Arvind Kejriwal: ಸಿಬಿಐನಿಂದ ಕೇಜ್ರಿವಾಲ್ ಬಂಧನ; ಸಕ್ಕರೆ ಮಟ್ಟ ಕಡಿಮೆಯಾಗಿ ಕೋರ್ಟ್​ನಲ್ಲಿ ಸುಸ್ತಾದ ಸಿಎಂ

Delhi Excise Policy Scam: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ್ದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

Arvind Kejriwal: ಸಿಬಿಐನಿಂದ ಕೇಜ್ರಿವಾಲ್ ಬಂಧನ; ಸಕ್ಕರೆ ಮಟ್ಟ ಕಡಿಮೆಯಾಗಿ ಕೋರ್ಟ್​ನಲ್ಲಿ ಸುಸ್ತಾದ ಸಿಎಂ
ಅರವಿಂದ್ ಕೇಜ್ರಿವಾಲ್
Follow us
|

Updated on: Jun 26, 2024 | 2:44 PM

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ (Money Laundering Case) ಸಂಬಂಧಿಸಿದಂತೆ ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಮಂಗಳವಾರ ರಾತ್ರಿ ಸಿಬಿಐ ಜೈಲಿನಲ್ಲಿಯೇ ಬಂಧಿಸಿ ತನ್ನ ವಶಕ್ಕೆ ತೆಗೆದುಕೊಂಡಿತ್ತು. ಇಂದು ಕೋರ್ಟ್​ ಮುಂದೆ ಅವರನ್ನು ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಅವರನ್ನು ಸಿಬಿಐಗೆ ಒಪ್ಪಿಸಿದೆ. ಇಂದು ವಿಚಾರಣೆ ವೇಳೆ ಸಕ್ಕರೆ ಮಟ್ಟ ಕುಸಿತವಾಗಿ ತೀವ್ರ ಸುಸ್ತಾದ ಕೇಜ್ರಿವಾಲ್ ತಮಗೆ ತಿನ್ನಲು ಏನಾದರೂ ನೀಡುವಂತೆ ಕೋರ್ಟ್​ನಲ್ಲಿ ಮನವಿ ಮಾಡಿದ್ದಾರೆ.

ಸಿಬಿಐನಿಂದ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಅವರ ಸಕ್ಕರೆ ಮಟ್ಟ ಕಡಿಮೆಯಾದ ಕಾರಣ ನ್ಯಾಯಾಲಯದಲ್ಲಿ ಸುಸ್ತಾಗಿದ್ದರು. ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯದಲ್ಲಿ ವಿಚಾರಣೆಯ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ನ್ಯಾಯಾಧೀಶರನ್ನು ಉದ್ದೇಶಿಸಿ ಮನವಿ ಮಾಡಿದ್ದು, ನನ್ನ ದೇಹದ ಸಕ್ಕರೆ ಮಟ್ಟವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಹೀಗಾಗಿ, ಏನನ್ನಾದರೂ ತಿನ್ನಲು ಅನುಮತಿಯನ್ನು ನೀಡಬೇಕು ಎಂದು ಕೋರಿದರು.

ಇದನ್ನೂ ಓದಿ: Arvind Kejriwal: ದೆಹಲಿ ಅಬಕಾರಿ ನೀತಿ ಹಗರಣ; ಜಾಮೀನು ವಿಚಾರಣೆಗೂ ಮೊದಲೇ ಸಿಬಿಐನಿಂದ ಅರವಿಂದ್ ಕೇಜ್ರಿವಾಲ್ ಬಂಧನ

ನ್ಯಾಯಾಲಯವು ಅವನ ಮನವಿಯನ್ನು ಪುರಸ್ಕರಿಸಿತು. ಅವರನ್ನು ಕೋರ್ಟ್​ ಕಲಾಪದ ಪಕ್ಕದ ಕೋಣೆಗೆ ಕರೆದೊಯ್ಯಲು ಅವಕಾಶ ಮಾಡಿಕೊಟ್ಟಿತು. ಅಲ್ಲಿ ಅವರಿಗೆ ತಿನ್ನಲು ಏನಾದರೂ ನೀಡಬಹುದು ಎಂದು ಸೂಚಿಸಿತು. ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಅಲ್ಲಿ ಚಹಾ ಮತ್ತು ಬಿಸ್ಕತ್ತುಗಳನ್ನು ನೀಡಲಾಯಿತು. ನಂತರ ಮತ್ತೆ ವಿಚಾರಣೆ ಮುಂದುವರಿಸಲಾಯಿತು.

ಆಪಾದಿತ ಅಬಕಾರಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಧಿಕೃತವಾಗಿ ಬಂಧಿಸಲು ದೆಹಲಿ ನ್ಯಾಯಾಲಯ ಇಂದು ಸಿಬಿಐಗೆ ಅನುಮತಿ ನೀಡಿದೆ. ವಿಶೇಷ ನ್ಯಾಯಾಧೀಶ ಅಮಿತಾಭ್ ರಾವತ್ ಆದೇಶ ನೀಡಿದ ನಂತರ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ.

ಇದನ್ನೂ ಓದಿ: ಮದ್ಯನೀತಿ ಹಗರಣ: ಅರವಿಂದ್​ ಕೇಜ್ರಿವಾಲ್​ರನ್ನು ಸಿಬಿಐಗೆ ಒಪ್ಪಿಸಿದ ನ್ಯಾಯಾಲಯ

ಎಎಪಿ ನಾಯಕ ಕೇಜ್ರಿವಾಲ್ ಅವರನ್ನು ತಿಹಾರ್ ಕೇಂದ್ರ ಕಾರಾಗೃಹದಿಂದ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಕೇಂದ್ರ ತನಿಖಾ ಸಂಸ್ಥೆ (ಸಿಬಿಐ) ಈ ಅರ್ಜಿಯನ್ನು ಸಲ್ಲಿಸಿತ್ತು. ಇಡಿ ತನಿಖೆ ನಡೆಸುತ್ತಿರುವ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಜೈಲಿನಲ್ಲಿದ್ದಾರೆ.

ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ (ಜಾರಿ ನಿರ್ದೇಶನಾಲಯ) ಬಂಧಿಸಿತ್ತು. ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿತ್ತು. ಜೂನ್ 2ರಂದು ಅವರು ಮತ್ತೆ ನ್ಯಾಯಾಲಯದ ಮುಂದೆ ಶರಣಾಗಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!