Sign In

By signing in or creating an account, you agree with Associated Broadcasting Company's Terms & Conditions and Privacy Policy.

Army Chopper Crash: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿದೆ.

Army Chopper Crash: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್ ಪತನ
ಸೇನಾ ಹೆಲಿಕಾಪ್ಟರ್ ಪತನImage Credit source: ANI
Follow us
ನಯನಾ ರಾಜೀವ್
| Updated By: Digi Tech Desk

Updated on:May 04, 2023 | 12:21 PM

ಜಮ್ಮು ಮತ್ತು ಕಾಶ್ಮೀರ(Jammu and Kashmir) ದ ಕಿಶ್ತ್ವಾರದಲ್ಲಿ ಸೇನಾ ಹೆಲಿಕಾಪ್ಟರ್​ ಪತನಗೊಂಡಿದೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್​ ಪತನಗೊಂಡಿದ್ದು, ಸೇನೆಯ ಮೂರು ಅಧಿಕಾರಿಗಳು ಇದ್ದರು ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಅವರನ್ನು ಸಂಪರ್ಕಿಸಲು ಇನ್ನೂ ಸಾಧ್ಯವಾಗಿಲ್ಲ.  ಈ ಹೆಲಿಕಾಪ್ಟರ್ ಪತನಗೊಂಡ ಸ್ಥಳವು ಕಿಶ್ತ್ವಾರ್‌ನ ಅತ್ಯಂತ ದೂರದ ಪ್ರದೇಶವಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು-ಮೂರು ದಿನಗಳಿಂದ ಇಲ್ಲಿ ಮಳೆಯಾಗುತ್ತಿದೆ.

ಮೂವರು ಸೇನಾ ಅಧಿಕಾರಿಗಳು ಹೆಲಿಕಾಪ್ಟರ್​ನಲ್ಲಿ ಹೋಗುತ್ತಿದ್ದು, ಈ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. ಅಧಿಕಾರಿಗಳ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ತಂಡಗಳು ಸ್ಥಳದಲ್ಲಿದ್ದಾರೆ, ಅಧಿಕಾರಿಗಳ ಸಂಪರ್ಕ ಸಾಧ್ಯವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:00 pm, Thu, 4 May 23