Jammu Terror Attack: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.ಆರಂಭಿಕ ದಾಳಿಯನ್ನು ವಿಫಲಗೊಳಿಸಲಾಗಿದ್ದು, ಎನ್‌ಕೌಂಟರ್ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಗಡಿಯನ್ನು ಹೊಂದಿದೆ.

Jammu Terror Attack: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
|

Updated on:Jul 08, 2024 | 7:42 PM

ಶ್ರೀನಗರ ಜುಲೈ 08: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಥುವಾ (Kathua) ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಭಯೋತ್ಪಾದಕರು ದಾಳಿ (Terrorist Attack) ನಡೆಸಿದ್ದು ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಕಳೆದ ಎರಡು ದಿನಗಳಲ್ಲಿ ನಡೆದ ಎರಡನೇ ಉಗ್ರ ದಾಳಿ ಇದಾಗಿದೆ. ಆರಂಭಿಕ ದಾಳಿಯನ್ನು ವಿಫಲಗೊಳಿಸಲಾಗಿದ್ದು, ಎನ್‌ಕೌಂಟರ್ ನಡೆಯುತ್ತಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆ ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಗಡಿಯನ್ನು ಹೊಂದಿದೆ.

ಜಮ್ಮು ಮತ್ತು ಕಾಶ್ಮೀರದ  ಕುಲ್ಗಾಮ್ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಆರು  ಉಗ್ರರು ಹತರಾದ 24 ಗಂಟೆಗಳ ನಂತರ ಇಂದಿನ (ಸೋಮವಾರ) ದಾಳಿ ನಡೆದಿದೆ. ಶನಿವಾರ ಆರಂಭವಾದ ಎನ್‌ಕೌಂಟರ್‌ಗಳಲ್ಲಿ ಒಬ್ಬ ಪ್ಯಾರಾ ಟ್ರೂಪರ್ ಸೇರಿದಂತೆ ಇಬ್ಬರು ಸೈನಿಕರು ಸಾವಿಗೀಡಾಗಿದ್ದಾರೆ, ಮತ್ತೊಬ್ಬ ಸೈನಿಕ ಗಾಯಗೊಂಡಿದ್ದಾರೆ ಎಂದು ಪೊಲೀಸರು ಎನ್‌ಡಿಟಿವಿಗೆ ತಿಳಿಸಿದ್ದಾರೆ.

ಎಎನ್ಐ ಟ್ವೀಟ್

ಸಿಆರ್‌ಪಿಎಫ್ ಅಥವಾ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್, ಸೇನೆ ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ಭದ್ರತಾ ಪಡೆಗಳು ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಆಧಾರದ ಮೇಲೆ ಶೋಧ ಕಾರ್ಯವನ್ನು ಪ್ರಾರಂಭಿಸಿದಾಗ ಮೊದಲ ಎನ್‌ಕೌಂಟರ್ ಮೊಡೆರ್ಗಾಮ್ ಗ್ರಾಮದಲ್ಲಿ ನಡೆದಿತ್ತು.

ಈ ಕಾರ್ಯಾಚರಣೆಯು ಭಯೋತ್ಪಾದಕರು ಆಶ್ರಯ ಪಡೆದಿದ್ದ ಗುರಿಯ ಮನೆಯ ಮೇಲೆ ಪೂರ್ಣ ಪ್ರಮಾಣದ ದಾಳಿಯಾಗಿ ಉಲ್ಬಣಗೊಂಡಿತು. ಶನಿವಾರ ತಡರಾತ್ರಿಯ ವೇಳೆಗೆ ಭದ್ರತಾ ಪಡೆಗಳು ಮನೆಯನ್ನು ಧ್ವಂಸಗೊಳಿಸಿದ್ದು, ಇಬ್ಬರು ಭಯೋತ್ಪಾದಕರ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ.

