Arunachal Pradesh Earthquake: ಅರುಣಾಚಲ ಪ್ರದೇಶದಲ್ಲಿ 4.0 ತೀವ್ರತೆಯ ಭೂಕಂಪ

ಅರುಣಾಚಲಪ್ರದೇಶದಲ್ಲಿ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಭೂಕಂಪ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.

Arunachal Pradesh Earthquake: ಅರುಣಾಚಲ ಪ್ರದೇಶದಲ್ಲಿ 4.0 ತೀವ್ರತೆಯ ಭೂಕಂಪ
ಭೂಕಂಪ
Image Credit source: ANI

Updated on: Jul 28, 2023 | 9:44 AM

ಅರುಣಾಚಲಪ್ರದೇಶದಲ್ಲಿ ಭೂಕಂಪ(Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0 ತೀವ್ರತೆ ದಾಖಲಾಗಿದೆ. ಅರುಣಾಚಲ ಪ್ರದೇಶದ ಸಿಯಾಂಗ್​​ನ ಉತ್ತರಕ್ಕೆ ಭೂಕಂಪ ಸಂಭವಿಸಿದೆ. ಇಲ್ಲಿಯವರೆಗೆ ಭೂಕಂಪದಿಂದ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಅರುಣಾಚಲಪ್ರದೇಶದ ಸಿಯಾಂಗ್​ ಜಿಲ್ಲೆಯ ಪ್ಯಾಂಗಿನ್ ಬಳಿ ಭೂಕಂಪ ಸಂಭವಿಸಿದೆ, ಎನ್​ಸಿಎಸ್ ಪ್ರಕಾರ ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ. ಇದಕ್ಕೂ ಮುನ್ನ ಜುಲೈ 22 ರಂದು ಅರುಣಾಚಲಪ್ರದೇಶದ ತವಾಂಗ್​ನಲ್ಲಿ 3.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪ ಬೆಳಗ್ಗೆ 6.56ಕ್ಕೆ 5 ಕಿ.ಮೀ ಆಳದಲ್ಲಿ ಅಪ್ಪಳಿಸಿತ್ತು.

 

 

 

 

 

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:40 am, Fri, 28 July 23

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us