ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಈ ಕೆಟ್ಟ ವಾತಾವರಣದಿಂದಲೇ ಹೆಲಿಕಾಪ್ಟರ್ ಪತನ ಆಗಿರಬಹುದು ಎಂದು ಹೇಳಲಾಗಿದೆ.

ಜಮ್ಮು- ಕಾಶ್ಮೀರದಲ್ಲಿ ಚೀತಾ ಸೇನಾ ಹೆಲಿಕಾಪ್ಟರ್​ ಪತನ; ಒಬ್ಬ ಪೈಲಟ್ ಸಾವು, ಇನ್ನೊಬ್ಬರ ಸ್ಥಿತಿ ಗಂಭೀರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on:Mar 11, 2022 | 4:12 PM

ಶ್ರೀನಗರ: ಭಾರತ ಸೇನೆಯ ಚೀತಾ ಹೆಲಿಕಾಪ್ಟರ್ (Indian Army Cheetah helicopter)​ ಇಂದು ಉತ್ತರ ಕಾಶ್ಮೀರದ ಗುರೆಜ್​ ವಲಯದಲ್ಲಿರುವ ಗಡಿ ನಿಯಂತ್ರಣಾ ರೇಖೆ ಬಳಿ ಪತನಗೊಂಡಿದೆ.  ಗಡಿ ಭದ್ರತಾ ಪಡೆ ಸಿಬ್ಬಂದಿ ಕೆಲವರು ಅಸ್ವಸ್ಥಗೊಂಡಿದ್ದರು. ಅವರನ್ನು ಕರೆದುಕೊಂಡು ಬರುವ ಸಲುವಾಗಿ ಈ ಹೆಲಿಕಾಪ್ಟರ್​ ಹೊರಟಿತ್ತು. ಆದರೆ ಗುರೆಜ್​ ವಲಯದ ಗುರ್ಜನ್​ ನಲ್ಲಾ ಬಳಿ ಪತನಗೊಂಡಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಹೆಲಿಕಾಪ್ಟರ್​ ಪತನಕ್ಕೆ ಕಾರಣ ತಿಳಿದಿಲ್ಲ. ಇದರಲ್ಲಿ ಪೈಲಟ್​ ಮತ್ತು ಸಹ ಪೈಲಟ್​ ಇದ್ದು, ಒಬ್ಬ ಪೈಲಟ್​ ಮೃತಪಟ್ಟಿದ್ದು ವರದಿಯಾಗಿದೆ. ಇನ್ನೊಬ್ಬರನ್ನು ಮಿಲಿಟರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪತನಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ಆ ಪ್ರದೇಶ ಸಂಪೂರ್ಣ ಹಿಮಾಚ್ಛಾದಿತವಾಗಿತ್ತು. ಹೀಗಾಗಿ ಪತನಕ್ಕೆ ಕೆಟ್ಟ ವಾತಾವರಣವೇ ಕಾರಣವಾಗಿರಬಹುದು ಎಂದೂ ಹೇಳಲಾಗಿದೆ. ಭಾರತ-ಪಾಕಿಸ್ತಾನ ಗಡಿಯ ಬಳಿಯೇ ಈ ಅವಘಡ ನಡೆದಿದ್ದು, ಸ್ಥಳಕ್ಕೆ ಹಿರಿಯ ಸೇನಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿಕ್ಕ ವಯಸ್ಸಿನಲ್ಲೇ ಕಂಗನಾಗೆ ಗೊತ್ತಾಗಿತ್ತು ಮುಂದಿನ ಭವಿಷ್ಯ; ಅಚ್ಚರಿ ವಿಚಾರ ಬಿಚ್ಚಿಟ್ಟ ಪ್ರಭಾಸ್

Published On - 4:02 pm, Fri, 11 March 22

Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು