ದೆಹಲಿ: ಇತ್ತೀಚಿನ ಹಿಂಸಾಚಾರದ (Manipur Violence) ಹಿನ್ನೆಲೆಯಲ್ಲಿ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ (Army Chief General Manoj Pande )ಇಂದು (ಶನಿವಾರ) ಮಣಿಪುರಕ್ಕೆ (Manipur) ಭೇಟಿ ನೀಡಲಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಕೈಗೊಂಡ ಕ್ರಮಗಳ ಕುರಿತು ಈಸ್ಟರ್ನ್ ಕಮಾಂಡ್ ಅಧಿಕಾರಿಗಳಿಂದ ಸೇನಾ ಮುಖ್ಯಸ್ಥರಿಗೆ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದರು. ಏತನ್ಮಧ್ಯೆ, ರಾಜ್ಯದಲ್ಲಿ ಹೊಸ ಹಿಂಸಾಚಾರದ ವರದಿಗಳ ನಡುವೆ ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್ ಮಣಿಪುರದಾದ್ಯಂತ ಭದ್ರತೆಯನ್ನು ಹೆಚ್ಚಿಸಿವೆ.
ಇಂಫಾಲ್ ಪೂರ್ವ ಮತ್ತು ಚರ್ಚಂದ್‌ಪುರದ ಎರಡೂ ಭದ್ರತಾ ತಂಡಗಳು ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿನ್ನು ತಡೆದಿವೆ. ಅಲ್ಲಿ ಕೆಲವು ಶಸ್ತ್ರಸಜ್ಜಿತ ವ್ಯಕ್ತಿಗಳು ಗುಂಡು ಹಾರಿಸಿ ಓಡಿಹೋದರು ಎಂದು ಸೇನೆ ತಿಳಿಸಿದೆ. ಆದಾಗ್ಯೂ, ಯಾವುದೇ ಸಾವು ನೋವುಗಳ ವರದಿಯಾಗಿಲ್ಲ ಮತ್ತು ಹೆಚ್ಚಿನ ಕಾರ್ಯಾಚರಣೆಗಳು ನಡೆಯುತ್ತಿವೆ.
Army chief General Manoj Pande will be visiting Manipur today to review the security situation in view of the recent violence there. He would be briefed by the Eastern Command officials on the measures taken to bring the situation under control: Indian Army officials
(file pic) pic.twitter.com/7WVKPSrrXD
— ANI (@ANI) May 27, 2023
ಮೈತಿ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡಲು ಸರ್ಕಾರ ನಿರ್ಧರಿಸಿದ್ದನ್ನು ಖಂಡಿಸಿ ಕುಕಿ ಸಮುದಾಯದವರು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.ಈ ಜನಾಂಗೀಯ ಹಿಂಸಾಚಾರದಲ್ಲಿ ಸುಮಾರು 60 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಈ ತಿಂಗಳ ಆರಂಭದಲ್ಲಿ ಹೇಳಿದ್ದಾರೆ. ಹಿಂಸಾಚಾರದ ಸಮಯದಲ್ಲಿ ಮನೆಗಳು ಬೆಂಕಿ ಹಚ್ಚಿದ್ದು, ಅಪಾರ ಪ್ರಮಾಣದ ನಾಶನಷ್ಟ ಸಂಭವಿಸಿದೆ.
ರಾಜ್ಯಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಕರೆತರಲಾಗಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್), ಮಣಿಪುರ ಪೊಲೀಸ್, ಮಣಿಪುರ ರೈಫಲ್ಸ್, ಇಂಡಿಯಾ ರಿಸರ್ವ್ ಬೆಟಾಲಿಯನ್ (ಐಆರ್‌ಬಿ) ಮತ್ತು ವಿಲೇಜ್ ಡಿಫೆನ್ಸ್ ಫೋರ್ಸ್ (ವಿಡಿಎಫ್) ಒಳಗೊಂಡ ಭದ್ರತಾ ಸಿಬ್ಬಂದಿಯನ್ನು 38 ದುರ್ಬಲ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಸಿಎಂ ಬಿರೇನ್ ಸಿಂಗ್ ತಿಳಿಸಿದ್ದಾರೆ.
ಆತಂಕಪಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದ ಸಿಎಂ, ರಾಜ್ಯದ ವಿವಿಧ ಪ್ರದೇಶಗಳಲ್ಲಿ ಶಸ್ತ್ರಸಜ್ಜಿತ ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: Viksit Bharat @2047: ನೀತಿ ಆಯೋಗದ ಎಂಟನೇ ಆಡಳಿತ ಮಂಡಳಿ ಸಭೆ ಅಧ್ಯಕ್ಷತೆ ವಹಿಸಿಕೊಳ್ಳಲಿರುವ ಪ್ರಧಾನಿ ಮೋದಿ
ಎಲ್ಲಾ ವರ್ಗದ ಜನರೊಂದಿಗೆ ಶಾಂತಿ ಮಾತುಕತೆ ನಡೆಸಲು ಪ್ರಯತ್ನಿಸಲಾಗುತ್ತಿದೆ. ಮಣಿಪುರದಲ್ಲಿ ಈಗಿರುವ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಚಿಸಲಾದ ವಿವಿಧ ಶಾಂತಿ ಸಮಿತಿಗಳನ್ನು ಸರ್ಕಾರವು ಭೇಟಿ ಮಾಡುತ್ತಿದೆ ಎಂದು ಅವರು ಹೇಳಿದರು.
ಹಿಂಸಾತ್ಮಕ ಚಟುವಟಿಕೆಗಳಿಂದ ದೂರವಿರಬೇಕ, ವಿವಿಧ ಸಮುದಾಯಗಳಲ್ಲಿ ಉದ್ವಿಗ್ನತೆಯನ್ನು ಉಂಟುಮಾಡುವ ಯಾವುದೇ ಆಧಾರರಹಿತ ಮಾಹಿತಿ ವದಂತಿಗಳನ್ನು ನಂಬಬೇಡಿ ಅಥವಾ ಹರಡಬೇಡಿ ಎಂದು ಅವರು ಜನರಿಗೆ ಮನವಿ ಮಾಡಿದರು. ಸಹಜ ಸ್ಥಿತಿಗೆ ತರಲು ಸರ್ಕಾರದ ಪ್ರಯತ್ನಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಅವರು ಹೇಳದ್ದಾರೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಮೂರು ದಿನಗಳ ಕಾಲ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಗುರುವಾರ ಅಸ್ಸಾಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅಮಿತ್ ಶಾ, ಮಣಿಪುರದಲ್ಲಿ ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ನ್ಯಾಯಾಲಯದ ತೀರ್ಪಿನ ನಂತರ ಮಣಿಪುರದಲ್ಲಿ ಘರ್ಷಣೆಗಳು ನಡೆದಿವೆ, ನಾನು ಎರಡೂ ಗುಂಪುಗಳಿಗೆ ಶಾಂತಿಯನ್ನು ಕಾಪಾಡಬೇಕು ಎಂದು ಮನವಿ ಮಾಡುತ್ತೇನೆ. ಎಲ್ಲರಿಗೂ ನ್ಯಾಯ ಸಿಗುತ್ತದೆ. ಕೆಲವು ದಿನಗಳ ನಂತರ ಮಣಿಪುರಕ್ಕೆ ಭೇಟಿ ನೀಡಲಿದ್ದು ಮೂರು ದಿನಗಳ ಕಾಲ ಅಲ್ಲಿಯೇ ಇರುತ್ತೇನೆ. ಶಾಂತಿ ಸ್ಥಾಪನೆಗಾಗಿ ಮಣಿಪುರದ ಜನರೊಂದಿಗೆ ಮಾತನಾಡುತ್ತೇನೆ ಎಂದು ಶಾ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