ಪಂಜಾಬ್​ನ ಪಠಾಣ್​ಕೋಟ್​ನಲ್ಲಿ ಗಡಿಯ ಒಳನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಭಾರತೀಯ ಸೇನೆ

|

Updated on: Aug 14, 2023 | 10:21 AM

ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಪಠಾಣ್‌ಕೋಟ್‌ನ ಸಿಂಬಲ್ ಸಾಕೋಲ್ ಗ್ರಾಮದ ಬಳಿ ಮಧ್ಯರಾತ್ರಿ 12.30 ರ ಸುಮಾರಿಗೆ ಗಡಿ ಭದ್ರತಾ ಪಡೆಗಳು ಕೆಲವು ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ್ದವು.

ಪಂಜಾಬ್​ನ ಪಠಾಣ್​ಕೋಟ್​ನಲ್ಲಿ ಗಡಿಯ ಒಳನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಭಾರತೀಯ ಸೇನೆ
ಬಿಎಸ್​ಎಫ್​ ಯೋಧರು
Follow us on

ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಪಠಾಣ್‌ಕೋಟ್‌ನ ಸಿಂಬಲ್ ಸಾಕೋಲ್ ಗ್ರಾಮದ ಬಳಿ ಮಧ್ಯರಾತ್ರಿ 12.30 ರ ಸುಮಾರಿಗೆ ಗಡಿ ಭದ್ರತಾ ಪಡೆಗಳು ಕೆಲವು ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿದ್ದವು. ಪಡೆಗಳು ಅವರಿಗೆ ನೀವು ಯಾರು ಯಾವ ಉದ್ದೇಶಕ್ಕಾಗಿ ಬರುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು. ಆದರೂ ಆತ ನಿಲ್ಲದೆ ಮುನ್ನುಗ್ಗಿ ಬರುತ್ತಿದ್ದ. ಅನಿವಾರ್ಯವಾಗಿ ಸೈನಿಕರು ಗುಂಡು ಗುಂಡು ಹಾರಿಸಬೇಕಾಯಿತು, ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 11 ರಂದು ಗಡಿ ಭದ್ರತಾ ಪಡೆ(BSF)ಯ ಯೋಧರು ಪಂಜಾಬ್​ನ ತರ್ನ್​ ತರನ್ ಜಿಲ್ಲೆಯ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಒಳನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಿದೆ. ಈ ಕುರಿತು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಆತ ಗಡಿಯೊಳಗೆ ಬರುತ್ತಿರುವಾಗ ಸೈನಿಕರು ಆತನನ್ನು ಪ್ರಶ್ನಿಸಿದ್ದರು, ಆದರೂ ಮಾತು ಕೇಳದೆ ಮುಂದೆ ಬರುತ್ತಲೇ ಇದ್ದ, ಹೀಗಾಗಿ ಅನಿವಾರ್ಯವಾಗಿ ಬಿಎಸ್‌ಎಫ್ ಸಿಬ್ಬಂದಿ ಗುಂಡು ಹಾರಿಸುವ ಅನಿವಾರ್ಯತೆ ಉಂಟಾಗಿತ್ತು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಾರ್ಚ್​ನಲ್ಲಿ ಕೂಡ ಗಡಿ ಭದ್ರತಾ ಪಡೆ(BSF)ಯು ಪಂಜಾಬ್​ನ ಅಮೃತಸರದ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಬಂಧಿಸಿತ್ತು.

ಮತ್ತಷ್ಟು ಓದಿ: ಪಂಜಾಬ್​ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಹತ್ಯೆಗೈದ ಬಿಎಸ್​ಎಫ್​ ಯೋಧರು

ಅಮೃತಸರ ಸೆಕ್ಟರ್​ನ ರಜತಾಲ್​ನಲ್ಲಿರುವ ಬಾರ್ಡರ್ ಔಟ್ ಪೋಸ್ಟ್​ನಲ್ಲಿ ಮಾರ್ಚ್​ 8ರ ಮಧ್ಯರಾತ್ರಿ ಪಾಕಿಸ್ತಾನದ ಕಡೆಯಿಂದ ಒಳನುಸುಳಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಬಿಎಸ್​ಎಫ್ ಹೇಳಿಕೆಯಲ್ಲಿ ತಿಳಿಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