ಅದೇ ಸಮಯದಲ್ಲಿ, ಕುಲ್ಗಾಮ್‌ನ ಫ್ರಿಸಲ್ ಪ್ರದೇಶದಲ್ಲಿ ಮತ್ತೊಂದು ಭೀಕರ ಫೈರಿಂಗ್ ನಡೆದಿದೆ. ಸುದೀರ್ಘ ಗುಂಡಿನ ಚಕಮಕಿಯ ನಂತರ ನಾಲ್ವರು ಭಯೋತ್ಪಾದಕರ ಶವಗಳನ್ನು ಡ್ರೋನ್ ದೃಶ್ಯಾವಳಿಗಳು ಬಹಿರಂಗಪಡಿಸಿವೆ. ಈ ಹೋರಾಟದಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ.

ಫ್ರಿಸಾಲ್‌ನಲ್ಲಿ ಗುಂಡಿಕ್ಕಿ ಕೊಲ್ಲಲ್ಪಟ್ಟ ನಾಲ್ವರನ್ನು ಯಾರ್ ಬಶೀರ್ ದಾರ್, ಜಾಹಿದ್ ಅಹ್ಮದ್ ದಾರ್, ತೌಹೀದ್ ಅಹ್ಮದ್ ರಾಥರ್ ಮತ್ತು ಶಕೀಲ್ ಅಹ್ ವಾನಿ ಎಂದು ಗುರುತಿಸಲಾಗಿದೆ. ಮದರ್ಗಾಂನಲ್ಲಿರುವ ಇಬ್ಬರನ್ನು ಫೈಸಲ್ ಮತ್ತು ಆದಿಲ್ ಎಂದು ಗುರುತಿಸಲಾಗಿದೆ.

ಪ್ಯಾರಾ ಕಮಾಂಡೋ ಮತ್ತು ಲ್ಯಾನ್ಸ್ ನಾಯಕ್ ಪ್ರದೀಪ್ ನೈನ್ ಮೊಡೆರ್ಗಾಮ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹತರಾದರು, 1 ರಾಷ್ಟ್ರೀಯ ರೈಫಲ್ಸ್‌ನ ಹವಾಲ್ದಾರ್ ರಾಜ್ ಕುಮಾರ್ ಫ್ರಿಸಲ್ ಪ್ರದೇಶದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿದ್ದಾರೆ.

ಇದನ್ನೂ ಓದಿ: ರೈಲ್ವೆ ಹಳಿಗೆ ಸಿಲುಕಿ ಮಹಿಳೆಯ ಕಾಲು ಕಟ್; ಪೈಲಟ್ ಸಮಯಪ್ರಜ್ಞೆಯಿಂದ ಉಳಿಯಿತು ಜೀವ

ರಜೌರಿ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಘಟನೆಯಲ್ಲಿ ಸೇನಾ ಶಿಬಿರದ ಬಳಿ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ. ಓರ್ವ ಯೋಧ ಗಾಯಗೊಂಡಿದ್ದು, ಆರಂಭಿಕ ವರದಿಗಳು ಮಂಜಕೋಟೆ ಸೇನಾ ಶಿಬಿರದ ಮೇಲೆ ರಾತ್ರೋರಾತ್ರಿ ಭಯೋತ್ಪಾದಕ ದಾಳಿಯ ಪ್ರಯತ್ನವನ್ನು ಸೂಚಿಸಿದ್ದರೂ, ಸೇನೆಯು ಈ ವಿವರಗಳನ್ನು ಇನ್ನೂ ಖಚಿತಪಡಿಸಿಲ್ಲ.

ಭಾನುವಾರ, ಭದ್ರತಾ ಏಜೆನ್ಸಿ ಮೂಲಗಳು, ನಿಷೇಧಿತ ಲಷ್ಕರ್-ಎ-ತೊಯ್ಬಾದ ಒಂದು ಘಟಕವಾದ ರೆಸಿಸ್ಟೆನ್ಸ್ ಫ್ರಂಟ್‌ನ ಪಾಕಿಸ್ತಾನ ಮೂಲದ ಆಪರೇಟಿವ್, ಜಮ್ಮುನಲ್ಲಿ ಭಯೋತ್ಪಾದಕ ಚಟುವಟಿಕೆಗಳ ಹಿಂದೆ ಕೈವಾಡ ಹೊಂದಿದೆ ಎಂದು ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:46 pm, Mon, 8 July 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್