ಪಶ್ಚಿಮ ಬಂಗಾಳದ ಬಂಧಿತ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಇಡಿ ವಶಕ್ಕೆ

| Updated By: ರಶ್ಮಿ ಕಲ್ಲಕಟ್ಟ

Updated on: Jul 24, 2022 | 8:45 PM

ಅರ್ಪಿತಾ ಮುಖರ್ಜಿ ಅವರನ್ನು ಜುಲೈ 23 ರಂದು ದಕ್ಷಿಣ ಕೋಲ್ಕತ್ತಾದ ಐಷಾರಾಮಿ ಅಪಾರ್ಟ್‌ಮೆಂಟ್ ಬ್ಲಾಕ್‌ನಲ್ಲಿರುವ ಅವರ ನಿವಾಸದಲ್ಲಿ ಹಲವಾರು ಗಂಟೆಗಳ ಕಾಲ ವಿಚಾರಣೆ ಮಾಡಿದ ನಂತರ ಇಡಿ ಬಂಧಿಸಿತ್ತು

ಪಶ್ಚಿಮ ಬಂಗಾಳದ ಬಂಧಿತ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ಇಡಿ ವಶಕ್ಕೆ
ಅರ್ಪಿತಾ ಮುಖರ್ಜಿ
Follow us on

ಬಂಧಿತರಾಗಿರುವ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ (Partha Chatterjee) ಅವರ ಆಪ್ತೆ ಅರ್ಪಿತಾ ಮುಖರ್ಜಿ (Arpita Mukherjee) ಅವರನ್ನು ಜುಲೈ 24 ರಂದು ನಗರ ನ್ಯಾಯಾಲಯವು ಒಂದು ದಿನಕ್ಕೆ ಜಾರಿ ನಿರ್ದೇಶನಾಲಯ (ಇಡಿ) ಕಸ್ಟಡಿಗೆ ಒಪ್ಪಿಸಿದೆ. ಅರ್ಪಿತಾ  ಮುಖರ್ಜಿ ಅವರನ್ನು ಜುಲೈ 23 ರಂದು ದಕ್ಷಿಣ ಕೋಲ್ಕತ್ತಾದ ಐಷಾರಾಮಿ ಅಪಾರ್ಟ್‌ಮೆಂಟ್ ಬ್ಲಾಕ್‌ನಲ್ಲಿರುವ ಅವರ ನಿವಾಸದಲ್ಲಿ ಹಲವಾರು ಗಂಟೆಗಳ ಕಾಲ ವಿಚಾರಣೆ  ಮಾಡಿದ ನಂತರ ಇಡಿ ಬಂಧಿಸಿತ್ತು. ಅಲ್ಲಿ ಕೋಟ್ಯಂತರ ರೂಪಾಯಿ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೇಂದ್ರ ಏಜೆನ್ಸಿಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಉಸ್ತುವಾರಿ, ಚೀಫ್ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನಮ್ರತಾ ಸಿಂಗ್ ಅವರು ಜುಲೈ 25 ರಂದು ಇಡಿ ನ್ಯಾಯಾಲಯಕ್ಕೆ ಅರ್ಪಿತಾ ಮುಖರ್ಜಿಯನ್ನು ಹಾಜರುಪಡಿಸುವಂತೆ ಸೂಚಿಸಿದ್ದಾರೆ. ಅಭಿಜಿತ್ ಭದ್ರಾ ಸೇರಿದಂತೆ ಇಡಿ ವಕೀಲರು  ಮುಖರ್ಜಿಯ 14 ದಿನಗಳ ಕಸ್ಟಡಿಗೆ ಮನವಿ ಮಾಡಿದ್ದರು. ಪಶ್ಚಿಮ ಬಂಗಾಳದ  ಕೈಗಾರಿಕೆ ಮತ್ತು ವಾಣಿಜ್ಯ ಸಚಿವರು ಆಗಿರುವ ಪಾರ್ಥ ಚಟರ್ಜಿ  ಅವರನ್ನು ಶಿಕ್ಷಕರ ನೇಮಕಾತಿ ಹಗರಣ (school jobs scam) ಆರೋಪದಲ್ಲಿ ಜುಲೈ 23ರಂದು ಬಂಧಿಸಿತ್ತು.

ಸರ್ಕಾರಿ ಪ್ರಾಯೋಜಿತ ಮತ್ತು ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತನಿಖೆಯ ಭಾಗವಾಗಿ ಇಡಿ ಸಿಬ್ಬಂದಿ ಜುಲೈ 22 ರಂದು ಪಶ್ಚಿಮ ಬಂಗಾಳದ ವಿವಿಧ ಸ್ಥಳಗಳಲ್ಲಿ ದಾಳಿ ನಡೆಸಿದ್ದರು.

Published On - 8:37 pm, Sun, 24 July 22