AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajdhani Express: ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಟಿಟಿಇ: ಕಾಲು ಕಳೆದುಕೊಂಡ ಸೈನಿಕ

ಚಲಿಸುತ್ತಿದ್ದ ರಾಜಧಾನಿ ಎಕ್ಸ್​ಪ್ರೆಸ್​ ರೈಲಿನಿಂದ ಸೈನಿಕರೊಬ್ಬರನ್ನು ಟಿಟಿಇ ತಳ್ಳಿದ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಸೈನಿಕ ತಮ್ಮ ಕಾಲುಗಳನ್ನು ಕಳೆದುಕೊಂಡಿದ್ದಾರೆ.

Rajdhani Express: ಚಲಿಸುತ್ತಿದ್ದ ರೈಲಿನಿಂದ ತಳ್ಳಿದ ಟಿಟಿಇ: ಕಾಲು ಕಳೆದುಕೊಂಡ ಸೈನಿಕ
Railway Station
TV9 Web
| Edited By: |

Updated on: Nov 18, 2022 | 8:24 AM

Share

ಚಲಿಸುತ್ತಿದ್ದ ರಾಜಧಾನಿ ಎಕ್ಸ್​ಪ್ರೆಸ್​ ರೈಲಿನಿಂದ ಸೈನಿಕರೊಬ್ಬರನ್ನು ಟಿಟಿಇ ತಳ್ಳಿದ ಘಟನೆ ವರದಿಯಾಗಿದೆ. ಈ ಘಟನೆಯಲ್ಲಿ ಸೈನಿಕ ತಮ್ಮ ಕಾಲುಗಳನ್ನು ಕಳೆದುಕೊಂಡಿದ್ದಾರೆ. ರಜಪೂತ್ ರೈಫಲ್ಸ್​ಗೆ ಸೇರಿದ ಸೈನಿಕ ಸೋನುಕುಮಾರ್ ಸಿಂಗ್ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡಿದ್ದು, ಜೀವನ್ಮರಣದ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಘಟನೆಯ ಬಳಿಕ, ಯೋಧನ ಸಹ ಸೈನಿಕರು ಟಿಟಿಇಯನ್ನು ಥಳಿಸಿ ರೈಲನ್ನು ನಿಲ್ಲಿಸಿದ್ದಾರೆ. ಅಧಿಕೃತ ಮೂಲಗಳ ಪ್ರಕಾರ ಯೋಧನು ಬರೇಲಿ ರೈಲು ನಿಲ್ದಾಣದಲ್ಲಿ ದಿಬ್ರುಗಢದಿಂದ ನವದೆಹಲಿಗೆ ಹೊರಟಿದ್ದ ರಾಜಧಾನಿ ಎಕ್ಸ್‌ಪ್ರೆಸ್ ಅನ್ನು ಹತ್ತಲು ಬಂದಿದ್ದಾರೆ. ಚಲಿಸುತ್ತಿದ್ದ ರೈಲನ್ನೇ ಹತ್ತಲು ಯತ್ನಿಸಿದ್ದಾರೆ. ಈ ವೇಳೆ ಟಿಟಿಇ ಯೋಧನನ್ನು ಹತ್ತಲು ಬಿಡದೆ ದೂಕಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬರೇಲಿ ಜಂಕ್ಷನ್ ನ ಪ್ಲಾಟ್ ಫಾರಂ ನಂಬರ್ 2ರಲ್ಲಿ ನಡೆದ ಈ ಘಟನೆಯಲ್ಲಿ ಸಿಟ್ಟಿಗೆದ್ದ ಯೋಧರು ಟಿಟಿಇಗೆ ಥಳಿಸಿದ್ದಾರೆ. ಘಟನೆ ಬಳಿಕ ರೈಲಿನಲ್ಲಿ ನಿಯೋಜನೆಗೊಂಡಿದ್ದ ದೆಹಲಿಯ ಟಿಟಿಇ ಮೊಬೈಲ್ ಸ್ವಿಚ್ ಮಾಡಿ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಸೈನಿಕನ ಒಂದು ಕಾಲು ಸಂಪೂರ್ಣವಾಗಿ ಕತ್ತರಿಸಲ್ಪಟ್ಟಿದೆ, ಅವರ ಇನ್ನೊಂದು ಕಾಲು ಪ್ಲಾಟ್‌ಫಾರ್ಮ್ ಸಂಖ್ಯೆ ಎರಡು ಮತ್ತು ರೈಲಿನ ನಡುವಿನ ಅಂತರದಲ್ಲಿ ಸಿಲುಕಿಕೊಂಡು ಗಂಭೀರ ಹಾನಿಯಾಗಿದೆ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಅವರು ಲಕ್ನೋದಿಂದ ದೆಹಲಿಗೆ ಮೂರನೇ ಎಸಿ ಕೋಚ್ ಹತ್ತಿದ್ದರು. ಸೋನುಕುಮಾರ್ ನೀರು ಪಡೆಯಲು ಬರೇಲಿ ಜಂಕ್ಷನ್‌ನಲ್ಲಿ ಇಳಿದಿದ್ದರು. ಸ್ವಲ್ಪ ಸಮಯದ ನಂತರ ರೈಲು ಹೊರಟೇ ಬಿಟ್ಟಿತ್ತು, ಓಡಿ ಬಂದು ರೈಲನ್ನು ಹತ್ತಲು ಮುಂದಾಗಿದ್ದರು ಆಗ ಕೋಚ್ ಸೂನುಕುಮಾರ್​ ಅವರನ್ನು ತಳ್ಳಿದ್ದರು.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ವಸತಿ ಭಾಗ್ಯ ಇಲ್ಲ