AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಶೋಧನೆಯ ಹೆಸರಿನಲ್ಲಿ ಚೀನಾ ಪರ ಬೇಹುಗಾರಿಕೆ: ಸೇನಾ ಅಧಿಕಾರಿಯ ಪತ್ನಿಯ ವಿರುದ್ಧ ಜಮ್ಮು ಪೊಲೀಸರಿಂದ ಎಫ್​ಐಆರ್​

ಭಾರತೀಯ ಸೇನಾ ಅಧಿಕಾರಿಯ ಪತ್ನಿಯೊಬ್ಬರು ಚೀನಾ ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಜಮ್ಮುವಿನಲ್ಲಿ ಬಂಧಿತರಾಗಿದ್ದಾರೆ. ಇವರು ಸಂಶೋಧನೆಯ ನೆಪದಲ್ಲಿ, ಎಐ (ಕೃತಕ ಬುದ್ಧಿಮತ್ತೆ) ಪರಿಕರಗಳನ್ನು ಬಳಸಿ ದೇಶದ ಸೂಕ್ಷ್ಮ ರಕ್ಷಣಾ ರಹಸ್ಯಗಳನ್ನು ಚೀನಾ ಏಜೆಂಟರಿಗೆ ಸೋರಿಕೆ ಮಾಡಿದ್ದಾರೆ. ಅಧಿಕೃತ ರಹಸ್ಯ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದ್ದು, ಆಕೆಯ ಪತಿಯ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ.

ಸಂಶೋಧನೆಯ ಹೆಸರಿನಲ್ಲಿ ಚೀನಾ ಪರ ಬೇಹುಗಾರಿಕೆ: ಸೇನಾ ಅಧಿಕಾರಿಯ ಪತ್ನಿಯ ವಿರುದ್ಧ ಜಮ್ಮು ಪೊಲೀಸರಿಂದ ಎಫ್​ಐಆರ್​
ಭಾರತೀಯ ಸೇನೆ Image Credit source: PTI
ನಯನಾ ರಾಜೀವ್
|

Updated on: Oct 19, 2026 | 9:40 AM

Share

ಶ್ರೀನಗರ, ಅಕ್ಟೋಬರ್ 19: ಜಮ್ಮು ಮತ್ತು ಕಾಶ್ಮೀರದಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನೆಯ ಹಿರಿಯ ಅಧಿಕಾರಿಯೊಬ್ಬರ ಪತ್ನಿ ಚೀನಾ ಗುಪ್ತಚರ ಸಂಸ್ಥೆಗಳಿಗೆ ದೇಶದ ಸೂಕ್ಷ್ಮ ರಕ್ಷಣಾ ರಹಸ್ಯಗಳನ್ನು ಸೋರಿಕೆ ಮಾಡುತ್ತಿದ್ದ ಗಂಭೀರ ಆರೋಪದಡಿ ಭದ್ರತಾ ಸಂಸ್ಥೆಗಳ ಬಲೆಗೆ ಬಿದ್ದಿದ್ದಾರೆ.ಆರೋಪಿ ಮಹಿಳೆಯ ವಿರುದ್ಧ ಜಮ್ಮುವಿನ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ‘ಅಧಿಕೃತ ರಹಸ್ಯ ಕಾಯ್ದೆ’ ಹಾಗೂ ಅಪರಾಧ ಸಂಚಿನ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಉಪ ಪೊಲೀಸ್ ವರಿಷ್ಠಾಧಿಕಾರಿ (DSP) ಮಟ್ಟದ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ಮೂಲತಃ ತೆಲಂಗಾಣ ಮೂಲದವರಾದ ಈ ಮಹಿಳೆ ಉನ್ನತ ಶಿಕ್ಷಣ ಪಡೆದಿದ್ದು, 2023 ರಲ್ಲಿ ವಿಶ್ವಸಂಸ್ಥೆಯಲ್ಲಿ (UN) ಮಾಹಿತಿ ತಂತ್ರಜ್ಞಾನ (IT) ಕ್ಷೇತ್ರದಲ್ಲಿ ಇಂಟರ್ನ್‌ಶಿಪ್ ಪೂರ್ಣಗೊಳಿಸಿದ್ದರು. ಈಗ ಸ್ವತಂತ್ರ ಸಂಶೋಧಕಿಯಾಗಿ ಗುರುತಿಸಿಕೊಂಡಿದ್ದರು. ತನಿಖಾಧಿಕಾರಿಗಳ ಪ್ರಕಾರ, ಮಹಿಳೆ ಸಂಶೋಧನೆಯ ಸೋಗಿನಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ:

ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಬಳಕೆ: ಚೀನಾದ ಹ್ಯಾಂಡ್ಲರ್‌ಗಳು ನೀಡಿದ ನಿರ್ದೇಶನದಂತೆ ಭಾರತೀಯ ಸೇನೆ ಹಾಗೂ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಸೂಕ್ಷ್ಮ ದತ್ತಾಂಶಗಳನ್ನು ವಿಶ್ಲೇಷಿಸಲು ಈಕೆ ಚಾಟ್​ಜಿಪಿಟಿ ಮತ್ತು ಕ್ಲೌಡ್ ನಂತಹ ಪ್ರಮುಖ ಎಐ ಪರಿಕರಗಳನ್ನು ಬಳಸಿಕೊಂಡಿದ್ದಾರೆ.

ಮತ್ತಷ್ಟು ಓದಿ: ಜಮ್ಮು-ಕಾಶ್ಮೀರದ ಶಾಸಕರು, ಸಚಿವರ ವೇತನ ಹೆಚ್ಚಳ, 1.8 ಲಕ್ಷದಿಂದ 3 ಲಕ್ಷ ರೂ.ಗೆ ಏರಿಕೆ, ಸದನದಲ್ಲಿ 5 ಮಸೂದೆ ಮಂಡಿಸಿದ ಒಮರ್ ಅಬ್ದುಲ್ಲಾ

ರೈಲು ನಿಲ್ದಾಣದಲ್ಲಿ ಜಂಟಿ ಕಾರ್ಯಾಚರಣೆ: ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ರು

ಜಂಟಿ ಕಾರ್ಯಾಚರಣೆ: ಕೇಂದ್ರ ಗುಪ್ತಚರ ಸಂಸ್ಥೆಗಳು (IB) ನೀಡಿದ ನಿಖರ ಸುಳಿವಿನ ಮೇರೆಗೆ ಜಮ್ಮು ಪೊಲೀಸರು ಅಕ್ಟೋಬರ್ 14 ರಂದು ಜಂಟಿ ಕಾರ್ಯಾಚರಣೆ ನಡೆಸಿದರು. ಪಠಾಣ್‌ಕೋಟ್‌ಗೆ ರೈಲು ಹತ್ತಲು ಸಿದ್ಧತೆ ನಡೆಸುತ್ತಿದ್ದ ವೇಳೆ ಜಮ್ಮು ತಾವಿ ರೈಲ್ವೆ ನಿಲ್ದಾಣದಲ್ಲೇ ಮಹಿಳೆಯನ್ನು ಭದ್ರತಾ ಪಡೆಗಳು ತಡೆದು, ಸಮೀಪದ ಮಿಲಿಟರಿ ಠಾಣೆಗೆ ಕರೆದೊಯ್ದು ವಿಚಾರಣೆಗೆ ಒಳಪಡಿಸಲಾಗಿತ್ತು.

ಆಕೆಯ ಮೊಬೈಲ್ ಫೋನ್, ಲ್ಯಾಪ್‌ಟಾಪ್ ಹಾಗೂ ಡಿಜಿಟಲ್ ಡ್ರೈವ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ವಿವರವಾದ ವಿಧಿವಿಜ್ಞಾನ ಪರೀಕ್ಷೆಗೆ ರವಾನಿಸಲಾಗಿದೆ. ವಿದೇಶಿ ಗುಪ್ತಚರ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ವಿದ್ವಾಂಸರು, ಸಂಶೋಧಕರು ಮತ್ತು ಥಿಂಕ್-ಟ್ಯಾಂಕ್‌ಗಳ ಮೂಲಕ ಓಪನ್ ಸೋರ್ಸ್ ಇಂಟೆಲಿಜೆನ್ಸ್ ಹೆಸರಿನಲ್ಲಿ ರಕ್ಷಣಾ ರಹಸ್ಯಗಳನ್ನು ಕದಿಯುವ ತಂತ್ರವನ್ನು ವ್ಯಾಪಕವಾಗಿ ಬಳಸುತ್ತಿವೆ.

