಳಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುವ ಯಾವುದೇ ಆಧಾರರಹಿತ ಮಾಹಿತಿ ವದಂತಿಗಳನ್ನು ನಂಬಬೇಡಿ ಅಥವಾ ಹರಡಬೇಡಿ ಎಂದು ಅವರು ಜನರಿಗೆ ಮನವಿ ಮಾಡಿದರು. ಸಹಜ ಸ್ಥಿತಿಗೆ ತರಲು ಸರ್ಕಾರದ ಪ್ರಯತ್ನಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಅವರು ಹೇಳದ್ದಾರೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಗುರುವಾರ ಅಸ್ಸಾಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ಮಣಿಪುರದಲ್ಲಿ ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ನ್ಯಾಯಾಲಯದ ತೀರ್ಪಿನ ನಂತರ ಮಣಿಪುರದಲ್ಲಿ ಘರ್ಷಣೆಗಳು ನಡೆದಿವೆ, ನಾನು ಎರಡೂ ಗುಂಪುಗಳಿಗೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡುತ್ತೇನೆ. ಎಲ್ಲರಿಗೂ ನ್ಯಾಯ ಸಿಗುತ್ತದೆ. ಕೆಲವು ದಿನಗಳ ನಂತರ ಮಣಿಪುರಕ್ಕೆ ಭೇಟಿ ನೀಡಲಿದ್ದು ಮೂರು ದಿನಗಳ ಕಾಲ ಅಲ್ಲಿಯೇ ಇರುತ್ತೇನೆ. ಶಾಂತಿ ಸ್ಥಾಪನೆಗಾಗಿ ಮಣಿಪುರದ ಜನರೊಂದಿಗೆ ಮಾತನಾಡುತ್ತೇನೆ ಎಂದು ಶಾ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಚಂದ್ರ ಗ್ರಹಣ ದಿನವೇ ವೈಭವದಿಂದ ನೆರವೇರಿದ ಲಕ್ಷ್ಮೀನರಸಿಂಹಸ್ವಾಮಿ ರಥೋತ್ಸವ
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಹೋಳಿ ಹುಣ್ಣಿಮೆಯಂದೇ ಗ್ರಹಣ: ಸಾಲು ಸಾಲು ಅವಘಡಗಳು ಫಿಕ್ಸ್​​?
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ಓಡಿಬಂದು ಮುಳ್ಳಿನ ಪೊದೆಗೆ ಹಾರ್ತಾರೆ, ಆದ್ರೂ ಏನಾಗಲ್ಲ! ವಿಡಿಯೋ ಇಲ್ಲಿದೆ
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?