ಅನಂತನಾಗ್​​ದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿ ಸೇನೆ

|

Updated on: Sep 16, 2023 | 5:18 PM

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ ಗುಡ್ಡಗಾಡು ಪ್ರದೇಶದಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರಲ್ಲಿ ಮೂವರು ಉಗ್ರರನ್ನು ಭಾರತೀಯ ಗಡಿ ಭದ್ರತಾ ಪಡೆ ಹೊಡೆದುರುಳಿಸಿದೆ.

ಅನಂತನಾಗ್​​ದಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿ ಸೇನೆ
ಸಾಂದರ್ಭಿಕ ಚಿತ್ರ
Follow us on

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ನ (anantnag) ಗುಡ್ಡಗಾಡು ಪ್ರದೇಶದಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರಲ್ಲಿ ಮೂವರು ಉಗ್ರರನ್ನು ಇಂದು (ಸೆ.16) ಭಾರತೀಯ ಗಡಿ ಭದ್ರತಾ ಪಡೆ (Border Security Force) ಹೊಡೆದುರುಳಿಸಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಇಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ (Baramulla) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಒಬ್ಬ(Encounter) ಭಯೋತ್ಪಾದಕನನ್ನು (Terrorist) ಹತ್ಯೆ ಮಾಡಲಾಗಿತ್ತು. ನಂತರ ಬಾರಾಮುಲ್ಲಾ ಜಿಲ್ಲೆಯ ಉರಿ, ಹತ್ಲಂಗಾದ ಮುಂಚೂಣಿ ಪ್ರದೇಶದಲ್ಲಿ ಭಯೋತ್ಪಾದಕರು, ಸೇನೆ ನಡುವೆ ಎನ್‌ಕೌಂಟರ್ ಪ್ರಾರಂಭವಾಯಿತು. ಇದೀಗ ಈ ಗುಂಡಿನ ಕಾಳಗದಲ್ಲಿ ಮತ್ತೆ ಮೂರು ಉಗ್ರರು ಹತ್ಯೆಯಾಗಿದೆ ಎಂದು ಹೇಳಲಾಗಿದೆ. ಜತೆಗೆ ಉಗ್ರರಿಂದ  5 ಕೆ.ಜಿ ಐಇಡಿ ವಶಪಡಿಸಿಕೊಳ್ಳಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

ಈ ಕಾರ್ಯಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಸಾಥ್ ನೀಡಿದ್ದಾರೆ. ಈ ಬಗ್ಗೆ ಎಕ್ಸ್ (ಹಿಂದಿನ ಟ್ವಿಟರ್) ನಲ್ಲೂ ಪೋಸ್ಟ್ ಮಾಡಲಾಗಿತ್ತು. ಇನ್ನು ಈ ಕಾರ್ಯಚಾರಣೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಭಯೋತ್ಪಾದಕರ ಪತ್ತೆಗೆ ಡ್ರೋನ್​ಗಳನ್ನು ಕೂಡ ಬಳಸಲಾಗುತ್ತಿದೆ.

ಇದನ್ನೂ ಓದಿ: ಅನಂತ್​​ನಾಗ್​, ಬಾರಾಮುಲ್ಲಾದಲ್ಲಿ ಮುಂದುವರಿದ ಎನ್​ಕೌಂಟರ್; ಒಬ್ಬ ಉಗ್ರನ ಹತ್ಯೆ

ಅನಂತನಾಗ್​​ದಲ್ಲಿ ಮೂರು ದಿನಗಳಿಂದ ಕಾರ್ಯಚರಣೆ ನಡೆಯುತ್ತಿದ್ದು, ಗುಂಡಿನ ದಾಳಿಯಲ್ಲಿ ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಮತ್ತು ಡಿಎಸ್‌ಪಿ ಹುಮಾಯೂನ್ ಭಟ್ ಸೇರಿದಂತೆ ನಾಲ್ವರು ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಈ ಕಾಳಗದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಕೊಕರ್ನಾಗ್‌ನ ಗಡೋಲ್‌ನ ಅರಣ್ಯ ಪ್ರದೇಶದಲ್ಲಿ ಸೇರಿದಂತೆ ಅನೇಕ ಕಡೆ ಕಾರ್ಯಚರಣೆ ನಡೆಸಲಾಗುತ್ತಿದೆ ಎಂದು ಸೇನೆ ತಿಳಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

Published On - 1:21 pm, Sat, 16 September 23