ಹಣಕಾಸು ವಹಿವಾಟಿನ ಮೇಲೆ ನಿಗಾ: ಈ ವಿಶ್ಲೇಷಣಾತ್ಮಕ ವರದಿಗಳನ್ನು ಚೀನಾದ ಏಜೆಂಟರಿಗೆ ಕಳುಹಿಸಿದ್ದಕ್ಕಾಗಿ ಮಹಿಳೆಗೆ ವಿದೇಶಿ ಖಾತೆಗಳಿಂದ ಹಣ ಸಂದಾಯವಾಗಿದೆಯೇ ಎಂಬ ಬಗ್ಗೆ ಹಣಕಾಸು ತನಿಖಾ ಸಂಸ್ಥೆಗಳು ಆಕೆಯ ಬ್ಯಾಂಕ್ ಖಾತೆಗಳು ಮತ್ತು ಕ್ರಿಪ್ಟೋ ವಾಲೆಟ್‌ಗಳನ್ನು ಜಾಲಾಡುತ್ತಿವೆ.

ಸೇನಾ ಅಧಿಕಾರಿಯ ಪಾತ್ರದ ಪರಿಶೀಲನೆ: ಮಹಿಳೆಯ ಪತಿಯಾಗಿರುವ ಸೇನಾ ಅಧಿಕಾರಿಗೆ ಈ ಚಟುವಟಿಕೆಗಳ ಬಗ್ಗೆ ಮಾಹಿತಿ ಇತ್ತೇ ಅಥವಾ ತಿಳಿಯದೆಯೇ ಅವರ ಮೂಲಕ ಗೌಪ್ಯ ದಾಖಲೆಗಳನ್ನು ಕಲೆಹಾಕಲಾಗಿದೆಯೇ ಎಂಬ ಆಯಾಮದಲ್ಲೂ ಸೇನಾ ಗುಪ್ತಚರ ವಿಭಾಗ ಆಂತರಿಕ ಪರಿಶೀಲನೆ ನಡೆಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ಗಾನವಿ ಬುಸ್ ಅಂದ್ರೆ ಭಯ ಬೀಳ್ತಾರಾ ತಾಂಡವ್ ರಾಮ್?
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ರಾಜ್​ ಸಂಬಂಧಿ ಮನೆಯಲ್ಲಿ ಸ್ಫೋಟ: ಸ್ಥಳ ಮಹಜರು ವೇಳೆ ಹೈಡ್ರಾಮಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಎನ್​ಡಿಎ ಪರೀಕ್ಷೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ಭದ್ರಾವತಿಯ ಶ್ರೇಯಾ
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ಬರ ಪರಿಹಾರದಲ್ಲಿ ವ್ಯತ್ಯಾಸ: ಆಕ್ರೋಶ; ಸರ್ಕಾರಕ್ಕೆ ಚೆಕ್ ಬರೆದ ಅನ್ನದಾತರು
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ರೈಲಿನಡಿ ಬಿದ್ದು ಸಾಯುತ್ತಿದ್ದ ಮಹಿಳೆಯ ಜೀವ ಕಾಪಾಡಿದ ಆರ್​ಪಿಎಫ್​ ಸಿಬ್ಬಂದಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಕೆಎಸ್‌ಆರ್‌ಟಿಸಿ ಲಗೇಜ್ ಶುಲ್ಕ ಹೆಚ್ಚಳ: ಇಂದಿನಿಂದಲೇ ಹೊಸ ದರ ಜಾರಿ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಬಿಗ್ ಬಾಸ್ ಕನ್ನಡ: ತಾಂಡವ್, ಗಗನ್ ಸ್ನೇಹದಲ್ಲಿ ಬಿರುಕು; ಇನ್ಮುಂದೆ ಬೇರೆ ಆಟ
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
ಮುಂಬೈನಲ್ಲಿ ಪಟಾಕಿ ಅಂಗಡಿಯಲ್ಲಿ ಸ್ಫೋಟ; 16 ವರ್ಷದ ಬಾಲಕ ಸಾವು
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ
7 ಮಂದಿ ಕೊಲೆ ಪ್ರಕರಣ: ಆರೋಪಿ ಇಂದುಶೇಖರ್​​ ವಿಚಾರಣೆ ಮತ್ತಷ್ಟು ತೀವ್ರ